Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭಾರತ್ ಮಾತಾಕಿ ಜೈ’ ಎನ್ನದವರ ಪೌರತ್ವ...

‘ಭಾರತ್ ಮಾತಾಕಿ ಜೈ’ ಎನ್ನದವರ ಪೌರತ್ವ ರದ್ದುಗೊಳಿಸಿ: ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ17 March 2016 11:08 PM IST
share

ಮುಂಬೈ, ಮಾ.17: ‘ಭಾರತ್ ಮಾತಾಕೀ ಜೈ’ ಎಂಬ ಘೋಷಣೆ ಕೂಗಲು ನಿರಾಕರಿಸುವವರ ಪೌರತ್ವ ಹಾಗೂ ಮತದಾನದ ಹಕ್ಕನ್ನು ರದ್ದುಗೊಳಿಸಬೇಕೆಂದು ಶಿವಸೇನೆ ಗುರುವಾರ ಆಗ್ರಹಿಸಿದೆ. ಎಐಎಂಐಎಂ ನಾಯಕ ಅಸಾದುದ್ದೀನ್ ಉವೈಸಿ, ಈ ರೀತಿ ಘೋಷಣೆ ಕೂಗಲು ನಿರಾಕರಿಸಿದ ಬಳಿಕ ಅದರ ಈ ಆಗ್ರಹ ಹೊರಬಿದ್ದಿದೆ.

ಭಾರತ ಪರ ಘೋಷಣೆ ಕೂಗಲು ನಿರಾಕರಿಸಿದ ಉವೈಸಿಯವರನ್ನು ಹೇಗೆ ರಾಜ್ಯದಿಂದ ಹೊರಹೋಗಲು ಬಿಡಲಾಯಿತೆಂಬುದನ್ನು ತಿಳಿಸುವಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ರನ್ನು ಶಿವಸೇನೆ ಒತ್ತಾಯಿಸಿದೆ.
ಹಾರ್ದಿಕ್ ಪಟೇಲ್ ಪ್ರಮಾದದಿಂದ ರಾಷ್ಟ್ರಧ್ವಜವನ್ನು ಅಪಮಾನಿಸಿದರು. ಅವರು ದೇಶದ್ರೋಹದ ಆರೋಪದಲ್ಲಿ ಈಗಲೂ ಕಾರಾಗೃಹದಲ್ಲಿದ್ದಾರೆ. ಅಸಾದುದ್ದೀನ್ ಉವೈಸಿ ಸಹ ಭಾರತ ಮಾತೆಯನ್ನು ಅವಮಾನಿಸುವ ಮೂಲಕ ರಾಷ್ಟ್ರದ್ರೋಹ ಮಾಡಲಿಲ್ಲವೇ? ಭಾರತ್ ಮಾತಾಕೀ ಜೈ’ ಎನ್ನದ ಎಲ್ಲರ ಪೌರತ್ವ ಹಾಗೂ ಮತದಾನದ ಹಕ್ಕನ್ನು ರದ್ದುಪಡಿಸಬೇಕು ಎಂದು ಶಿವಸೇನೆಯ ಮುಖವಾಣಿ ‘ಸಾಮ್ನಾ’ದ ತೀಕ್ಷ್ಣ ಸಂಪಾದಕೀಯವೊಂದು ಹೇಳಿದೆ.
ರಾಜ್ಯದಲ್ಲಿ ಬಿಜೆಪಿಯ ಮುಖ್ಯಮಂತ್ರಿಯಿದ್ದಾರೆ. ದೇಶವನ್ನು ಅವಮಾನಿಸಿದ ಉವೈಸಿಯವರನ್ನು ಲಾತೂರ್‌ನಿಂದ ಹೋಗಲು ಹೇಗೆ ಅವಕಾಶ ನೀಡಲಾಯಿತೆಂಬುದಕ್ಕೆ ಅವರು ಉತ್ತರಿಸಬೇಕೆಂದು ಅದು ಆಗ್ರಹಿಸಿದೆ.
ಉವೈಸಿಯವರ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಂಪಾದಕೀಯ, ಅವರಂತಹವರು ಹರಡುವ ಚಿಂತನೆಗಳಿಂದಾಗಿಯೇ ಮುಸ್ಲಿಮ್ ಸಮುದಾಯವು ‘ಹಿಂದುಳಿದಿದೆ’ ಎಂದು ಶಿವಸೇನೆ ಹೇಳಿದೆ.
ಆದಾಗ್ಯೂ, ಶಿವಸೇನೆಯು ಕೇವಲ ರಾಜಕೀಯ ಆಷಾಢಭೂತಿತನವನ್ನು ತೋರಿಸುತ್ತಿದೆಯೆಂದು ಮಹಾರಾಷ್ಟ್ರ ಕಾಂಗ್ರೆಸ್‌ನ ವಕ್ತಾರ ಅಲ್-ನಝೀರ್ ಝಕಾರಿಯಾ ಟೀಕಿಸಿದ್ದಾರೆ.
ಇದು ಆಷಾಢಭೂತಿತನದ ಪರಮಾವಧಿಯಾಗಿದೆ. ಒಂದೆಡೆಯಿಂದ ಶಿವಸೇನೆ ಇತರರಿಗೆ ದೇಶಭಕ್ತಿಯ ಪಾಠ ಹೇಳುತ್ತಿದೆ. ಇನ್ನೊಂದೆಡೆ ಅದರ ಆಡಳಿತದ ಬಿಬಿಎಂಪಿಯಲ್ಲಿ ಭಾರೀ ಭ್ರಷ್ಟಾಚಾರ ನಡೆಸುತ್ತಿದೆ. ವಿವಿಧ ಉದ್ದೇಶಗಳಿಗಾಗಿ ನೀಡಲಾಗಿರುವ ಗುತ್ತಿಗೆಗಳಲ್ಲಿ ನೂರಾರು ಕೋಟಿ ರೂ. ಅವ್ಯವಹಾರ ನಡೆದಿದೆ ಎಂದವರು ಆರೋಪಿಸಿದ್ದಾರೆ.
ಶಿವಸೇನೆ ಶುದ್ಧ ಹಸ್ತವಾಗಿ ಹೊರ ಬಂದ ಬಳಿಕವೇ, ಅದರ ಮಿತ್ರ ಪಕ್ಷ ಬಿಜೆಪಿ ಸಹ ಅದನ್ನು ಗಂಭೀರವಾಗಿ ಪರಿಗಣಿಸುತ್ತದೆಂಬುದನ್ನು ಅದು ತಿಳಿದುಕೊಳ್ಳುವುದು ಒಳ್ಳೆಯದು. ಕೇವಲ ಘೋಷಣೆ ಕೂಗುವುದರಿಂದ ಅವರು ರಾಷ್ಟ್ರವಾದಿಗಳಾಗಲಾರರೆಂದು ಝಕಾರಿಯಾ ತಿವಿದಿದ್ದಾರೆ.
 
ಆರೆಸ್ಸೆಸ್ ಹಾಗೂ ಬಿಜೆಪಿಗಳ ಅಭಿಪ್ರಾಯಗಳನ್ನು ಪ್ರತಿಯೊಬ್ಬರೂ ಒಪ್ಪಲಾರರೆಂದು ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X