ರಾಜು ಹತ್ಯೆ ಪ್ರಕರಣ; ಸಂಸತ್ ಭವನದ ಬಳಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ

ಹೊಸದಿಲ್ಲಿ, ಮಾ16: ಮೈಸೂರಿನ ಬಿಜೆಪಿ ಕಾರ್ಯಕರ್ತ ರಾಜು ಹತ್ಯೆಯನ್ನು ಖಂಡಿಸಿ ಕರ್ನಾಟಕದ ಬಿಜೆಪಿ ಲೋಕಸಭಾ ಸದಸ್ಯರಾದ ಬಿಎಸ್ ಯಡಿಯೂರಪ್ಪ, ಪ್ರಹ್ಲಾದ ಜೋಶಿ, ಶೊಭಾ ಕರಂದ್ಲಾಜೆ ಸಂಸತ್‌ನ ಆವರಣದಲ್ಲಿರುವ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು.
ಸದನದಲ್ಲಿ ಶೂನ್ಯ ವೇಳೆಯಲ್ಲಿ ರಾಜು ಹತ್ಯೆ ಪ್ರಕರಣವನ್ನು ಪ್ರಸ್ತಾಪಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಕರ್ನಾಟಕ ಸರಕಾರ ಕೊಲೆಗಡುಕರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಜೋಶಿ ಆರೋಪಿಸಿದರು.
ಗುರುವಾರ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಅವರು ಹೇಳಿದ್ದಾರೆ.
Next Story





