ಪಿಯುಸಿ ಪರೀಕ್ಷೆ: ಉಡುಪಿ-7 ಗೈರು
ಉಡುಪಿ, ಮಾ.11: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದು ಜಿಲ್ಲೆಯ 29 ಕೇಂದ್ರಗಳಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನ ನಡೆದ ಜೀವಶಾಸ್ತ್ರ ಹಾಗೂ ಎಲೆಕ್ಟ್ರಾನಿಕ್ಸ್ ಪರೀಕ್ಷೆಗಳಿಗೆ 7 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಬಿ.ನಾಯಕ್ ತಿಳಿಸಿದ್ದಾರೆ.
ಜೀವಶಾಸ್ತ್ರ ಪರೀಕ್ಷೆಗೆ 2,430 ಮಂದಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿ ಕೊಂಡಿದ್ದು, ಇವರಲ್ಲಿ 2,423 ಮಂದಿ ಪರೀಕ್ಷೆ ಬರೆದು ಏಳು ಮಂದಿ ಗೈರು ಹಾಜರಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಪರೀಕ್ಷೆಗೆ ನೋಂದಾಯಿತರಾಗಿದ್ದ ಎಲ್ಲಾ 64 ಮಂದಿ ವಿದ್ಯಾರ್ಥಿಗಳೂ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದವರು ಹೇಳಿದ್ದಾರೆ.
Next Story





