Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘ ಪರಿವಾರದ ಕೋಮುವಾದಿ ತಂತ್ರ ಕ್ಕೆ...

ಸಂಘ ಪರಿವಾರದ ಕೋಮುವಾದಿ ತಂತ್ರ ಕ್ಕೆ ಸರಕಾರ ಮಣಿಯಬಾರದು -ಪ್ರಗತಿಪರ ಸಂಘಟನ

ಪುತ್ತೂರು ಜಾತ್ರೆ ಆಮಂತ್ರಣ ಪತ್ರ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ19 March 2016 10:10 PM IST
share
ಸಂಘ ಪರಿವಾರದ ಕೋಮುವಾದಿ ತಂತ್ರ ಕ್ಕೆ ಸರಕಾರ ಮಣಿಯಬಾರದು -ಪ್ರಗತಿಪರ ಸಂಘಟನ

ಮಂಗಳೂರು.ಮಾ.19:ಪುತ್ತೂರು ಜಾತ್ರೆ ಆಮಂತ್ರಣ ಪತ್ರಿಕೆಯಲ್ಲಿ ಜಿಲ್ಲಾಧಿಕಾರಿಯಾಗಿರುವ ಎ.ಬಿ.ಇಬ್ರಾಹೀಂ ಅವರ ಹೆಸರನ್ನು ತೆಗೆಯಬೇಕು ಎಂದು ಒತ್ತಡ ಹೇರುತ್ತಿರುವ ಸಂಘಪರಿವಾರದ ತಂತ್ರಗಳಿಗೆ ಬಲಿಯಾಗಬಾರದು. ದೇಶದ ಸಂವಿಧಾನ ಬದ್ಧವಾದ ರೀತಿಯಲ್ಲಿ ಸರಕಾರಿ ಅಧಿಕಾರಿಗೆ ತಮ್ಮ ವ್ಯಾಪ್ತಿಯ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಭಾಗವಹಿಸುವ ಅಧಿಕಾರವಿದೆ. ಜಿಲ್ಲಾಧಿಕಾರಿಯ ಹೆಸರನ್ನು ಆಮಂತ್ರಣ ಪತ್ರಿಕೆಯಿಂದ ತೆಗೆಯ ಬೇಕು ಎಂದು ಒತ್ತಡ ಹೇರಿದರೆ ಪ್ರಗತಿ ಪರ ಸಂಘಟನೆಗಳಿಂದ ಬೀದಿಗಿಳಿದು ಹೋರಾಟ ನಡೆಸಬೇಕಾದೀತು.ಈ ರೀತಿ ಅಸಹಿಷ್ಣುತೆಯ ವಾತವರಣ ನಿರ್ಮಿಸಲು ಹೊರಟಿರುವವರ ವಿರುದ್ಧ ಸರಕಾರ ಕಠಿಣ ಕ್ರಮ ಕೈ ಗೊಳ್ಳಬೇಕು ಎಂದು ಸಂಘಟನೆಗಳ ಪರವಾಗಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಸಂವಿಧಾನಕ್ಕೆ ಗೌರವ ನೀಡಿ:-ಪುತ್ತೂರು ಜಾತ್ರೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ರವರ ಹೆಸರು ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ.ದೇಶದ ಜನ ಅನೋನ್ಯತೆಯಿಂದ ಜಾತಿ ಬೇಧ ಮರೆತು ಬದುಕ ಬೇಕು ಎನ್ನುವ ಆಶಯಕ್ಕೆ ;ಹಲವು ಕಡೆ ಹಿಂದು -ಮುಸಲ್ಮಾನರು ಜೊತೆಯಾಗಿ ದೇವಸ್ಥಾನಗಳ ಜಾತ್ರೆಯನ್ನು ನಡೆಸುವ,ಸಹಕಾರ ನೀಡುವ ಪರಂಪರೆಗೆ ಪುತ್ತೂರಿನ ಘಟನೆ ವಿರುದ್ಧವಾಗಿದೆ .ಸಂವಿಧಾನಕ್ಕೆ ಮೊದಲು ನಾವು ಗೌರವ ನೀಡಬೇಕಾಗಿದೆ ಎಂದು ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ದೇವದಾಸ್ ತಿಳಿಸಿದ್ದಾರೆ.

     ಸಂಘ ಪರಿವಾರದ ತಂತ್ರ:-ಜಿಲ್ಲೆಯಲ್ಲಿ 30ವರ್ಷಗಳ ಹಿಂದೆ ಬಹುತೇಕ ಎಲ್ಲಾ ಜಾತ್ರೆ ,ಕ್ರೈಸ್ತರ ,ಮುಸಲ್ಮಾನರ ಹಾಗೂ ಇತರ ಹಬ್ಬಗಳಲ್ಲಿ ಹಿಂದು ಮುಸಲ್ಮಾನರು ಪಾಲ್ಗೊಳ್ಳುತ್ತಿದ್ದರು. ಪ್ರಸಕ್ತ ಸಂಘ ಪರಿವಾರದ ತಂತ್ರಗಳಿಂದ ವಾತವರಣ ಬದಲಾಗಿದೆ. ಕೋಮುದ್ವೇಷದ ವಾತವರಣ ವಿಸ್ತಾರವಾಗಿದೆ.ಪುತ್ತೂರಿನ ಘಟನೆ ಈ ರೀತಿಯ ಸಂಘ ಪರಿವಾರದ ತಂತ್ರಗಾರಿಕೆಯಾಗಿದೆ.ಜನರು ಈ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಮುದಾಯ ಸಂಘಟನೆಯ ಸಂಚಾಲಕ ವಾಸುದೇವ ಉಚ್ಚಿಲ್ ತಿಳಿಸಿದ್ದಾರೆ.

 ಈ ಸಂದರ್ಭದಲ್ಲಿ ವಿವಿಧ ಪ್ರಗತಿ ಪರ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

       

share
ವಾರ್ತಾಭಾರತಿ
ವಾರ್ತಾಭಾರತಿ
Next Story
X