Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯಿಂದ ಹೆಣವಿಟ್ಟು ರಾಜಕೀಯ:...

ಬಿಜೆಪಿಯಿಂದ ಹೆಣವಿಟ್ಟು ರಾಜಕೀಯ: ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ15 March 2016 11:53 PM IST
share
ಬಿಜೆಪಿಯಿಂದ ಹೆಣವಿಟ್ಟು ರಾಜಕೀಯ: ಪರಮೇಶ್ವರ್

ಮೈಸೂರು, ಮಾ.15: ಬಿಜೆಪಿ ಮತ್ತು ಸಂಘಪರಿವಾರ ಸಂಘಟನೆಗಳು ಹೆಣ ಇಟ್ಟುಕೊಂಡು ರಾಜಕೀಯ ಮಾಡಬಾರದಿತ್ತು. ಅವರು ಪೊಲೀಸರ ತಾಳ್ಮೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

ಮಂಗಳವಾರ ನಗರಕ್ಕೆ ಆಗಮಿಸಿದ್ದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅನಂತರ ರಾಜು ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಬಳಿಕ ನಝರ್‌ಬಾದ್‌ನ ಸರಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದರು. ರಾಜು ಹತ್ಯೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮಕೈಗೊಂಡಿತ್ತು. ಮುಖ್ಯಮಂತ್ರಿ, ಜಿಲ್ಲಾ ಸಚಿವರೊಂದಿಗೆ ತಾನೂ ಶಾಂತಿ ಕದಡದಂತೆ ಪದೇ ಪದೇ ಮನವಿ ಮಾಡಿಕೊಂಡಿದ್ದೆ. ಇದ್ಯಾವುದಕ್ಕೂ ಕಿವಿಗೊಡದ ಬಿಜೆಪಿ ನಾಯಕರು ರಾಜು ಅಂತ್ಯಕ್ರಿಯೆಯನ್ನು ವಿಳಂಬಗೊಳಿಸಿ ಹಿಂಸಾಚಾರಕ್ಕೆ ಕಾರಣರಾದರು ಎಂದು ಅವರು ದೂರಿದರು.

ಈ ಘಟನೆಯಲ್ಲಿ ಪೊಲೀಸರು ಸಂಯಮದಿಂದ ವರ್ತಿಸಿದ್ದರೂ, ಹೆಚ್ಚಿನ ಹಾನಿ ಆಗದಂತೆ ಕ್ರಮವಹಿಸಿದ್ದಾರೆ. ಜಿಲ್ಲಾಡಳಿತ ಐದು ಲಕ್ಷ ರೂ.ಗಳ ಪರಿಹಾರವನ್ನೂ ನೀಡಿದೆ. ಈಗಾಗಲೇ ಕೊಲೆ ಕುರಿತು ಕೆಲ ಕುರುಹುಗಳು ದೊರಕಿವೆ. ಶೀಘ್ರ ಆರೋಪಿಗಳನ್ನು ಬಂಧಿಸಲಾಗುವುದು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಅಗತ್ಯವಿಲ್ಲ ಎಂದು ಸಚಿವ ಸ್ಪಷ್ಟಪಡಿಸಿದರು.

ಎಸ್‌ಡಿಪಿಐ ಮತ್ತು ಇತರ ಸಂಘಟನೆಗಳ ಮೇಲೆ ಹೂಡಿದ್ದ ಮೊಕದ್ದಮೆಗಳನ್ನು ವಾಪಸ್ ಪಡೆದಿದ್ದೇ ಘಟನೆಗೆ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಮಾಡಿದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎಸ್‌ಡಿಪಿಐ ಜೊತೆಗೆ ಸ್ವತಃ ಹತ್ಯೆಗೆ ಒಳಗಾದ ರಾಜುವಿನ ಮೇಲೆ ಇದ್ದ 5 ಕೇಸುಗಳನ್ನೂ ಸರಕಾರ ವಾಪಸ್ ಪಡೆದಿತ್ತು.

ರಾಜುವಿಗೆ ಕೊಲೆ ಬೆದರಿಕೆ ಇದೆ ಎಂಬ ಬಗ್ಗೆ ಯಾವ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿರಲಿಲ್ಲ. ಯಾವ ತನಿಖಾ ದಳಕ್ಕೂ ಈ ಮಾಹಿತಿ ಇರಲಿಲ್ಲ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ವಾಸು, ತನ್ವೀರ್ ಸೇಠ್, ಜಿಲ್ಲಾಧಿಕಾರಿ ಸಿ.ಶಿಖಾ, ಕಾನೂನು ಸಲಹೆಗಾರ ಕೆಂಪಯ್ಯ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉಪಸ್ಥಿತರಿದ್ದರು.

ಕೋಮು ಸೂಕ್ಷ್ಮ ಪ್ರದೇಶಗಳ ಗುರುತು

ರಾಜ್ಯದಲ್ಲಿ ಕೋಮು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸುವ ಕಾರ್ಯ ಆರಂಭವಾಗಿದ್ದು, ಅಂತಹ ಪ್ರದೇಶಗಳಿಗೆ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ರಾಜು ನಿವಾಸಕ್ಕೆ ಗೃಹ ಸಚಿವರ ಭೇಟಿ

ಮೈಸೂರು, ಮಾ.15: ದುಷ್ಕರ್ಮಿಗಳಿಂದ ಕೊಲೆಯಾದ ಕ್ಯಾತಮಾರನಹಳ್ಳಿ ರಾಜು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಭಟನೆ ಎದುರಿಸಿದ ಘಟನೆ ನಡೆದಿದೆ.

ಮಂಗಳವಾರ ಸಂಜೆ 4:30ಕ್ಕೆ ಕ್ಯಾತಮಾರನಹಳ್ಳಿಯ ರಾಜು ನಿವಾಸಕ್ಕೆ ಸಚಿವರು ಆಗಮಿಸಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆಗೆ ಮುಂದಾಗುತಿದ್ದಂತೆಯೇ ಸರಕಾರ ಮತ್ತು ಸ್ಥಳೀಯ ಶಾಸಕ ತನ್ವೀರ್ ಸೇಠ್ ವಿರುದ್ಧ ೋಷಣೆಗಳು ಕೇಳಿಬಂತು. ಗೃಹ ಸಚಿವರು ಉದ್ರಿಕ್ತ ಗುಂಪನ್ನು ಸಮಾಧಾನಪಡಿಸಲು ಮುಂದಾದರೂ ಪ್ರಯೋಜನವಾಗಿಲ್ಲ.

ಹತ್ಯೆಯಾದ ರಾಜುವನ್ನು ಶಾಸಕ ತನ್ವೀರ್ ಸೇಠ್ ಕ್ರಿಮಿನಲ್, ಗೂಂಡಾ ಎಂದು ಕರೆದಿದ್ದರು. ಘಟನೆ ನಡೆದು ಮೂರು ದಿನ ಕಳೆದರೂ ಶಾಸಕರು ಆಗಮಿಸಿಲ್ಲ. ಈಗ ಗೃಹ ಸಚಿವರೊಂದಿಗೆ ಬಂದಿದ್ದಾರೆ. ಈ ಘಟನೆಗೆ ಸರಕಾರ ಮತ್ತು ಜಿಲ್ಲಾಡಳಿತವೇ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪರಿಸ್ಥಿತಿ ತಿಳಿಗೊಳ್ಳದೆ ಇರುವ ಸೂಚನೆ ದೊರಕುತಿದ್ದಂತೆಯೇ ಗೃಹ ಸಚಿವರು ಸ್ಥಳದಿಂದ ನಿರ್ಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್, ಜಿಲ್ಲಾಧಿಕಾರಿ ಸಿ.ಶಿಖಾ, ಎಡಿಜಿಪಿ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಉಪಸ್ಥಿತರಿದ್ದರು. ಗೃಹ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಕ್ಯಾತಮಾರನಹಳ್ಳಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.

ಹಲವರು ಪೊಲೀಸ್ ವಶಕ್ಕೆ

ಮೈಸೂರು, ಮಾ.15: ಆರೆಸ್ಸೆಸ್ ಮುಖಂಡ ರಾಜು ಹತ್ಯೆ ಮತ್ತು ನಿನ್ನೆಯ ಗಲಭೆಗೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ, ಪ್ರಮುಖ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.

ಕಳೆದ ರವಿವಾರ ಕ್ಯಾತಮಾರನಹಳ್ಳಿಯ ನಿವಾಸಿ, ಆರೆಸ್ಸೆಸ್ ಮುಖಂಡ ರಾಜು ಟೀ ಅಂಗಡಿಯಲ್ಲಿ ಕುಳಿತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿತ್ತು.

ಈ ಪ್ರಕರಣವನ್ನು ಈಗಾಗಲೇ ಸಿಸಿಬಿ ಪೊಲೀಸರಿಗೆ ಒಪ್ಪಿಸಲಾಗಿದ್ದು, ಓರ್ವ ಎಸಿಪಿ, ನಾಲ್ವರು ಇನ್‌ಸ್ಪೆಕ್ಟರ್‌ಗಳು ತನಿಖೆ ನಡೆಸುತ್ತಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ ಕೆಲ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಘಟನೆ ನಡೆದಾಗ ಇದ್ದ ಸಾಕ್ಷಿಗಳ ಮಾಹಿತಿ ಪಡೆದು ಆರೋಪಿಗಳ ಚಹರೆಯನ್ನು ಚಿತ್ರಿಸಲಾಗಿದೆ. ಅಲ್ಲದೆ, ಟೀ ಸ್ಟಾಲ್ ಎದುರು ಇರುವ ಬ್ಯಾಂಕ್‌ನ ಸಿಸಿ ಕ್ಯಾಮರಾದಲ್ಲೂ ಆರೋಪಿಗಳ ಸುಳಿವು ದೊರಕಿದೆ ಎನ್ನಲಾಗಿದೆ.
ಈ ನಡುವೆ, ಘಟನೆ ಖಂಡಿಸಿ ಬಿಜೆಪಿ ಮತ್ತು ಸಂಘಪರಿವಾರ ಸಂಘಟನೆಗಳು ನಡೆಸಿದ ಬಂದ್ ವೇಳೆ ನಡೆದ ಹಿಂಸಾಚಾರ, ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ಕೆಲ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X