ಸಿಎಂ ವಾಚ್ ಪ್ರಕರಣ: ಅರ್ಜಿ ವಜಾ
ಬೆಂಗಳೂರು, ಮಾ.14: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಡುಗೆಯಾಗಿ ನೀಡಲಾಗಿದೆ ಎನ್ನಲಾದ ಹ್ಲೂಬ್ಲೋಟ್ ವಾಚ್ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ.
ವಕೀಲ ನಟರಾಜ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಕೊಡುಗೆ ರೂಪದಲ್ಲಿ ಬಂದಿರುವ 70 ಲಕ್ಷ ರೂ. ಮೌಲ್ಯದ ಹ್ಲೂಬ್ಲೋಟ್ ವಾಚ್‌ನ್ನು ವಶಪಡಿಸಿಕೊಂಡು ತಮ್ಮ ಸುಪರ್ದಿಯಲ್ಲಿಟ್ಟುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶಿಸಬೇಕು. ಹಾಗೂ ಯಾವುದೇ ಕಾರಣಕ್ಕೂ ಮಾರಾಟ ಮಾಡದಂತೆ ನಿರ್ದೇಶಿಸಲು ಅರ್ಜಿಯಲ್ಲಿ ಕೋರಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು ಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ ಪುನಃ ಮನವಿ ಸಲ್ಲಿಸಲು ಸೂಚನೆಯನ್ನು ನೀಡಿ, ಅರ್ಜಿಯನ್ನು ವಜಾಗೊಳಿಸಿತು.
Next Story





