Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿದಿರು, ಮಣ್ಣು ಬಳಸಿ ಕಟ್ಟಡ ನಿರ್ಮಾಣ

ಬಿದಿರು, ಮಣ್ಣು ಬಳಸಿ ಕಟ್ಟಡ ನಿರ್ಮಾಣ

ಪಿರಿಯಾಪಟ್ಟಣದಲ್ಲಿ ಪರಿಸರ ಸ್ನೇಹಿ ಅಂಗನವಾಡಿ

ವಾರ್ತಾಭಾರತಿವಾರ್ತಾಭಾರತಿ14 March 2016 10:51 PM IST
share
ಬಿದಿರು, ಮಣ್ಣು ಬಳಸಿ ಕಟ್ಟಡ ನಿರ್ಮಾಣ

ರಮೇಶ್ ಎಚ್.ಡಿ.
 ಪಿರಿಯಾಪಟ್ಟಣ, ಮಾ.14: ಬಿದುರು, ಮಣ್ಣು ಮತ್ತು ಜೆಲ್ಲಿಪುಡಿ ಬಳಸಿಕೊಂಡು ವಿನೂತನ ಪ್ರಯೋಗದೊಂದಿಗೆ ನೂತನ ಅಂಗನವಾಡಿ ಕಟ್ಟಡವನ್ನು ಅತ್ಯಂತ ಗುಣಮಟ್ಟದಲ್ಲಿ ತಾಲೂಕಿನ ಮಳಗನಕೆರೆ ಗಿರಿಜನ ಹಾಡಿಯಲ್ಲಿ ನಿರ್ಮಿಸಲಾಗಿದೆ.

ಕಳೆದ 2 ವರ್ಷಗಳ ಹಿಂದೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಗಿರಿಜನ ಉಪಯೋಜನಾಡಿಯಲ್ಲಿ ಕ್ರೂಢೀಕರಿಸಿದ ಅನುದಾನದೊಂದಿಗೆ ಈ ಕಾಮಗಾರಿ ನಡೆಸಲಾಗಿದ್ದು, ಅಂದಾಜು ವೆಚ್ಚ 8.26ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಮೈಸೂರಿನ ಎನ್‌ಐಇಬಿಇ ಕಾಲೇಜಿನ ತಾಂತ್ರಿಕ ಸಹಾಯದೊಂದಿಗೆ ಈ ಕಟ್ಟಡದ ಕಾಮಗಾರಿ ನಡೆದಿದ್ದು, 20ವರ್ಷಗಳ ಕಾಲ ಇದರ ಉಪಯೋಗ ಪಡೆಯಬಹುದಾಗಿದೆ. ಆದ್ದರಿಂದ ಉತ್ತಮ ನಿರ್ವಹಣೆಯೊಂದಿಗೆ ಬಳಸಿಕೊಳ್ಳಬೇಕೆಂದು ಕಟ್ಟಡದ ಕಾರ್ಮಿಕ ಜೋಸೆಫ್ ಸಲಹೆ ನೀಡಿದ್ದಾರೆ.
ಕಟ್ಟಡ ನಿರ್ಮಾಣದ ವಿವರ: ಸಂಪೂರ್ಣ ಅಂಗನವಾಡಿ ಕಟ್ಟಡವನ್ನು ಸುಮಾರು 64 ಚ.ಮೀ. ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದ್ದು, ಸ್ಥಳೀಯವಾಗಿ ದೊರೆಯುವ ಬಿದಿರನ್ನೇ ಉಪಯೋಗಿಸಲಾಗಿದೆ. ಕುಟ್ಟೆ ಮತ್ತಿತರೆ ಮರಗಳಿಗೆ ಕಾಡುವ ಕೀಟ, ರೋಗಗಳಿಂದ ರಕ್ಷಿಸುವ ಸಲುವಾಗಿ ಬಿದಿರನ್ನು ಬೊರೆಕ್ಸ್‌ನಿಂದ ಚಿಕಿತ್ಸೆಗೊಳಪಡಿಸಲಾಗಿದೆ.
ಗೋಡೆಗಳನ್ನು ಕಟ್ಟುವಾಗ ಬಿದಿರಿನ ಜಾಲರಿ ನಿರ್ಮಿಸಿ ಅದಕ್ಕೆ ಹದ ಮಾಡಿದ ಮಣ್ಣಿನಿಂದ ನಿರ್ಮಿಸಲಾಗಿದ್ದು, ಈ ಯೋಜನೆಯ ಮುಖ್ಯ ಕಾರಣವೆಂದರೆ ಸ್ಥಳೀಯವಾಗಿ ದೊರೆಯುವ ವಸ್ತುಗಳು, ಜ್ಞಾನ ಹಾಗೂ ಕೌಶಲ್ಯವನ್ನು ಉಪಯೋಗಿಸಿ ಸ್ಥಳೀಯ ಗಿರಿಜನ ಸಮುದಾಯವನ್ನು ಸಶಕ್ತಗೊಳಿಸುವುದಾಗಿದೆ.
ಈ ಅಂಗನವಾಡಿ ಕೇಂದ್ರವನ್ನು ಗಿರಿಜನರು ಸದುಪಯೋಗಿಸಿಕೊಳ್ಳುವ ಸಲುವಾಗಿ ನಿರ್ಮಿತಿ ಕೇಂದ್ರವು ಸರಳ, ನಿರ್ವಹಣೆರಹಿತ ಸೋಲಾರ್ ಉಪಕರಣಗಳನ್ನು ಹಾಗೂ ಮಳೆ ಕೊಯ್ಲು ಪದ್ಧತಿಯನ್ನು ಅಳವಡಿಸಿದ್ದು, ಇದು ವಿದ್ಯುತ್ ಹಾಗೂ ನೀರಿನ ಕೊರತೆಯನ್ನು ನೀಗಿಸುತ್ತದೆ. ಜೊತೆಗೆ ಬಿದಿರನ್ನೇ ಉಪಯೋಗಿಸಿ ಕೇಂದ್ರದ ಸುತ್ತಲೂ ಬೇಲಿಯನ್ನು ನಿರ್ಮಿಸಿದ್ದು, ಅದಕ್ಕೆ ಸ್ಥಳೀಯ ಬೇಲಿಗಿಡಗಳಾದ ಜತ್ರೋಪ ಹಾಗೂ ಗ್ರೀಸ್ ಕಡ್ಡಿಗಳನ್ನು ಉಪಯೋಗಿಸಿ ಹಸಿರು ಬೇಲಿಯನ್ನು ಹಾಕಲಾಗಿದೆ. ಕೇಂದ್ರದ ಹಿಂಭಾಗದಲ್ಲಿ ಅಂಗನವಾಡಿ ಮಕ್ಕಳ ಊಟಕ್ಕಾಗಿ ತಾಜಾ ತರಕಾರಿಗಳನ್ನು ಬೆಳೆಯುವ ಸಲುವಾಗಿ ಅಡುಗೆಮನೆ ಕೈತೋಟವನ್ನು ನಿರ್ಮಿಸಲಾಗಿದೆ. ಮಕ್ಕಳ ಕಲೆಗಳನ್ನು ಉತ್ತೇಜಿಸುವ ಸಲುವಾಗಿ ವರ್ತುಲ ಕ್ರೀಡಾಂಗಣ ನಿರ್ಮಿಸಲಾಗಿದೆ. ಹಾಗೂ ಸ್ಥಳೀಯ ಸಮುದಾಯದ ಪರಸ್ಪರ ಅಭಿಪ್ರಾಯ ವಿನಿಮಯಕ್ಕಾಗಿ ಜಾಗವನ್ನು ಮೀಸಲಿರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X