Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರ್ಯಾಯ ವ್ಯವಸ್ಥೆಯಿದ್ದರೆ ತಿಳಿಸಿ: ಸಚಿವ...

ಪರ್ಯಾಯ ವ್ಯವಸ್ಥೆಯಿದ್ದರೆ ತಿಳಿಸಿ: ಸಚಿವ ಕಿಮ್ಮನೆ

ಶಾಲಾ ಮಕ್ಕಳಿಗೆ ಶೂ ವಿತರಣೆ

ವಾರ್ತಾಭಾರತಿವಾರ್ತಾಭಾರತಿ11 March 2016 11:04 PM IST
share

ಬೆಂಗಳೂರು, ಮಾ. 11: ಶಾಲಾ ಅಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ಮೂಲಕ ಶಾಲೆಗಳಲ್ಲಿ ಶೂ ವಿತರಿಸುವ ಕ್ರಮ ಹೆಚ್ಚು ಪಾರದರ್ಶಕವಾಗಿದ್ದು, ಇದಕ್ಕೆ ಪರ್ಯಾಯವಾದ ವ್ಯವಸ್ಥೆಯಿದ್ದಲ್ಲಿ ಅದನ್ನು ಜಾರಿಗೊಳಿಸಲು ಚಿಂತನೆ ಮಾಡಲಾಗುವುದೆಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ.
 ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 170 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಈ ಯೋಜನೆಗೆ ಮೀಸಲಿಡಲಾಗಿತ್ತು. ಸಿಂಗಲ್ ಟೆಂಡರ್ ಕರೆದು ಗುತ್ತಿಗೆದಾರರಿಗೆ ಶೂ ವಿತರಿಸುವ ಕೆಲಸ ನೀಡುವ ಬದಲು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಮೂರು ತಿಂಗಳಲ್ಲಿ ಸಮಿತಿಗಳು ಇಲಾಖೆಗೆ ಬಿಲ್ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಕಡಿಮೆ ದರದ ಜತೆಗೆ ಗುಣಮಟ್ಟದ, ಬಾಳಿಕೆ ಬರುವ ಶೂಗಳನ್ನು ಮಕ್ಕಳಿಗೆ ನೀಡಬೇಕು. ಮುಖ್ಯ ಶಿಕ್ಷಕರ ನೇತೃತ್ವದ ಕನಿಷ್ಠ 5 ಪೋಷಕರ ಸಮಿತಿ ಸ್ಥಳೀಯ ಮಟ್ಟದಲ್ಲಿ ಶೂ ವಿತರಣೆ ಪ್ರಕ್ರಿಯೆ ನಡೆಯಲಿದೆ. ರಾಜ್ಯ ಸರಕಾರ ಕೈಗೊಂಡಿರುವ ಕ್ರಮ ಪಾರದರ್ಶಕವಾಗಿದೆ. ಇದಕ್ಕಿಂತ ಸೂಕ್ತ ವ್ಯವಸ್ಥೆ ಎಲ್ಲೂ ದೊರೆಯಲು ಸಾಧ್ಯವಿಲ್ಲ ಎಂದ ಅವರು, ಇದಕ್ಕೆ ಪರ್ಯಾಯವಾದ ವ್ಯವಸ್ಥೆಯಿದ್ದರೆ ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ರಾಜ್ಯಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ಆರೋಪ ಸಚಿವರ ಮೇಲೆಯೇ ಕೇಳಿಬರುತ್ತದೆ. ಹೀಗಾಗಿ, ತಮ್ಮ ಮಕ್ಕಳಿಗೆ ಶೂ ಆಯ್ಕೆ ಮಾಡುವ ಅಧಿಕಾರವನ್ನು ಪೋಷಕರಿಗೇ ನೀಡಲಾಗಿದೆ. ಈ ಕ್ರಮದ ಮಾರ್ಗಸೂಚಿ ಮೀರಿದರೆ ರಾಜ್ಯ ಸರಕಾರಕ್ಕೆ ಕ್ರಮ ಕೈಗೊಳ್ಳಲು ಅಧಿಕಾರವಿದೆ ಎಂದು ಹೇಳಿದರು.
ಬೇಸಿಗೆ ಮತ್ತು ಮಳೆಗಾಲಕ್ಕೆ ಅನುಕೂಲವಾಗುವ ಸೆಮಿ ಕ್ಯಾನ್ವಾಸ್ ಶೂಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಮಲೆನಾಡು ಹಾಗೂ ಬಯಲುಸೀಮೆ ಸೇರಿದಂತೆ ಎಲ್ಲ ಪ್ರದೇಶದ ಮಕ್ಕಳಿಗೆ ಇದರಿಂದ ನೆರವಾಗಲಿದೆ. ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಶೂ ನೀಡುತ್ತಿರುವುದರಿಂದ ಮಕ್ಕಳಿಗೆ ಈ ವರ್ಷಾಂತ್ಯದಲ್ಲೇ ಹೊಸ ಶೂ ದೊರೆಯಲಿದೆ. ಹಳೆ ಶೂ ಸೇರಿದಂತೆ ವರ್ಷಾಂತ್ಯದಲ್ಲಿ ಮಕ್ಕಳಿಗೆ ಎರಡು ಜತೆ ಶೂ ಲಭ್ಯವಾಗಲು ಈ ಸಮಯ ಆರಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಶಿಕ್ಷಣ ಸಚಿವನಾಗಿ ಶೇ.76 ರಷ್ಟು ಸಾಧನೆ ಮಾಡಿದ್ದು, ಹಿಂದಿನ ಸಚಿವರ ಶೇ.56 ಸಾಧನೆಗಿಂತಲೂ ಇದು ಉತ್ತಮವಾಗಿದೆ. ಇಲಾಖೆಯಲ್ಲಿ ಸೂಕ್ತವಾಗಿ ಕಡತ ವಿಲೇವಾರಿಯಾಗುತ್ತಿಲ್ಲ ಎಂದು ಹಿಂದಿನ ಸಚಿವರು ಟೀಕಿಸುತ್ತಿದ್ದಾರೆ. ಆದರೆ, ನನ್ನ ಸಾಧನೆ ಶೇ.76 ರಷ್ಟಾಗಿದೆ. ಶೇ.56ಕ್ಕಿಂತ ಶೇ.76 ದೊಡ್ಡದು ಎಂಬುದು ನನಗೆ ತಿಳಿದಿದೆ ಎಂದು ಕಿಮ್ಮನೆ ಹೇಳಿದರು.
ಎ.6ಕ್ಕೆ ಚರ್ಚೆ: ಸಮೀಪದಲ್ಲಿ ಸರಕಾರಿ ಶಾಲೆಯಿದ್ದರೆ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಅಡಿ ಮೀಸಲು ಸೀಟು ನೀಡಲು ಸಾಧ್ಯವಿಲ್ಲ ಎಂಬ ನೀತಿ ಪಂಜಾಬ್ ರಾಜ್ಯದಲ್ಲಿದೆ ಎಂದ ಅವರು, ಎ.6 ರಂದು ರಾಜ್ಯದಲ್ಲಿರುವ ಆರ್‌ಟಿಇ ಬಗ್ಗೆ ಅಧ್ಯಯನ ಮಾಡಲು ಪಂಜಾಬ್‌ನ ಅಧಿಕಾರಿಗಳು ಬರಲಿದ್ದು, ಈ ಸಂಬಂಧ ಚರ್ಚಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X