Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭಾರತ ಮಾತಾ ಕಿ ಜೈ’ ಘೋಷಣೆ ಕೂಗದ ಆರೋಪ...

‘ಭಾರತ ಮಾತಾ ಕಿ ಜೈ’ ಘೋಷಣೆ ಕೂಗದ ಆರೋಪ ಮಹಾರಾಷ್ಟ್ರ ವಿಧಾನಸಭೆಯಿಂದ ಎಐಎಂಐಎಂ ಶಾಸಕ ಅಮಾನತು

ವಾರ್ತಾಭಾರತಿವಾರ್ತಾಭಾರತಿ16 March 2016 11:39 PM IST
share

ಮುಂಬೈ,ಮಾ.16: ಭಾರತಕ್ಕೆ ಅಗೌರವವನ್ನು ಸೂಚಿಸುತ್ತಿದ್ದಾರೆ ಎಂದು ಆರೋಪಿಸಿ ಮುಂಬೈನ ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಶಾಸಕ ವಾರಿಸ್ ಪಠಾಣ ಅವರನ್ನು ಮಹಾರಾಷ್ಟ್ರ ವಿಧಾನಸಭೆಯು ಬುಧವಾರ ಸರ್ವಾನುಮತದಿಂದ ಅಮಾನತುಗೊಳಿಸಿತು. ಇದಕ್ಕೂ ಮುನ್ನ ಪಠಾಣ ಅವರು,ತನ್ನ ಜೀವ ಹೋದರೂ ಸರಿಯೇ..ತಾನು ‘ಭಾರತ ಮಾತಾ ಕಿ ಜೈ’ಎಂಬ ಘೋಷಣೆಯನ್ನು ಕೂಗುವುದಿಲ್ಲ ಎಂದು ಹೇಳಿದ್ದರು.

ಪಠಾಣ ಅವರ ಈ ಹೇಳಿಕೆಗೆ ಎಲ್ಲ ಪಕ್ಷಗಳ ಸದಸ್ಯರಿಂದ ಪ್ರತಿಭಟನೆ ವ್ಯಕ್ತವಾಯಿತು. ಅವರು ದೇಶಕ್ಕೆ ಅಗೌರವ ಸೂಚಿಸುತ್ತಿದ್ದಾರೆ ಎಂದು ಆರೋಪಿಸಿದ ಸರ್ವಸದಸ್ಯರು ಅವರ ಅಮಾನತಿಗೆ ಒಕ್ಕೊರಳಿನಿಂದ ಆಗ್ರಹಿಸಿದರು. ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಶಾಂತರಾಗದ ಹಿನ್ನೆಲೆಯಲ್ಲಿ ಸದನವನ್ನು ಐದು ಬಾರಿ ಮುಂದೂಡಲಾಯಿತು. ಇಷ್ಟಾದ ಬಳಿಕ ವಿಧಾನಸಭಾ ಸ್ಪೀಕರ್ ಹರಿಭಾವು ಬಾಗ್ಡೆ ಅವರು ತನ್ನ ಚೇಂಬರ್‌ನಲ್ಲಿ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಕರೆದರು.
ಸಭೆಯ ಬಳಿಕ ಸಹಾಯಕ ಗೃಹಸಚಿವ ರಂಜಿತ್ ಪಾಟೀಲ್ ಅವರು ಪಠಾಣರ ಅಮಾನತು ನಿರ್ಣಯವನ್ನು ಸದನದಲ್ಲಿ ಮಂಡಿಸಿದರು. ಪಠಾಣ ಅಭಿವ್ಯಕ್ತಿ ಸ್ವಾತಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಮತ್ತು ದೇಶಕ್ಕೆ ಅಗೌರವವನ್ನು ತೋರಿಸುತ್ತಿದ್ದಾರೆ ಎಂದು ನಿರ್ಣಯ ಆರೋಪಿಸಿದೆ.
ಮುಂಗಡಪತ್ರ ಅಧಿವೇಶನದ ಅವಧಿಗೆ ಪಠಾಣರನ್ನು ಅಮಾನತುಗೊಳಿಸುವ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿತು.
ನಾವು ಒಂದು ದೇಶದಲ್ಲಿ ವಾಸಿಸುತ್ತಿದ್ದೇವೆ ಮತ್ತು ಇಲ್ಲಿ ವಾಸಿಸುವ ಪ್ರತಿಯೊಬ್ಬರೂ ದೇಶವನ್ನು ಪ್ರೀತಿಸಬೇಕು. ಧರ್ಮ,ಜಾತಿ ಮತ್ತು ಜನಾಂಗಗಳನ್ನು ಮರೆತು ನಾವು ಸ್ವಾತಂತ್ರಕ್ಕಾಗಿ ಹೋರಾಡಿದ್ದೇವೆ. ರಾಷ್ಟ್ರವಿರೋಧಿ ವಾದದ ವಿಷವು ಜೆಎನ್‌ಯುತನಕ ಸೀಮಿತವಾಗಿತ್ತು, ಆದರೆ ಅದೀಗ ವಿಧಾನಸಭೆಯಲ್ಲಿಯೂ ವ್ಯಾಪಿಸಿದೆ. ಯಾವುದೇ ವ್ಯಕ್ತಿ ಹೀಗೆ ಮಾತನಾಡಿದರೆ ಅದನ್ನು ದೇಶದ್ರೋಹವೆಂದು ಪರಿಗಣಿಸಬೇಕು ಎಂದು ರಾಜ್ಯದ ಕಂದಾಯ ಸಚಿವ ಏಕನಾಥ ಖಾಡ್ಸೆ ಸದನದಲ್ಲಿ ಹೇಳಿದರು.
ಕಾಂಗ್ರೆಸ್‌ನ ಅಬ್ದುಲ್ ಸತ್ತಾರ್ ಮತ್ತು ರಾಧಾಕೃಷ್ಣ ವಿಖೆ-ಪಾಟೀಲ್ ಅವರೂ ಅಮಾನತು ಆಗ್ರಹವನ್ನು ಬೆಂಬಲಿಸಿದರು.
 ಈ ಕೆಲವು ವ್ಯಕ್ತಿಗಳು ಇಂತಹ ಹೇಳಿಕೆಗಳನ್ನು ನೀಡುತ್ತಾರೆ ಮತ್ತು ಇಡೀ ಮುಸ್ಲಿಮ್ ಸಮುದಾಯವು ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಸತಾರ್ ಹೇಳಿದರು.
ಬಿಜೆಪಿ ಮತ್ತು ಎಂಐಎಂ ನಡೆಸುತ್ತಿರುವ ಹೊಲಸು ರಾಜಕೀಯಗಳು ಪರಸ್ಪರ ಪೂರಕವಾಗಿವೆ ಎಂದು ಹೇಳಿದ ಎನ್‌ಸಿಪಿಯ ಜಿತೇಂದ್ರ ಅವ್ಹಾದ್ ಅವರು, ಆರೆಸ್ಸೆಸ್ ವರಿಷ್ಠ ಮೋಹನ ಭಾಗವತ್ ಅವರು ‘ಭಾರತ ಮಾತಾ ಕಿ ಜೈ ’ ಘೋಷಣೆ ಕೂಗುವುದಕ್ಕೆ ಸಂಬಂಧಿಸಿ ಹೇಳಿಕೆ ನೀಡಿದಾಗಲೇ ಏನೋ ಒಂದು ರೂಪುಗೊಳ್ಳುತ್ತಿದೆ ಎಂಬ ವಾಸನೆ ನಮಗೆ ಹೊಡೆದಿತ್ತು. ಅದಕ್ಕೆ ಸರಿಯಾಗಿ ಎಂಐಎಂ ನಾಯಕ ಉವೈಸಿ ಈ ಹೇಳಿಕೆಯನ್ನು ಎತ್ತಿಕೊಂಡರು ಮತ್ತು ಈ ವಿಷಯವಾಗಿ ಈಗ ರಾಜಕೀಯ ಆಟ ನಡೆಯುತ್ತಿದೆ. ಇವೆರಡೂ ಪಕ್ಷಗಳು ಉಭಯ ಸಮುದಾಯಗಳಲ್ಲಿ ಒಡಕನ್ನು ಸೃಷ್ಟಿಸುತ್ತಿವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X