ಬೆಳ್ತಂಗಡಿ: ಕಳ್ಳತನ ಆರೋಪಿ ಪೀಟರ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ
ಬೆಳ್ತಂಗಡಿ: ಚಾರ್ಮಡಿ ಸಮೀಪ ತೋಟತ್ತಾಡಿ ಎಂಬಲ್ಲಿ ಕಳ್ಳತನ ಪ್ರಕರಣದ ಆರೋಪಿ ಪೀಟರ್ ಎಂಬಾತನನ್ನು ಥಳಿಸಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸೆಂಟಿ ಯಾನೆ ದೇವಸ್ಯ ಎಂಬಾತನ್ನು ಬೆಳ್ತಂಗಡಿ ಪೋಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಯೆಂದು ಆರೋಪಿಸಲಾದ ದೇವಸ್ಯ ಘಟನೆಯ ಬಳಿಕ ತಲೆ ಮರೆಸಿಕೊಂಡಿದ್ದ ಇಂದು ಮದ್ಯಾಹ್ನ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಈತ ಗಟನೆಯ ಸಮದರ್ಭ ಉಪಯೋಗಿಸಿದ್ದ ಜೀಪ್ ಅನ್ನೂ ವಶ ಪಡಿಸಿಕೊಳ್ಳಲಾಗಿದೆ. ಪೋಲೀಸರು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಆರೋಪಿಯನ್ನು ನಾಳೆ ನ್ಯಾಯಾಲಯಕ್ಕೆ ಹಾಜರು ಪಡಿಸುವ ನಿರೀಕ್ಷೆಯಿದೆ. ಇದರೊಂದಿಗೆ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೇರಿದೆ.
Next Story





