Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎತ್ತಿನಹೊಳೆ ಯೋಜನೆಯ ಬಗ್ಗೆ ವೈಜ್ಞಾನಿಕ...

ಎತ್ತಿನಹೊಳೆ ಯೋಜನೆಯ ಬಗ್ಗೆ ವೈಜ್ಞಾನಿಕ ನಿರ್ಧಾರ ಜಾರಿಗೆ ಬರಲಿ:ಟಿ.ಎ.ನಾರಾಯಣ ಗೌಡ

ವಾರ್ತಾಭಾರತಿವಾರ್ತಾಭಾರತಿ13 March 2016 4:23 PM IST
share
ಎತ್ತಿನಹೊಳೆ ಯೋಜನೆಯ ಬಗ್ಗೆ ವೈಜ್ಞಾನಿಕ ನಿರ್ಧಾರ ಜಾರಿಗೆ ಬರಲಿ:ಟಿ.ಎ.ನಾರಾಯಣ ಗೌಡ

ಮಂಗಳೂರು, ಮಾ.13: ಎತ್ತಿನಹೊಳೆ ಯೋಜನೆಯ ಬಗ್ಗೆ ವೈಜ್ಞಾನಿಕ ನಿರ್ಧಾರ ಜಾರಿಗೆ ಬರಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಅಭಿಪ್ರಾಯಿಸಿದ್ದಾರೆ.
 ಅವರು ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎತ್ತಿನಹೊಳೆ ಹೆಸರಿನಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರು ಅಲ್ಲೊಂದು- ಇಲ್ಲೊಂದು ಹೇಳಿಕೆ ನೀಡುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿಯ ಅಲ್ಲಿಯ ನಾಯಕರು ಎತ್ತಿನಹೊಳೆ ಪರ ಮಾತನಾಡಿದರೆ, ಇಲ್ಲಿಯ ನಾಯಕರು ವಿರೋಧ ವ್ಯಕ್ತಪಡಿಸುತ್ತಾರೆ. ಕಾಂಗ್ರೆಸ್ ನಾಯಕರೂ ಇದೇ ರೀತಿ ವರ್ತಿಸುತ್ತಾರೆ. ಜನರನ್ನು ಎತ್ತಿಕಟ್ಟುವ ಕೆಲಸ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಎತ್ತಿನಹೊಳೆ ವಿಚಾರದಲ್ಲಿ ಸರಕಾರವು ಯಾವುದೇ ಒಂದು ಭಾಗದ ಜನರ ಪರವಾಗಿ ನಿಲ್ಲಬಾರದು. ಈ ನಿಟ್ಟಿನಲ್ಲಿ ತಾನು ನೀರಾವರಿ ಸಚಿವ ಎಂ.ಬಿ.ಪಾಟೀಲ್‌ರೊಂದಿಗೆ ಮಾತನಾಡಿದ್ದೇನೆ. ಕರಾವಳಿ ಭಾಗದ ಜನಪ್ರತಿನಿಧಿಗಳು, ತಜ್ಞರನ್ನು ಕರೆದು ಸಭೆ ನಡೆಸಲು ಸಲಹೆ ನೀಡಿದ್ದು, ಮಾ.21ರಂದು ಸಭೆ ನಡೆಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ನೆರೆಯ ರಾಜ್ಯಗಳಲ್ಲಿ ಪಾದೇಶಿಕ ಪಕ್ಷಗಳ ಶಕ್ತಿ ಗಮನಿಸಿದರೆ ರಾಜ್ಯದಲ್ಲೂ ಪ್ರಾದೇಶಿಕ ಪಕ್ಷ ಸ್ಥಾಪನೆ ಅನಿವಾರ್ಯ ಎಂದೆನಿಸುತ್ತಿದೆ. ಜೆಡಿಎಸ್ ನಿರ್ಧಾರಗಳು ಪ್ರಾದೇಶಿಕವಾಗಿ ಉಳಿಯುವ ಬಗ್ಗೆ ಸಂಶಯ ಮೂಡುತ್ತಿದೆ. ಕರವೇಯಿಂದ ರಾಜಕೀಯ ಪಕ್ಷದ ಸ್ಥಾಪನೆ ಚಿಂತನೆ ಇದ್ದರೂ, ಅಂತಿಮ ನಿರ್ಧಾರ ಆಗಿಲ್ಲ. ನಮ್ಮಲ್ಲಿ ಬೂತ್ ಮಟ್ಟದ ಕಾರ್ಯಕರ್ತರಿದ್ದು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ 750 ಮಂದಿ ಗೆದ್ದಿದ್ದಾರೆ. ಪಕ್ಷ ಕಟ್ಟುವುದನ್ನು ಸಾರ್ವಜನಿಕರಿಗೆ ಬಿಟ್ಟಿದ್ದೇವೆ ಎಂದರು.

ದಕ್ಷಿಣ ಕನ್ನಡದಲ್ಲಿ ದೊಡ್ಡ ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡುತ್ತಿಲ್ಲ ಎಂಬ ಆರೋಪವಿದೆ. ಡಾ.ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ಕೊಡಬೇಕು. ಶೇ.75ರಷ್ಟು ಉದ್ಯೋಗ ನೀಡಬೇಕು ಎಂಬುದು ನಮ್ಮ ಹೋರಾಟ. ಮಂಗಳೂರಿನಲ್ಲಿ ಕೆಲವು ನಾಮಲಕ ಮಲೆಯಾಳದಲ್ಲಿ ಬರೆದಿರುವುದು ಕಂಡುಬರುತ್ತಿದ್ದು, ಇದರಿಂದ ಕನ್ನಡಕ್ಕೆ ಹೊಡೆತ ಬೀಳುತ್ತಿದೆ ಎಂದು ಅವರು ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಅಶ್ವಿನಿ ಗೌಡ, ಜಿಲ್ಲಾಧ್ಯಕ್ಷ ಅನಿಲ್‌ದಾಸ್, ಮುಖಂಡರಾದ ರಹೀಂ ಉಚ್ಚಿಲ್, ಬಸವರಾಜ್ ಪಡುಕೋಡಿ, ನಝೀರ್ ಹುಸೈನ್ ಬೇಂಗ್ರೆ, ಜಗದೀಶ್ ಅರಸ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X