ಹಿರಿಯಡಕ ಕಾಲೇಜಿನ ದಶಮಾನೋತ್ಸವ

ಉಡುಪಿ, ಮಾ.15: ಹಿರಿಯಡಕ ಪರಿಸರದಲ್ಲಿ ಪದವಿ ಶಿಕ್ಷಣ ಮಾತ್ರವಲ್ಲದೆ, ಸ್ನಾತಕೋತ್ತರ ಶಿಕ್ಷಣವನ್ನು ಒಳಗೊಂಡ ಉನ್ನತ ಶಿಕ್ಷಣ ಕೇಂದ್ರ ಆರಂಭಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.
ಹಿರಿಯಡಕ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದಶಮಾನೋತ್ಸವ ಮತ್ತು ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ಸಂದರ್ಭ ಕಾಲೇಜಿನ ದಶಮಾನೋತ್ಸವ ಸಂಚಿಕೆ ‘ಹಿರಿಯ ಸಿರಿ’ಯನ್ನು ಅವರು ಬಿಡುಗಡೆಗೊಳಿಸಿದರು. ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಎಂ. ಮೋಹನ್ ಆಳ್ವ, ಸಂಸ್ಥೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿ ರ್ಯಾಂಕ್ ಪಡೆದ ಐವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ನಟರಾಜ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಸೋಜನ್ ಕೆ.ಜಿ. ವಾರ್ಷಿಕ ವರದಿ ವಾಚಿಸಿದರು. ಪ್ರಾಂಶುಪಾಲ ಡಾ.ಪಾದೆಕಲ್ಲು ವಿಷ್ಣು ಭಟ್ ಸ್ವಾಗತಿಸಿದರು. ಆಶಾ ವಂದಿಸಿದರು. ಸುಷ್ಮಾರಾವ್ ಕೆ. ಕಾರ್ಯಕ್ರಮ ನಿರೂಪಿಸಿದರು.
Next Story





