Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಮನುವಾದ-ಜಾತಿವಾದ ಜನಸಾಮಾನ್ಯರ...

‘ಮನುವಾದ-ಜಾತಿವಾದ ಜನಸಾಮಾನ್ಯರ ಶತ್ರುಗಳು’

ಜೆಎನ್‌ಯು ವಿದ್ಯಾರ್ಥಿಗಳ ಬಿಡುಗಡೆಗೆ ಆಗ್ರಹಿಸಿ ಬೃಹತ್ ಜಾಥಾ

ವಾರ್ತಾಭಾರತಿವಾರ್ತಾಭಾರತಿ15 March 2016 10:59 PM IST
share
‘ಮನುವಾದ-ಜಾತಿವಾದ ಜನಸಾಮಾನ್ಯರ ಶತ್ರುಗಳು’

ಬೆಂಗಳೂರು, ಮಾ.15: ದೇಶವಿರೋಧಿ ಘೋಷಣೆಗಳನ್ನು ಕೂಗಿದರೆಂಬ ಆರೋಪದಲ್ಲಿ ಬಂಧಿತರಾಗಿರುವ ಜೆಎನ್‌ಯು ವಿದ್ಯಾರ್ಥಿಗಳಾದ ಉಮರ್ ಖಾಲಿದ್, ಅನಿರ್ಬಣ್ ಭಟ್ಟಾಚಾರ್ಯ ಹಾಗೂ ಗಿಲಾನಿಯವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ವಿವಿಧ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ನಗರದ ಪುರಭವನದಿಂದ ಕಬ್ಬನ್ ಉದ್ಯಾನದವರೆಗೂ ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಾಗಿದ್ದವು.
  ಪ್ರತಿಭಟನಾ ವಿದ್ಯಾರ್ಥಿಗಳು ರ್ಯಾಲಿಯುದ್ದಕ್ಕೂ ಕೋಮುವಾದದಿಂದ ಸ್ವಾತಂತ್ರ, ಸಂಘಪರಿವಾರದಿಂದ ಸ್ವಾತಂತ್ರ, ಜಾತಿವಾದದಿಂದ ಸ್ವಾತಂತ್ರ, ಬ್ರಾಹ್ಮಣವಾದದಿಂದ ಸ್ವಾತಂತ್ರ, ಪೊಲೀಸರ ದೌರ್ಜನ್ಯದಿಂದ ಸ್ವಾತಂತ್ರ ಸೇರಿದಂತೆ ಅನೇಕ ಸಮಸ್ಯೆಗಳಿಂದ ವಿದ್ಯಾರ್ಥಿಗಳಿಗೆ ಸ್ವಾತಂತ್ರಬೇಕೆಂಬ ಘೋಷಣೆಗಳನ್ನು ಕೂಗುತ್ತಾ ಸಾಗಿದ್ದು ವಿಶೇಷವಾಗಿತ್ತು.
ವಿದ್ಯಾರ್ಥಿಗಳ ಹುರುಪು: ಜೆಎನ್‌ಯು ವಿದ್ಯಾರ್ಥಿಗಳನ್ನು ಬೆಂಬಲಿಸಿ, ನಗರದ ವಿವಿಧ ಖಾಸಗಿ ಕಾಲೇಜುಗಳಿಂದ ನೂರಾರು ವಿದ್ಯಾರ್ಥಿಗಳು ಜಾತಿವಾದ ಹಾಗೂ ಕೋಮುವಾದದಿಂದ ನಮಗೆ ಸಂಪೂರ್ಣ ಸ್ವಾತಂತ್ರಬೇಕು. ಜೆಎನ್‌ಯು ವಿದ್ಯಾರ್ಥಿಗಳ ಹೋರಾಟ ನ್ಯಾಯಯುತವಾಗಿದೆ. ಅವರ ಹೋರಾಟದೊಂದಿಗೆ ನಾವು ಸದಾ ಇರುತ್ತೇವೆಂದು ತಮ್ಮ ಬೆಂಬಲವನ್ನು ಘೋಷಣೆಗಳನ್ನು ಕೂಗುವುದರ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪತ್ರಕರ್ತೆ ಗೌರಿ ಲಂಕೇಶ್ ಮಾತನಾಡಿ, ಕೋಮುವಾದಿ ಬಿಜೆಪಿ ಸರಕಾರ ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ಕೊಡುತ್ತಿದೆ. ದೆಹಲಿ ಪೊಲೀಸರು ವಿದ್ಯಾರ್ಥಿಗಳು ಭಯೋತ್ಪಾದಕರು ಎಂಬ ರೀತಿಯಲ್ಲಿ ಅವರ ಮೇಲೆ ಯುದ್ಧವನ್ನೆ ಸಾರಿದ್ದಾರೆ. ಇವೆಲ್ಲವೂ ನಿಲ್ಲಬೇಕಾದರೆ ನಾವು ಕೋಮುವಾದಿ ಶಕ್ತಿಗಳಿಂದ ಸ್ವಾತಂತ್ರ ಪಡೆಯುವುದಕ್ಕಾಗಿ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ದೇಶದ ಎಲ್ಲ ವಿಶ್ವವಿದ್ಯಾಲನಿಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳ ನ್ಯಾಯಯುತವಾದ ಹೋರಾಟವನ್ನು ಬೆಂಬಲಿಸಬೇಕು. ದೇಶದಲ್ಲಿ ಜಾತಿವಾದ, ಮನುವಾದ ಹಾಗೂ ಬಂಡವಾಳಶಾಹಿಗಳು ಜನಸಾಮಾನ್ಯರ ಶತ್ರುಗಳಾಗಿದ್ದು, ಅವರ ವಿರುದ್ಧ ಹೋರಾಟ ಮಾಡುತ್ತಿರುವ ಜೆಎನ್‌ಯು ಹೋರಾಟಕ್ಕೆ ನಾವೆಲ್ಲರೂ ಶಕ್ತಿ ತುಂಬೋಣ ಎಂದು ಅವರು ಕರೆ ನೀಡಿದರು.
ಬಹುಜನ ವಿದ್ಯಾರ್ಥಿ ಸಂಘದ ಮುಖಂಡ ಹರಿರಾಮ್ ಮಾತನಾಡಿ, ಜಾತಿ ಹಾಗೂ ಮನುವಾದದ ಕೇಂದ್ರಗಳಾಗಿರುವ ವಿಶ್ವವಿದ್ಯಾನಿಲಯಗಳಲ್ಲಿ ಸಮಾನತೆ ಬೀಜ ಬಿತ್ತಬೇಕಾಗಿದೆ. ಅದಕ್ಕಾಗಿ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಬೇರು ಬಿಟ್ಟಿರುವ ಎಬಿವಿಪಿ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಬೇಕು. ಆಗ ಮಾತ್ರ ವಿಶ್ವವಿದ್ಯಾನಿಲಯಗಳಲ್ಲಿ ಸರಿಯಾದ ಜ್ಞಾನ ಸಿಗಲು ಸಾಧ್ಯ ಎಂದು ತಿಳಿಸಿದರು.
ಎಐಎಸ್‌ಎ ಸಂಘಟನೆಯ ರಾಜ್ಯಾಧ್ಯಕ್ಷ ಮಾರುತಿ ಮಾತನಾಡಿ, ದೇಶದಿಂದ ಕೋಮುವಾದ ಹಾಗೂ ಮನುವಾದ ತೊಲಗಬೇಕಾದರೆ ಹೋರಾಟವೊಂದೇ ಮಾರ್ಗವಾಗಿದೆ. ಜೆಎನ್‌ಯು ವಿದ್ಯಾರ್ಥಿಗಳು ಪ್ರಾರಂಭಿಸಿರುವ ಹೋರಾಟವು ದೇಶಕ್ಕೆ ಕಾಡುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕೊಡಬಲ್ಲದು. ಹೀಗಾಗಿ ಇವರ ಹೋರಾಟಕ್ಕೆ ವಿದ್ಯಾರ್ಥಿಗಳಲ್ಲದೆ ಜನಪರ ಆಶಯವುಳ್ಳ ಪ್ರತಿಯೊಬ್ಬರೂ ಸ್ಪಂದಿಸಬೇಕು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಎಸ್‌ಎಫ್‌ಐ, ಎಐಎಸ್‌ಎಫ್, ಎಸ್‌ಐಒ ಕೆವಿಎಸ್ ವಿದ್ಯಾರ್ಥಿ ಸಂಘಟನೆಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X