ಹೊಸಕೋಟೆ: ಇಬ್ಬರು ಯುವತಿಯರ ಆತ್ಮಹತ್ಯೆ
ಬೆಂಗಳೂರು, ಮಾ.13: ಇಬ್ಬರು ಯುವತಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಆವಲಹಳ್ಳಿಯ ಶ್ರೀರಾಮಬಡಾವಣೆಯ ನಿವಾಸಿಗಳಾದ ಸುಮಿತ್ರಾ(18) ಹಾಗೂ ಹರಿತಾ (17) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಆವಲಹಳ್ಳಿ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





