ಪುತ್ತೂರು: ಮಾ.19: ಹಿರಿಯ ನಾಗರಿಕರ ಹಿತರಕ್ಷಣಾ ಸಂಘ ಕಚೇರಿ ಉದ್ಘಾಟನೆ
ಪುತ್ತೂರು: ಪುತ್ತೂರಿನ ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ನೂತನ ಕಚೇರಯನ್ನು ಮಾ.19ರಂದು ನಗರ ಸಭೆಯ ಸಮುದಾಯ ಭವನದಲ್ಲಿ ಉದ್ಘಾಟಿಸಲಾಗುವುದು ಎಂದು ಸಂಘದ ಅಧ್ಯಕ್ಷ ಬಿ.ಎಸ್.ಕುಲಾಲ್ ತಿಳಿಸಿದ್ದಾರೆ. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ದೀಪ ಪ್ರಜ್ವಲನ ಮಾಡಲಿದ್ದಾರೆ. ಉಪವಿಭಾಗಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಬಿ.ಎಸ್.ಕುಲಾಲ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರ ಸಭಾ ಪ್ರಭಾರ ಅಧ್ಯಕ್ಷ ಜೀವಂಧರ್ ಜೈನ್ ಮತ್ತು ಪೌರಾಯುಕ್ತೆ ರೇಖಾ ಜೆ.ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ಉಪಾಧ್ಯಕ್ಷ ರಾಮಯ್ಯ ನಾಯ್ಕಿ, ಕೋಶಾಧಿಕಾರಿ ಕೆ.ಪಿ. ಜನಾರ್ಧನ ಉಪಸ್ಥಿತರಿದ್ದರು.
Next Story





