ಕಾರ್ಕಳ: 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ತರಬೇತಿ ಶಿಬಿರ

ಕಾರ್ಕಳ: ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ಸಾಣೂರು ಸ.ಪ.ಪೂ.ಕಾಲೇಜಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ತರಬೇತಿ ನೀಡಲಾಯಿತು. ಮೂಡುಬಿದಿರೆ ಜೈನ ಪ.ಪೂ.ಕಾಲೇಜಿನ ಅಧ್ಯಾಪಕ ಮುನಿರಾಜ ರೆಂಜಾಳ ತರಬೇತಿ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಜಯಂತ ಎಸ್., ಯುವಕ ಮಂಡಲದ ಅಧ್ಯಕ್ಷ ಪ್ರಕಾಶ ಮಡಿವಾಳ್, ಕೋಶಾಧಿಕಾರಿ ರಾಜೇಂದ್ರ ಪೂಜಾರಿ, ಸಹಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ನಂದಿನಿ ನಾಯ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಜಾನ್ ವಂದಿಸಿದರು.
Next Story





