ರಾಷ್ಟ್ರೀಯತೆಗೆ ಕೇಂದ್ರ ಸರಕಾರದ ಆದ್ಯತೆ: ಸಚಿವ ಬಂಡಾರು

ಬೆಂಗಳೂರು, ಮಾ. 11: ದೇಶದ ಭದ್ರತೆ ಮತ್ತು ಸಮಗ್ರತೆ ಬಹಳ ಮುಖ್ಯ. ಆ ವಿಚಾರದಲ್ಲಿ ರಾಜಕೀಯಕ್ಕಿಂತಲೂ ರಾಷ್ಟ್ರೀಯತೆ ಅಗತ್ಯ. ಆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರಾಷ್ಟ್ರೀಯತೆಗೆ ವಿಶೇಷ ಆದ್ಯತೆ ನೀಡಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ತಿಳಿಸಿದ್ದಾರೆ.
ಶುಕ್ರವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತನಾಡಿದ ಅವರು, ಕೇಂದ್ರ ಸರಕಾರವನ್ನು ಎದುರಿಸಲಾಗದೆ ಕಾಂಗ್ರೆಸ್ ಜೆಎನ್‌ಯು ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.
ಜೆಎನ್‌ಯು ಪ್ರಕರಣ ಕೇಂದ್ರ ಸರಕಾರ ಅಥವಾ ಬಿಜೆಪಿಗಾಗಲಿ ಯಾವುದೇ ಧಕ್ಕೆಯಾಗಿಲ್ಲ. ಆದರೆ, ಈ ವಿಚಾರದಲ್ಲಿ ಕಾಂಗ್ರೆಸ್ ನಿಜಬಣ್ಣ ಬಯಲಾಗಿದೆ ಎಂದ ಅವರು, ಅಫ್ಝಲ್ ಗುರು ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾನನ್ನು ಬಂಧಿಸಲಾಗಿತ್ತು. ಆದರೆ, ಕೋರ್ಟ್ ಸೂಕ್ತ ಸಾಕ್ಷಾಧಾರಗಳಿಲ್ಲ ಎಂಬ ಕಾರಣಕ್ಕೆ ಆತನಿಗೆ ಜಾಮೀನು ನೀಡಿದೆ ಎಂದರು.
Next Story





