Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಿಂಗಳ ಅಂತ್ಯಕ್ಕೆ ಸಂಚಾರ ಮುಕ್ತ: ಸಚಿವ...

ತಿಂಗಳ ಅಂತ್ಯಕ್ಕೆ ಸಂಚಾರ ಮುಕ್ತ: ಸಚಿವ ಕೆ.ಜೆ. ಜಾರ್ಜ್

ಪೂರ್ವಪಶ್ಚಿಮ ಮೆಟ್ರೊ ಕಾರಿಡಾರ್

ವಾರ್ತಾಭಾರತಿವಾರ್ತಾಭಾರತಿ15 March 2016 11:01 PM IST
share
ತಿಂಗಳ ಅಂತ್ಯಕ್ಕೆ ಸಂಚಾರ ಮುಕ್ತ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು,ಮಾ. 15: ನಮ್ಮ ಮೆಟ್ರೊ ಮೊದಲ ಹಂತದ ಪೂರ್ವಪಶ್ಚಿಮ ಕಾರಿಡಾರ್ ಬಹುತೇಕ ಮುಕ್ತಾಯದ ಹಂತದಲ್ಲಿದ್ದು, ಈ ತಿಂಗಳ ಅಂತ್ಯ ಇಲ್ಲವೇ ಮುಂದಿನ ತಿಂಗಳ ಮಧ್ಯ ಭಾಗದ ವೇಳೆಗೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಮಂಗಳವಾರ ನಗರದ ಮಿನ್ಕ್ಸ್ ವೃತ್ತದಿಂದ ವಿಧಾನಸೌಧ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದ ಮೆಟ್ರೊ ನಿಲ್ದಾಣಗಳನ್ನು ಮೆಟ್ರೊ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಬಯಪ್ಪನಹಳ್ಳಿಯಿಂದ ನಾಯಂಡಹಳ್ಳಿವರೆಗಿನ ಕಾರಿಡಾರ್‌ನಲ್ಲಿ ಮಿನ್ಕ್ಸ್ ವೃತ್ತದಿಂದ ಮಾಗಡಿ ರಸ್ತೆವರೆಗಿನ ನಿಲ್ದಾಣದ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿವೆ. ಈ ನಡುವೆ ಸಂಚಾರಕ್ಕೆ ಅನುಮತಿ ಕೋರಿ ರೈಲ್ವೆ ಸುರಕ್ಷತಾ ಮಂಡಳಿಗೆ ವಾರದಲ್ಲಿ ಪತ್ರ ಬರೆಯಲು ನಮ್ಮ ಮೆಟ್ರೊ ನಿರ್ಧರಿಸಿದೆ. ಅಧಿಕೃತವಾಗಿ ಸುರಕ್ಷಾ ಪ್ರಮಾಣ ಪತ್ರ ಬಂದ ಕೆಲವೇ ದಿನಗಳಲ್ಲಿ ಪೂರ್ವಪಶ್ಚಿಮ ಕಾರಿಡಾರ್‌ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು.
ನಾಗಸಂದ್ರದಿಂದ ಪುಟ್ಟೇನಹಳ್ಳಿವರೆಗಿನ ಉತ್ತರ ದಕ್ಷಿಣ ಕಾರಿಡಾರ್‌ನಲ್ಲಿ ಸಂಪಿಗೆ ನಿಲ್ದಾಣದಿಂದ ಮೆಜೆಸ್ಟಿಕ್ ನಿಲ್ದಾಣದವರೆಗೆ ಕಾಮಗಾರಿ ನಡೆಯುತ್ತಿದ್ದು, ಸುರಂಗ ಕೊರೆಯುವ ಯಂತ್ರಗಳು ಕೆಲಸ ಮುಗಿಸಿ 23 ತಿಂಗಳಲ್ಲಿ ವಾಪಸ್ ಆಗಲಿವೆ. ಆದಾದ ಬಳಿಕ ಜೂನ್ ಅಂತ್ಯದ ವೇಳೆಗೆ ಉತ್ತರ ದಕ್ಷಿಣ ಕಾರಿಡಾರ್ ಕೂಡಾ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು.
 ಮೆಟ್ರೋ ಕಾಮಗಾರಿ ನಿಗದಿತ ಸಮಯಕ್ಕಿಂತ ತುಸು ವಿಳಂಬವಾಯಿತು. ಅದಕ್ಕೆ ಸುರಂಗ ಕೊರೆಯುವಾಗ ಕೆಲವೆಡೆ ಗಟ್ಟಿಯಾದ ಕಲ್ಲುಗಳು ಸಿಕ್ಕರೆ ಕೆಲವೆಡೆ ಮೆದುವಾದ ಮಣ್ಣು ಸಿಕ್ಕಿ ಕಾಮಗಾರಿಗೆ ಅಡತಡೆಯಾಯಿತು. ಅದನ್ನು ಹೊರತುಪಡಿಸಿ ಕಾಮಗಾರಿ ಭರದಿಂದ ಸಾಗುತ್ತಿದೆ. ಮೆಟ್ರೊಗೆ ಸರಕಾರ ಸಂಪೂರ್ಣ ಹಣಕಾಸಿನ ನೆರವು ಒದಗಿಸಿದೆ ಎಂದರು.
13,600 ಕೋಟಿ ರೂ. ವೆಚ್ಚದ ಮೊದಲ ಹಂತದ ಮೆಟ್ರೋ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಅಂಡರ್‌ಗ್ರೌಂಡ್ ರೈಲ್ವೆ ನಿಲ್ದಾಣಗಳ ಕಾಮಗಾರಿ ಸಂಪೂರ್ಣವಾಗಿ ಮುಗಿದಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಇವೆ. ಅವುಗಳನ್ನು 810 ದಿನಗಳೊಳಗಾಗಿ ಮುಗಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಮೆಟ್ರೊ ಸಂಚಾರಕ್ಕೆ ರೈಲ್ವೆ ಸುರಕ್ಷತಾ ಮಂಡಲಿ ಅನುಮತಿ ನೀಡಬೇಕಾದರೆ ಮೊದಲು ಕಾಮಗಾರಿಗಳು ಸಂಪೂರ್ಣವಾಗಿ ಮುಗಿಯಬೇಕು. ಆ ಕೆಲಸ ಈಗ ಮುಗಿದಿದ್ದು, ರೈಲ್ವೆ ಸುರಕ್ಷತಾ ಪ್ರಮಾಣ ಪತ್ರಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X