Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿವಿಯಿಂದ ಪರೀಕ್ಷಾ ಫಲಿತಾಂಶಗೊಂದಲ:...

ವಿವಿಯಿಂದ ಪರೀಕ್ಷಾ ಫಲಿತಾಂಶಗೊಂದಲ: ಕ್ಯಾಂಪಸ್ ಫ್ರಂಟ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 March 2016 4:09 PM IST
share
ವಿವಿಯಿಂದ ಪರೀಕ್ಷಾ ಫಲಿತಾಂಶಗೊಂದಲ: ಕ್ಯಾಂಪಸ್ ಫ್ರಂಟ್‌ನಿಂದ ಪ್ರತಿಭಟನೆ

 ಕೊಣಾಜೆ: ವಿಶ್ವವಿದ್ಯಾನಿಲಯಗಳು ವಿಧ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ದೀಪ ಆಗಬೇಕಾಗಿದೆ. ತಪ್ಪು ಮಾಡುವ ವಿದ್ಯಾರ್ಥಿಗಳನ್ನು ತಿದ್ದಬೇಕಾದ ವಿಶ್ವವಿದ್ಯಾನಿಲಯಗಳು ತಪ್ಪು ಮಾಡುತ್ತಿರುವುದು ಶಿಕ್ಷಣ ವ್ಯವಸ್ಥೆಯ ದುರಾವಸ್ಥೆಯನ್ನು ಎತ್ತಿ ತೋರಿಸುತ್ತಿದ್ದು, ಫಲಿತಾಂಶದಲ್ಲಿ ಗೊಂದಲ ಉಂಟು ಮಾಡಿ ಬಡ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟವಾಡುವ ಅಧ್ಯಾಪಕರುಗಳ ವಿರುದ್ಧ ಶೀಘ್ರವೇ ಕ್ರಮಕೈಗೊಳ್ಳಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಮಹಮ್ಮದ್ ತಫ್ಸೀಕ್ ಆಗ್ರಹಿಸಿದರು.  ಅವರು ಮಂಗಳೂರು ವಿ.ವಿಯ ಫಲಿತಾಂಶದ ಗೊಂದಲವನ್ನು ಸರಿಪಡಿಸುವಂತೆ ಮತ್ತು ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಎದುರು ಗುರುವಾರ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. 

ಮಂಗಳೂರು ವಿಶ್ವವಿದ್ಯಾನಿಲಯವು ಮೌಲ್ಯಮಾಪನವನ್ನು ಖಾಸಗಿ ಕಂಪೆನಿಗಳಿಗೆ ನೀಡಿರುವುದು ತಪ್ಪು. ಖಾಸಗಿ ಕಂಪೆನಿಗಳ ಬೇಜವಾಬ್ದಾರಿ ನೀತಿಯಿಂದ ಜನವರಿಯಲ್ಲಿ ಬರಬೇಕಾದ ಫಲಿತಾಂಶ ಒಂದು ತಿಂಗಳು ತಡವಾಗಿ ಪ್ರಕಟವಾಗಿದೆ. ಇದರಿಂದ ಒಂದು ಸೆಮಿಸ್ಟರ್‌ನಲ್ಲಿ ಅನುತ್ತೀರ್ಣರಾದವರು ಒಂದು ವರ್ಷವನ್ನೇ ಕಳೆಯುವಂತಾಗಿದೆ. ಈ ನಡುವೆ ಸೆನೆಟ್ ಸಭೆಯಲ್ಲಿ ಸೆಮಿಸ್ಟರ್ ನಲ್ಲಿ ಅನುತ್ತೀರ್ಣರಾದವರು ಮುಂದೆ ತರಗತಿಗೆ ಹೋಗಲು ತಡೆಯುವ ಆದೇಶವನ್ನು ಮಾಡಿರುವುದು ಖಂಡನೀಯ. ಆಧುನಿಕ ತಂತ್ರಜ್ಞಾನದ ವ್ಯವಸ್ಥೆಯಲ್ಲಿ ಗೊಂದಲಗಳು ಇರುವುದು ಶಿಕ್ಷಣ ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಉದಾಹರಣೆಯಾಗಿದೆ ಎಂದರು.

ವಿವಿಯು ವೆಬ್‌ಸೈಟಿನಲ್ಲಿ ಪ್ರಕಟಿಸಿದಂತಹ ಫಲಿತಾಂಶ ಸಂಪೂರ್ಣ ಗೊಂದಲಮಯವಾಗಿದೆ. ವಿದ್ಯಾರ್ಥಿಗಳಲ್ಲಿ ಭಯ ಮತ್ತು ಆತಂಕದ ವಾತಾವರಣ ಸೃಷ್ಟಿಸಿದೆ. ಪ್ರತೀ ಬಾರಿ ಉನ್ನತ ಶ್ರೇಣಿಗಳಲ್ಲಿ ತೇರ್ಗಡೆಗೊಳ್ಳುತ್ತಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಕಡಿಮೆ ಅಂಕಗಳು ದೊರಕಿದೆ. ಅಲ್ಲದೆ ಆರು ವಿಷಯಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೆ ಹನ್ನೊಂದು ವಿಷಯಗಳ ಫಲಿತಾಂಶವನ್ನು ವಿವಿ ವೆಬ್ ಸೈಟಿನಲ್ಲಿ ತಪ್ಪಾಗಿ ಪ್ರಕಟಿಸಲಾಗಿದೆ. ಕೆಲ ವಿದ್ಯಾರ್ಥಿಗಳ ಫಲಿತಾಂಶ ಇಂದಿನವರೆಗೂ ಪ್ರಕಟವಾಗಿಲ್ಲ. ವಿ.ವಿ ಫಲಿತಾಂಶಗಳ ಪ್ರಕಟಣೆಯನ್ನು ಖಾಸಗಿ ಕಂಪೆನಿಗಳಿಗೆ ಗುತ್ತಿಗೆ ನೀಡಿರುವುದು ವಿ.ವಿ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಬಗ್ಗೆ ವಿ.ವಿಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸಮಸ್ಯೆ ಬಗೆಹರಿಸಲು ಕೆಲ ದಿನಗಳ ಕಾಲಾವಕಾಶವನ್ನು ಕೇಳಿದ್ದರು.

ಅದರಂತೆ ವಿ.ವಿ ಅಧಿಕಾರಿಗಳು ಪತ್ರಿಕಾಗೋಷ್ಟಿ ಕರೆದು ಮಾ.12ರವರೆಗೆ ಅವಧಿ ಕೇಳಿದ್ದರು. ಅವಧಿ ಮುಗಿದು ಫಲಿತಾಂಶ ಬರಲಿಲ್ಲ. ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೂ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.  ಆಡಳಿತ ಸೌಧದ ಮುಂದೆ ಧರಣಿ ಕುಳಿತ ವಿದ್ಯಾರ್ಥಿಗಳು ವಿವಿ ಕುಲಪತಿಗಳು ಬಾರದೇ ಇದ್ದಲ್ಲಿ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಬಳಿಕ ಮಂಗಳೂರು ವಿ.ವಿ ಕುಲಸಚಿವರು ಭೇಟಿ ನೀಡಿ ಮಾತನಾಡಿದ ಪ್ರೊ.ಟಿ.ಡಿ.ಕೆಂಪರಾಜು , ಖಾಸಗಿ ಸಂಸ್ಥೆಯವರು ಮೌಲ್ಯಮಾಪನ ನಡೆಸುವುದಿಲ್ಲ, ಅಧ್ಯಾಪಕರುಗಳೇ ಮೌಲ್ಯಮಾಪನ ನಡೆಸುವವರು. ಫಲಿತಾಂಶದ ಎಂಟ್ರಿಯನ್ನು ಖಾಸಗಿ ಸಂಸ್ಥೆಯವರು ಮಾಡಿದ್ದಾರೆ. ಅದರಲ್ಲಿ ಹಲವು ಗೊಂದಲಗಳು ಉಂಟಾಗಿದೆ. ಅಧ್ಯಾಪಕರುಗಳಿಂದ ತಪ್ಪುಗಳಾಗಿದ್ದಲ್ಲಿ ಅವರ ವಿರುದ್ಧ ಕ್ರಮಕೈಗೊಳ್ಳುವ ಕುರಿತು ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಣ್ಣ ಗೊಂದಲಗಳು ಇದ್ದಲ್ಲಿ ಆಯಾಯ ಕಾಲೇಜುಗಳಲ್ಲೇ ಸರಿಪಡಿಸುವಂತೆ ಸೂಚನೆಯನ್ನು ಹೊರಡಿಸಲಾಗಿದೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು. ಈ ಸಂದರ್ಭ ಸಿಎಫ್ಐ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ತುಫ್ವೆಲ್, ಸಾಹುಲ್ ಹಮೀದ್, ಮಹಮ್ಮದ್ ಇರ್ಷಾದ್, ಅಶ್ವಾನ್ ಸಾದಿಕ್ ಮತ್ತು ನಿಝಾಮುದ್ದೀನ್ ಮುಂತಾದವರು ಉಪಸ್ಥಿತರಿದ್ದರು.

 

 

 

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X