ಸುಳ್ಯ: ಬೀರಮಂಗಲ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಚಾಲನೆ

ಸುಳ್ಯ: ಬೀರಮಂಗಲದಲ್ಲಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ ನಡೆಯಿತು. ಸೈಂಟ್ ಜೋಸೆಫ್ ಚರ್ಚಿನ ಧರ್ಮಗುರು ಫಾದರ್ ವಿನ್ಸೆಂಟ್ ಡಿ ಸೋಜ ತೆಂಗಿನ ಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಮೋಹಿನಿ ನಾಗರಾಜ್, ಸದಸ್ಯರಾದ ಸುನೀತಾ ಮೊಂತೇರೋ, ಗೋಪಾಲ ನಡುಬೈಲು, ಗಿರಿಶ್ ಕಲ್ಲುಗದ್ದೆ, ಕಿರಣ ಕುರುಂಜಿ ಮೊದಲಾದವರಿದ್ದರು.
5 ಲಕ್ಷದ 30 ಸಾವಿರ ವೆಚ್ಚದಲ್ಲಿ ನಾಲ್ಕೂವರೆ ಮೀಟರ್ ಅಗಲಕ್ಕೆ ಕಾಂಕ್ರೀಟೀಕರಣ ಹಾಗೂ 20 ಮೀಟರ್ ಕಾಂಕ್ರೀಟ್ ಚರಂಡಿಯನ್ನು ನಿರ್ಮಿಸಲಾಗುತ್ತದೆ. 10ರಿಂದ 15 ದಿನಗಳ ಕಾಲ ವಾಹನ ಸಂಚಾರವನ್ನು ಈ ರಸ್ತೆಯಲ್ಲಿ ನಿಷೇಧಿಸಲಾಗಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
Next Story





