Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ಜಾತ್ರಾ ಆಮಂತ್ರಣ...

ಪುತ್ತೂರು ಜಾತ್ರಾ ಆಮಂತ್ರಣ ಪತ್ರಿಕೆಯಲ್ಲಿ ಗೊಂದಲ ವಿವಾದಕ್ಕೆ ಎಡೆಮಾಡಿದ ಜಿಲ್ಲಾಧಿಕಾರಿ ಇಬ್ರಾಹೀಂ ಹೆಸರು

ವಾರ್ತಾಭಾರತಿವಾರ್ತಾಭಾರತಿ11 March 2016 9:29 PM IST
share
ಪುತ್ತೂರು ಜಾತ್ರಾ ಆಮಂತ್ರಣ ಪತ್ರಿಕೆಯಲ್ಲಿ ಗೊಂದಲ ವಿವಾದಕ್ಕೆ ಎಡೆಮಾಡಿದ ಜಿಲ್ಲಾಧಿಕಾರಿ ಇಬ್ರಾಹೀಂ ಹೆಸರು

ಪುತ್ತೂರು, ಮಾ.11: ಐತಿಹಾಸಿಕ ಕ್ಷೇತ್ರವಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯಲ್ಲಿ ದ.ಕ.ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂರ ಹೆಸರನ್ನು ಜಾತ್ರಾ ಆಹ್ವಾನಿತರೊಂದಿಗೆ ಸೇರಿಸಿರುವುದು ಗೊಂದಲ ಸೃಷ್ಟಿಸಿದೆ. ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಅಧಿಕಾರಿಯೋರ್ವರ ಹೆಸರು ಇರುವುದು ಮತ್ತು ಮುಸ್ಲಿಂ ಅಧಿಕಾರಿ ಜಾತ್ರೋತ್ಸವಕ್ಕೆ ಭಕ್ತರನ್ನು ಆಹ್ವಾನಿಸುತ್ತಿರುವುದು ವಿವಾದವಾಗಿ ಮಾರ್ಪಟ್ಟಿದೆ.
ಜಾತ್ರಾ ಆಮಂತ್ರಣ ಪತ್ರಿಕೆಯಲ್ಲಿ ಜಾತ್ರೆಗೆ ಅಹ್ವಾನಿಸುವವರಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಆಯುಕ್ತ ಆರ್.ಆರ್. ದತ್ತು, ಆಡಳಿತಾಧಿಕಾರಿ ಜಗದೀಶ್ ಎಸ್. ಮತ್ತು ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಎಂ.ಎಚ್. ರವೀಂದ್ರರೊಂದಿಗೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂರ ಹೆಸರನ್ನೂ ಸೇರಿಸಿ ಮುದ್ರಿಸಲಾಗಿದ್ದು, ಈ ಆಮಂತ್ರಣ ಪತ್ರಿಕೆಯನ್ನು ಭಕ್ತರಿಗೆ ವಿತರಿಸಲಾಗುತ್ತಿದೆ. ಇದನ್ನು ನೆಪವಾಗಿಟ್ಟು ಪುತ್ತೂರಿನ ಸಂಘ ಪರಿವಾರ ಸಂಘಟನೆಗಳು ಗುಲ್ಲೆಬ್ಬಿಸುತ್ತಿದ್ದು, ಪತ್ರಿಕಾ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿ ಮಾಡುತ್ತಿದೆ.

ಅಧಿಕಾರಿಗಳ ತಪ್ಪು:

ಎಂಡೋಮೆಂಟ್ ಕಾನೂನು ಸೆಕ್ಷನ್7ರಂತೆ ಹಿಂದೂ ದೇವಳಗಳ ಉತ್ಸವಗಳಲ್ಲಿ ಹಿಂದೂಯೇತರ ಅಧಿಕಾರಿಗಳಾಗಲೀ, ಇನ್ನಿತರ ವ್ಯಕ್ತಿಗಳಾಗಲೀ ಆಡಳಿತ ನಡೆಸುವಂತಿಲ್ಲ ಎನ್ನಲಾಗಿದ್ದು, ಹಿಂದೂಯೇತರರು ಅಧಿಕಾರಿಗಳಾಗಿದ್ದಲ್ಲಿ ದೇವಳಕ್ಕೆ ಅವರ ಅಧೀನದ ಹಿಂದೂ ಅಧಿಕಾರಿಗಳನ್ನು ನೇಮಿಸಬೇಕು ಎಂದು ಉಲ್ಲೇಖವಿದೆ. ಆದರೆ ಪುತ್ತೂರು ಮಹಾಲಿಂಗೇಶ್ವರ ದೇವಳದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾಧಿಕಾರಿಗಳ ಹೆಸರನ್ನು ಆಹ್ವಾನಿತರೊಂದಿಗೆ ಮುದ್ರಿಸುವ ಮೂಲಕ ಗೊಂದಲ ಸೃಷ್ಟಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಜಿಲ್ಲಾಧಿಕಾರಿಗಳ ಗಮನಕ್ಕೆ ಬಾರದೆ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿರುವುದಾಗಿ ಸ್ಥಳೀಯರು ಆರೋಪಿಸುತ್ತಿದ್ದು, ಎ.ಬಿ. ಇಬ್ರಾಹೀಂರ ಹೆಸರಿನ ಬದಲಿಗೆ ಜಿಲ್ಲಾಧಿಕಾರಿಗಳು ಎಂದು ಮುದ್ರಿಸಿದ್ದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಾಗುತ್ತಿರಲಿಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಇಬ್ರಾಹೀಂ ಎಂಬ ಹೆಸರು ಸಂಘ ಪರಿವಾರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಇದರಿಂದಾಗಿ ಹಿಂದೂ ಧಾರ್ಮಿಕ ಬಾವನೆಗೆ ಧಕ್ಕೆಯಾಗಿದೆ ಎಂದು ವಿಶ್ವಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದು, ಜಿಲ್ಲಾಡಳಿತ ಮತ್ತು ಸರಕಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಧಾರ್ಮಿಕ ದತ್ತಿ ಕಾನೂನಿನಂತೆ ಹಿಂದೂಯೇತರ ಅಧಿಕಾರಿಗಳನ್ನು ಹಿಂದೂ ದೇವಳದ ಆಡಳಿತಕ್ಕೆ ಬಳಸುವಂತಿಲ್ಲ. ಪುತ್ತೂರು ಜಾತ್ರಾ ಆಮಂತ್ರಣ ಪತ್ರಿಕೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ಬಾರದೆ ಅವರ ಹೆಸರನ್ನು ಬಳಸಲಾಗಿದೆ. ಹೆಸರಿನ ಬದಲು ದ.ಕ. ಜಿಲ್ಲಾಧಿಕಾರಿಗಳು ಎಂದು ಮುದ್ರಿಸಿದ್ದಲ್ಲಿ ಯಾವುದೇ ಗೊಂದಲಗಳಾಗುತ್ತಿರಲಿಲ್ಲ. ದೇವಳದ ಕಾರ್ಯನಿರ್ವಹಣಾಧಿಕಾರಿಗಳು ಮಾಡಿರುವ ಪ್ರಮಾದ ಈ ಗೊಂದಲಕ್ಕೆ ಕಾರಣವಾಗಿದೆ. ಧರ್ಮಗಳ ನಡುವೆ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಕಾರ್ಯನಿರ್ವಹಣಾಧಿಕಾರಿ ಮಾಡಿರುವ ಪ್ರಮಾದಕ್ಕೆ ಜಿಲ್ಲಾಧಿಕಾರಿಗಳನ್ನು ಮಾದ್ಯಮಗಳ ಮೂಲಕ ಅಪಮಾನ ಮಾಡುವುದು ಸರಿಯಲ್ಲ. ಜಿಲ್ಲಾಧಿಕಾರಿಗಳು ಸ್ವ ಆಸಕ್ತಿಯಿಂದ ತಮ್ಮ ಹೆಸರು ಹಾಕಿಸಿಕೊಂಡಿಲ್ಲ ಎಂದು ಎಲ್ಲರೂ ಅರ್ಥಮಾಡಿಕೊಳ್ಳಬೇಕಾಗಿದೆ. ಧಾರ್ಮಿಕ ದತ್ತಿ ಕಾನೂನಿನಂತೆ ಕ್ರಮ ಕೈಗೊಂಡು ಗೊಂದಲ ನಿವಾರಿಸಬೇಕು.

ಕಾವು ಹೇಮನಾಥ ಶೆಟ್ಟಿ
ಮಾಜಿ ಆಡಳಿತ ಮೊಕ್ತೇಸರರು
ಕಾವು ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ


ಎಂಡೋಮೆಂಟ್ ಕಾನೂನಿನಲ್ಲಿ ಹಿಂದೂಯೇತರ ಅಧಿಕಾರಿಗಳು ದೇವಳದಲ್ಲಿ ನಿರ್ಧಾರ ಕೈಗೊಳ್ಳುವಂತಿಲ್ಲ. ಪುತ್ತೂರು ಜಾತ್ರೆಯ ಆಮಂತ್ರಣ ಪತ್ರಿಕೆ ಮುದ್ರಣದಲ್ಲಿ ಜಿಲ್ಲಾಧಿಕಾರಿಯವರ ತಪ್ಪಿಲ್ಲ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಯರದ್ದೂ ತಪ್ಪಿಲ್ಲ. ದೇವಳದ ಕಾರ್ಯನಿರ್ವಹಣಾಧಿಕಾರಿ ತಪ್ಪು ಮಾಡಿದ್ದಾರೆ. ಈಗಾಗಲೇ ಸಹಾಯಕ ಜಿಲ್ಲಾಧಿಕಾರಿಗಳು ದೇವಳದ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುತ್ತಿದ್ದು, ಅವರ ಹೆಸರನ್ನು ಹಾಕಬಹುದಿತ್ತು. ಅಥವಾ ಜಿಲ್ಲಾಧಿಕಾರಿಗಳ ಪದನಾಮವನ್ನು ಮಾತ್ರ ಬಳಸಬಹುದಿತ್ತು. ಆದರೆ ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಜನರನ್ನು ತಪ್ಪು ದಾರಿಗೆ ಎಳೆಯುವ ಬದಲು ಆಮಂತ್ರಣ ಪತ್ರಿಕೆಯನ್ನು ಬದಲಾಯಿಸಿ ಮರು ಮುದ್ರಣಗೊಳಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು.

ರವಿಪ್ರಸಾದ್ ಶೆಟ್ಟಿ ಬನ್ನೂರು
ಶ್ರೀ ಮಹಾಲಿಂಗೇಶ್ವರ ದೇವಳದ ಭಕ್ತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X