Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ 125ನೆ ಜನ್ಮ ದಿನಾಚರಣೆ

ಅಂಬೇಡ್ಕರ್ 125ನೆ ಜನ್ಮ ದಿನಾಚರಣೆ

ಅದ್ದೂರಿ ಆಚರಣೆಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ18 March 2016 11:58 PM IST
share
ಅಂಬೇಡ್ಕರ್ 125ನೆ ಜನ್ಮ ದಿನಾಚರಣೆ

ಬೆಂಗಳೂರು, ಮಾ. 18: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಹಿಂ.ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕಾಭಿವೃದ್ಧಿ ಸೇರಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಟ್ಟಾರೆ 7,967ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಮುಂಗಡ ಪತ್ರ ಮಂಡಿಸಿದ ಅವರು, ‘ಜಾತಿ-ಕುಲ-ಮತ ಧರ್ಮ ಪಾಶಗಳ ಕಡಿದೊಡೆದು, ಎದೆ ಹಿಗ್ಗಿ ಹಾಡಬೇಕು, ಯುಗ ಯುಗಗಳಾಚೆಯಲಿ ಲೋಕ ಲೋಕಾಂತರದಲ್ಲಿ, ಆ ಹಾಡು ಗುಡುಗಬೇಕು’ ಎಂಬ- ಕಯ್ಯಿರ ಕಿಞಣ್ಣರೈ ಅವರ ಉಲ್ಲೇಖದೊಂದಿಗೆ ಸಮಾಜ ಕಲ್ಯಾಣ ಭಾಷಣ ಆರಂಭಿಸಿದರು. ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೆ ಜನ್ಮ ದಿನಾಚರಣೆಯನ್ನು ರಾಜ್ಯದಲ್ಲಿ ಬೃಹತ್ ಮಟ್ಟದಲ್ಲಿ ಆಚರಿಸಲಾಗುವುದು. ವಿದ್ಯಾರ್ಥಿನಿಲಯಗಳಲ್ಲಿ, ವಸತಿ ಶಾಲೆಗಳಲ್ಲಿ ಮತ್ತು ಅನುದಾನಿತ ವಸತಿನಿಲಯಗಳಲ್ಲಿ 3ಲಕ್ಷದಷ್ಟಿರುವ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚವನ್ನು 200 ರೂ.ಗಳಿಗೆ ಹೆಚ್ಚಿಸಲು 60 ಕೋಟಿ ರೂ.ಅನುದಾನ ನೀಡಲಾಗಿದೆ.

ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅನುಕೂಲವಾಗುವಂತೆ ಬೇಡಿಕೆಗನುಗುಣವಾಗಿ 100 ಹೊಸ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡಲಾಗುವುದು ಎಂದು ಪ್ರಕಟಿಸಲಾಗಿದೆ.

 ಎಸ್ಸಿ-ಎಸ್ಟಿ ಬಾಲಕ/ಬಾಲಕಿಯರಿಗಾಗಿ ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಹೊಸದಾಗಿ 125 ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗುವ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಲಾಗಿದೆ. ವಿವಿ ಮಟ್ಟದಲ್ಲಿ ರ್ಯಾಂಕ್ ಪಡೆಯುವ ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಪ್ರೋತ್ಸಾಹಿಸಲು ಕಲೆ, ವಿಜ್ಞಾನ, ವೈದ್ಯಕೀಯ, ತಾಂತ್ರಿಕ, ವಾಣಿಜ್ಯ, ಕಾನೂನು ಸ್ನಾತಕೋತ್ತರ ಪದವಿಯಲ್ಲಿ 1ರಿಂದ 5ನೆ ರ್ಯಾಂಕ್ ಪಡೆಯುವ ಅಭ್ಯರ್ಥಿಗಳಿಗೆ 50 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ. ಎಸ್ಸಿ-ಎಸ್ಟಿ ಐ.ಸಿ.ಡಬ್ಲ್ಯೂ.ಎ, ಕಂಪೆನಿ ಸೆಕ್ರೆಟರಿ ವೃತ್ತಿಪರ ಕೋರ್ಸ್‌ಗಳಲ್ಲಿ ಇಂಟರ್ ಮತ್ತು ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅನುಕ್ರಮವಾಗಿ ರೂ.50 ಸಾವಿರ ರೂ. ಮತ್ತು 1ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಲಾಗಿದೆ. ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ ಮೂರು ವರ್ಷಗಳ ವಿವಿಧ ಪಾಲಿಟೆಕ್ನಿಕ್ ಡಿಪ್ಲೊಮಾ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಲ್ಲಿ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗಳಿಗೆ 20 ಸಾವಿರ ರೂ.ನಂತೆ ಪ್ರೋತ್ಸಾಹ ಧನ ನೀಡಲಾಗುವುದು.
ಎಸ್ಟಿ ಬಗ್ಗೆ ಸಮಗ್ರ ಅಧ್ಯಯನಕ್ಕೆ ಹಂಪಿ ವಿಶ್ವವಿದ್ಯಾಲಯದಲ್ಲಿ ಮರ್ಹಷಿ ವಾಲ್ಮೀಕಿ ಅಧ್ಯಯನ ಪೀಠವನ್ನು ಪ್ರಾರಂಭಿಸಲಾಗುವುದು. ವಾರ್ಷಿಕ ವರಮಾನ 2.50ಲಕ್ಷ ರೂ. ಗಳಿಗಿಂತ ಹೆಚ್ಚು ಮತ್ತು 10 ಲಕ್ಷ ರೂ.ಗಳಿಗಿಂತ ಒಳಗಿರುವ ಸಿಇಟಿ ಮೂಲಕ ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸ್‌ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳಿಗೂ ಸಹ ಶೇ.100ರಷ್ಟು ಸರಕಾರ ನಿಗದಿಪಡಿಸಿದ ಶುಲ್ಕವನ್ನು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳಿಂದ ಮರುಪಾವತಿಸಲಾಗುವುದು.

ಕೆಎಸ್‌ಎಫ್‌ಸಿ ವತಿಯಿಂದ ಶೇ.4ರ ಬಡ್ಡಿ ಸಹಾಯಧನ ಯೋಜನೆಯನ್ನು ರಾಷ್ಟ್ರೀಕೃತ ಬ್ಯಾಂಕ್‌ಗಳು/ಅಪೆಕ್ಸ್ ಬ್ಯಾಂಕ್/ಡಿಸಿಸಿ ಬ್ಯಾಂಕ್‌ಗಳಿಗೆ ವಿಸ್ತರಣೆ ಮಾಡಲಾಗುವುದು. ಈಗಿರುವ 5 ಕೋಟಿ ರೂ.ಗಳ ಸಾಲದ ಮಿತಿಯನ್ನು 10 ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು. ಇದಕ್ಕಾಗಿ 40 ಕೋಟಿ ರೂ.ಅನುದಾನ ಒದಗಿಸಲಾಗುವುದು. 2001ರಿಂದ 2015ರ ವರೆಗೆ ನೇರ ನೇಮಕಾತಿಯಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸಿ, ಭರ್ತಿ ಮಾಡಲು ಕ್ರಮ ವಹಿಸಲಾಗುವುದು. ಪರಿಶಿಷ್ಟ ಜಾತಿ ಉಪ ಯೋಜನೆ/ಗಿರಿಜನ ಉಪ ಯೋಜನೆಯಡಿ ವಿವಿಧ ಅಭಿವೃದ್ಧಿ ಇಲಾಖೆಗಳು ವಿವಿಧ ಯೋಜನೆಗಳನ್ನು ಪ್ರಕಟಿಸಿದ್ದು ಸದರಿ ಯೋಜನೆಗಳ ಪ್ರಯೋಜನ ಉದ್ದೇಶಿತ ಜನರಿಗೆ ತಲುಪುತ್ತಿರುವ ಬಗ್ಗೆ ಸೋಯಲ್ ಆಡಿಟ್ ಕೋಶವನ್ನು ಇಲಾಖೆಯಲ್ಲಿ ಪ್ರಾರಂಭಿಸಲಾಗುವುದು.

ಬೆಂಗಳೂರು ನಗರದಲ್ಲಿ ಡಾ.ಬಾಬುಜಗಜೀವನರಾಮ್ ಸಂಶೋಧನಾ ಸಂಸ್ಥೆಯನ್ನು ಮಾಗಡಿ ರಸ್ತೆಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಸ್ಥಾಪಿಸಿ ಸಂಶೋಧನೆ ಮತ್ತು ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಸಾಮಾಜಿಕ ನ್ಯಾಯಕ್ಕಾಗಿ ಎಲ್.ಜಿ.ಹಾವನೂರ್ ಸ್ಮಾರಕವನ್ನು 1ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

ಆದಿವಾಸಿ ಸಮುದಾ ಯಗಳಾದ ಕೊರಗರು, ಮಲೆಕುಡಿಯ, ಸೋಲಿಗ, ಜೇನು ಕುರುಬ, ಕಾಡು ಕುರುಬ, ಇರುಳಿಗ ಮುಂತಾದ ಜನಾಂಗಗಳ ಸಮಗ್ರ ಅಭಿವೃದ್ಧಿಗಾಗಿ ಮರ್ಹಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಡಿಯಲ್ಲಿ ಪ್ರತ್ಯೇಕ ಮಂಡಳಿಯನ್ನು ಸ್ಥಾಪಿಸಲಾಗುವುದು.

ರಾಜ್ಯದ ಗಡಿ ಪ್ರದೇಶಗಳಲ್ಲಿರುವ ಎಸ್ಸಿ-ಎಸ್ಟಿ ಕಾಲನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು. 2016-17ನೆ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಒಟ್ಟಾರೆಯಾಗಿ 5464 ಕೋಟಿ ರೂ. ಒದಗಿಸಲಾಗಿದೆ.

ಹಿಂ. ವರ್ಗಗಳ ಕಲ್ಯಾಣ

87 ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳನ್ನು ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳನ್ನಾಗಿ ಉನ್ನತೀಕರಿಸಲು 5.67 ಕೋಟಿ ರೂ. ಒದಗಿಸಲಾಗುವುದು. 37 ಆಶ್ರಮ ಶಾಲೆಗಳನ್ನು ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳನ್ನಾಗಿ ಉನ್ನತೀಕರಿಸಲಾಗುವುದು. ಹಿಂದುಳಿದ ವರ್ಗಗಳ ಆಶ್ರಮ ಶಾಲೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಮತ್ತು ವಸತಿ ಶಾಲೆಗಳ ಮಾಸಿಕ ಭೋಜನದ ವೆಚ್ಚಗಳನ್ನು 200 ರೂ.ಗಳು ಮತ್ತು ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯಗಳು ಹಾಗೂ ಅನಾಥಾಲಯಗಳವಿ ದ್ಯಾರ್ಥಿಗಳ ಮಾಸಿಕ ಭೋಜನ ದರವನ್ನು ಹಾಲಿ ದರಕ್ಕಿಂತ 200 ರೂಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಹೆಚ್ಚಿನ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರವನ್ನು ಒದಗಿಸಲು ಸಾಧ್ಯ. ನರ್ಸಿಂಗ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಮಾಸಿಕ ಶಿಷ್ಯ ವೇತನವನ್ನು 1ಸಾವಿರ ರೂ.ಗಳಿಂದ 1,500ರೂ.ಗಳಿಗೆ ಹೆಚ್ಚಿಸಲಾಗುವುದು. ಕಾನೂನು ಪದವೀಧರರ ಮಾಸಿಕ ತರಬೇತಿ ಭತ್ಯೆಯನ್ನು 1ಸಾವಿರ ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು.

ಐಎಎಸ್/ಕೆಎಎಸ್/ಬ್ಯಾಂಕಿಂಗ್ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯುತ್ತಿರುವ ಅಭ್ಯರ್ಥಿಗಳಿಗೆ ನೀಡುತ್ತಿರುವ ಮಾಸಿಕ ತರಬೇತಿ ಭತ್ತೆಯನ್ನು ಎಲ್ಲರಿಗೂ ಸಮಾನವಾಗಿ 2 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲಾಗುವುದು.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿರುವ 1ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ವಸತಿಶಾಲೆ ಇಲ್ಲದೇ ಇರುವ ಹೋಬಳಿಗಳಲ್ಲಿ 155 ವಸತಿ ಶಾಲೆಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 7.75 ಕೋಟಿ ರೂ. ಒದಗಿಸಲಾಗುವುದು.

ವಸತಿಶಾಲೆಗಳ ಹಾಗೂ ಹಾಸ್ಟೆಲ್‌ಗಳ ನಿರ್ಮಾಣಕ್ಕಾಗಿ 276.96 ಕೋಟಿ ರೂ. ಒದಗಿಸಲಾಗುವುದು. ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಹುಟ್ಟೂರಾದ ಬೆಟ್ಟದತುಂಗ ಹಾಗೂ ಕಲ್ಲಹಳ್ಳಿ ಗ್ರಾಮಗಳ ಅಭಿವೃದ್ದಿಗೆ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
ಹಿಂ.ವರ್ಗಗಳ ಸ್ವಯಂ ಸೇವಾ ಸಂಸ್ಥೆಗಳು ನಿರ್ವಹಣೆ ಮಾಡುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತಲಾ 5 ಲಕ್ಷ ರೂ.ಗಳಂತೆ ಒಂದು ಬಾರಿಯ ಅನುದಾನವನ್ನು ನೀಡಲು 12.50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ಹಿಂ.ವರ್ಗಗಳ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳಲ್ಲಿ ಶಿಕ್ಷಣ ಪಡೆಯಲು ಸಿಇಟಿಮುಖಾಂತರ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಹಣವನ್ನು ಮುಂಗಡ ಠೇವಣಿಯಾಗಿಟ್ಟು ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.
ಮಡಿವಾಳ, ಸವಿತಾ ಸಮಾಜ, ತಿಗಳ, ಕುಂಬಾರ ಹಾಗೂ ಉಪ್ಪಾರ ಸಮುದಾ ಯಗಳ ಅಭಿವೃದ್ಧಿಗಾಗಿ ತಲಾ 10 ಕೋಟಿ ರೂ.ಗಳಂತೆ 50ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಅತಿ ಹಿಂದುಳಿದ ತಾಲೂಕುಗಳಲ್ಲಿ ಯುವಜನರ ಆರ್ಥಿಕ ಸಶಕ್ತೀಕರಣಕ್ಕಾಗಿ 10 ಕೋಟಿ ರೂ. ಒದಗಿಸಲಾಗುವುದು. ಸಾಲ ಮತ್ತು ಸಹಾಯಧನ ಸ್ವಉದ್ಯೋಗ ಯೋಜನೆಯಡಿ ಪ್ರಯೋಜನ ಪಡೆಯುವ 30 ಸಾವಿರ ಫಲಾನುಭವಿಗಳಿಗೆ ಉದ್ಯಮಶೀಲತೆ ತರಬೇತಿಯನ್ನು 5 ಕೋಟಿ ರೂ.ಗಳ ವೆಚ್ಚದಲ್ಲಿ ನೀಡಲಾಗುವುದು.

2016-17ನೆ ಸಾಲಿನಲ್ಲಿ ಹಿಂ.ವರ್ಗಗಳ ಕಲ್ಯಾಣ ಇಲಾಖೆಗೆ ಒಟ್ಟಾರೆಯಾಗಿ 2503 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X