ಕಲ್ಲಡ್ಕ: ಬಸ್ ಪಲ್ಟಿ - ಡ್ರೈವರ್, ಕಂಡೆಕ್ಟರ್ ಪಾರು

ಬಂಟ್ವಾಳ: ಗೇರೇಜ್ ವೊಂದರಲ್ಲಿ ದುರಸ್ಥಿ ಕಾರ್ಯ ಪೂರ್ಣಗೊಳಿಸಿ ತೆರಳುತ್ತಿದ್ದ ಬಸ್ಸೊಂದು ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಬಸ್ ಗ್ಯಾರೇಜಿನಲ್ಲಿ ದುರಸ್ತಿ ಕಾರ್ಯ ಮುಗಿಸಿ ಹೋಗುತ್ತಿದ್ದ ಕಾರಣ ಬಸ್ ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಆದರೆ, ಬಸ್ ನಲ್ಲಿದ್ದ ಡ್ರೈವರ್ ಹಾಗೂ ಕಂಡೆಕ್ಟರ್ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Next Story





