ವಿಶ್ವಕಪ್‌ನಿಂದ ಮಾಲಿಂಗ ಔಟ್

ಕೋಲ್ಕತಾ, ಮಾ.18: ಮಂಡಿನೋವಿನಿಂದ ಚೇತರಿಸಿಕೊಳ್ಳಲು ವಿಫಲರಾಗಿರುವ ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಪ್ರಸ್ತುತ ನಡೆಯುತ್ತಿರುವ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ.
32ರ ಹರೆಯದ ಮಾಲಿಂಗ ಗುರುವಾರ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಿಂದಲೂ ಹೊರಗುಳಿದಿದ್ದರು. ಇದೀಗ ಅವರು ಸ್ವದೇಶಕ್ಕೆ ಮರಳಿದ್ದಾರೆ.
ಮಾಲಿಂಗ ಹಾಲಿ ಚಾಂಪಿಯನ್ ಶ್ರೀಲಂಕಾ ತಂಡದ ನಾಯಕನಾಗಿ ಆಯ್ಕೆಯಾಗಿದ್ದರು. ಆದರೆ, ವಿಶ್ವಕಪ್ ಆರಂಭವಾಗುವ ಕೆಲವೇ ದಿನಗಳ ಮೊದಲು ನಾಯಕತ್ವವನ್ನು ತ್ಯಜಿಸಿದ್ದರು.
ಮಾಲಿಂಗ ಬದಲಿಗೆ ಆ್ಯಂಜೆಲೊ ಮ್ಯಾಥ್ಯೂಸ್ ಶ್ರೀಲಂಕಾದ ಟ್ವೆಂಟಿ-20 ತಂಡದ ನಾಯಕನಾಗಿ ಆಯ್ಕೆಯಾಗಿದ್ದರು.
62 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 78 ವಿಕೆಟ್‌ಗಳನ್ನು ಕಬಳಿಸಿರುವ ಮಾಲಿಂಗ ಸಾರ್ವಕಾಲಿಕ ಶ್ರೇಷ್ಠ ಟ್ವೆಂಟಿ-20 ಬೌಲರ್‌ಗಳ ಪಟ್ಟಿಯಲ್ಲಿ ನಾಲ್ಕನೆ ಸ್ಥಾನದಲ್ಲಿದ್ದಾರೆ.
ಶ್ರೀಲಂಕಾ ರವಿವಾರ ವೆಸ್ಟ್‌ಇಂಡೀಸ್ ತಂಡವನ್ನು ಎದುರಿಸಲಿದೆ. ಮಾಲಿಂಗರಿಂದ ತೆರವಾದ ಸ್ಥಾನಕ್ಕೆ ಬದಲಿ ಬೌಲರ್‌ನ್ನು ಇನ್ನೂ ಘೋಷಿಸಿಲ್ಲ.
Next Story





