Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:...

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್

ರಾಜು ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ15 March 2016 10:58 PM IST
share
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.15: ಆರೆಸ್ಸೆಸ್ ಕಾರ್ಯಕರ್ತ ರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದು, ಶೀಘ್ರವೇ ತಪ್ಪಿತಸ್ಥರನ್ನು ಬಂಧಿಸಿ, ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 ಮಂಗಳವಾರ ವಿಕಾಸಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಬಿಜೆಪಿ ಶಾಸಕರ ನಿಯೋಗ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ಬಂಧನಕ್ಕಾಗಿ ಸಿಸಿಬಿ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದಾರೆ ಎಂದರು.
ಮೃತ ರಾಜು ಕುಟುಂಬಕ್ಕೆ ಸಾಂತ್ವನ ಹೇಳಲು ಮೈಸೂರಿಗೆ ತೆರಳುತ್ತಿದ್ದು, ನನ್ನೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬರಲಿದ್ದಾರೆ. ಅಲ್ಲದೆ, ರಾಜು ಕುಟುಂಬಕ್ಕೆ ಸರಕಾರದ ವತಿಯಿಂದ 5 ಲಕ್ಷ ರೂ.ಪರಿಹಾರ ಧನವನ್ನು ನೀಡಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಘಟನೆ ನಡೆದ ಸ್ಥಳದಲ್ಲಿ ಲಭ್ಯವಾಗಿರುವ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪೊಲೀಸರು ತೆಗೆದುಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಹತ್ಯೆಯ ಹಿಂದೆ ಯಾವುದೇ ವ್ಯಕ್ತಿ, ಸಂಘಟನೆಯಿರಲಿ ಮೃದುಧೋರಣೆ ತಾಳುವುದಿಲ್ಲ. ಹಂತಕರನ್ನು ಪತ್ತೆ ಹಚ್ಚುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ತಿಳಿಸಿದರು.
ಹತ್ಯೆಯ ಹಿಂದಿನ ಉದ್ದೇಶ ಸದ್ಯಕ್ಕೆ ತಿಳಿದು ಬಂದಿಲ್ಲ. ಕೇವಲ ಊಹಾಪೋಹಗಳ ಆಧಾರದಲ್ಲಿ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಹತ್ಯೆ ಮಾಡಿದವರನ್ನು ಬಂಧಿಸಿ, ಅವರು ನೀಡುವ ಮಾಹಿತಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.
ರಾಜು ಹತ್ಯೆ ಖಂಡಿಸಿ ಮೈಸೂರು ಬಂದ್ ಆಚರಣೆ ಸಂದರ್ಭದಲ್ಲಿ ಆಟೊ, ದ್ವಿಚಕ್ರ ವಾಹನ, ಪೊಲೀಸ್ ಜೀಪ್, ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು ಎಂದು ಅವರು ತಿಳಿಸಿದರು.
ಪಿಎಫ್‌ಐ ಕಾರ್ಯಕರ್ತರ ಪ್ರಕರಣ ವಾಪಸ್: ಪಾಪ್ಯುಲರ್ ್ರಂಟ್ ಆ್ ಇಂಡಿಯಾ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಸಚಿವ ಸಂಪುಟ ಉಪ ಸಮಿತಿ ಮಾಡಿದ್ದ ಶಿಾರಸಿನಂತೆ ಸರಕಾರ ವಾಪಸ್ ಪಡೆದಿತ್ತು. ಆ ಸಂದರ್ಭದಲ್ಲಿ ನಾನು ಗೃಹ ಸಚಿವನಾಗಿರಲಿಲ್ಲ ಎಂದು ಪರಮೇಶ್ವರ್ ಸ್ಪಷ್ಟನೆ ನೀಡಿದರು.
ಹಿಂದಿನ ಗೃಹ ಸಚಿವ(ಕೆ.ಜೆ.ಜಾರ್ಜ್) ಅಧ್ಯಕ್ಷತೆಯಲ್ಲಿದ್ದ ಸಚಿವ ಸಂಪುಟ ಉಪ ಸಮಿತಿ ಮಾಡಿದ್ದ ಶಿಫಾರಸ್ಸಿನಂತೆ ಸರಕಾರ ಪ್ರಕರಣಗಳನ್ನು ಹಿಂಪಡೆಯುವ ತೀರ್ಮಾನ ಮಾಡಿತ್ತು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X