ರಾಜು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದವರ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ
ಪೊಲೀಸರಿಂದ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್

ಮೈಸೂರು, ಮಾ.14:ರವಿವಾರ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ರಾಜು ಅವರ ಮೃತದೇಹದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ವಾಪಸಾಗುತಿದ್ದ ನೂರಾರು ಮಂದಿಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಕ್ಯಾತಮಾರನಹಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ರಾಜು ಮೃತದೇಹವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುದು ಅಂತ್ಯಕ್ರಿಯೆ ನಡೆಸಲಾಯಿತು. ಮೆರವಣಿಗೆಯ ವೇಳೆಯಲ್ಲೂ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿತ್ತು. ಮೈಸೂರು ನಗರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ.
Next Story





