Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ದಲಿತರ ಪರವಾಗಿದ್ದ ಟಿಪ್ಪುಗೆ ದೇಶದ್ರೋಹ...

'ದಲಿತರ ಪರವಾಗಿದ್ದ ಟಿಪ್ಪುಗೆ ದೇಶದ್ರೋಹ ಪಟ್ಟ'

ವಾರ್ತಾಭಾರತಿವಾರ್ತಾಭಾರತಿ19 March 2016 10:37 PM IST
share
ದಲಿತರ ಪರವಾಗಿದ್ದ ಟಿಪ್ಪುಗೆ ದೇಶದ್ರೋಹ ಪಟ್ಟ

ಮನೆಯಂಗಳದಲ್ಲಿ ಮಾತುಕತೆಯಲ್ಲಿ ಚಿಂತಕ ಡಾ.ಜವರಯ್ಯ
ಬೆಂಗಳೂರು, ಮಾ.19: ಮೈಸೂರಿನ ವೀರ ಹೋರಾಟಗಾರ ಟಿಪ್ಪು ಸುಲ್ತಾನ್ ತನ್ನ ಸೈನ್ಯದಲ್ಲಿ ದಲಿತರನ್ನು ನೇಮಿಸಿಕೊಂಡಿದ್ದ. ಇದನ್ನೇ ನೆಪವಾಗಿಟ್ಟುಕೊಂಡು ಕೆಲವು ಮೂಲಭೂತವಾದಿಗಳು ಟಿಪ್ಪುವಿಗೆ ದೇಶ ದ್ರೋಹ ಪಟ್ಟ ಕಟ್ಟುತ್ತಿದ್ದಾರೆ ಎಂದು ಅಂಬೇಡ್ಕರ್ ವಾದಿ ಚಿಂತಕ ಡಾ.ಮ.ನ.ಜವರಯ್ಯ ತಿಳಿಸಿದ್ದಾರೆ.
ಶನಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ನಯನ ಸಭಾಂಗಣದಲ್ಲಿ ಆಯೋಜಿ ಸಿದ್ದ 'ಮನೆಯಂಗಳದಲ್ಲಿ ಮಾತುಕತೆ' ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ದೇಶದ ಹಲವು ಪ್ರದೇಶಗಳನ್ನು ತಮ್ಮ ಕೈವಶ ಮಾಡಿಕೊಂಡಿದ್ದ ಬ್ರಿಟಿಷರಿಗೆ ಟಿಪ್ಪು ಸುಲ್ತಾನ್ ಆಳ್ವಿಕೆಗೆ ಮೈಸೂರು ಪ್ರಾಂತವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಟಿಪ್ಪು ಸುಲ್ತಾನ್ ತನ್ನ ಸೈನ್ಯ ಬಲಿಷ್ಠಗೊಳಿಸಲು ದಲಿತ ಯುವಕರನ್ನು ನೇಮಿಸಿಕೊಂಡಿದ್ದ. ಹೀಗಾಗಿಯೇ ಬ್ರಿಟಿಷರು ಟಿಪ್ಪು ಸೈನ್ಯವನ್ನು ನೋಡಿ ನಡುಗುತ್ತಿದ್ದರೆಂದು ತಿಳಿಸಿದರು.
ಮಾಜಿ ಸಚಿವ ಅರಣ್‌ಶೌರಿ 'ವರ್‌ಶಿಪ್ಪಿಂಗ್ ಫಾಲ್ಸ್ ಗಾಡ್ಸ್'(ಸುಳ್ಳು ದೇವರುಗಳ ಸೃಷ್ಟಿ) ಕೃತಿಯಲ್ಲಿ ಅಂಬೇಡ್ಕರ್‌ರವರನ್ನು ದೇಶದ್ರೋಹಿ ಎಂದು ಕರೆದಿದ್ದರು. ಅವರ ಮಾತನ್ನು ಅನುಯಾಯಿಗಳೂ ಒಪ್ಪುವುದಿಲ್ಲ. ಈ ರೀತಿಯಲ್ಲಿ ಅಂಬೇಡ್ಕರ್ ಅವರನ್ನು ತೇಜೋವಧೆ ಮಾಡುವಂತಹ ಕೃತ್ಯಗಳು ದೇಶದಲ್ಲಿ ನಡೆಯುತ್ತಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.
1970ರವರೆಗೂ ರಾಜ್ಯದಲ್ಲಿ ಅಂಬೇಡ್ಕರ್ ಕುರಿತು ಒಂದು ಲೇಖನ ಬಂದಿರಲಿಲ್ಲ. ಹೀಗಾಗಿ ನಾನು ಅಂಬೇಡ್ಕರ್ ಕುರಿತು ಪುಸ್ತಕ ರಚಿಸಿ, ಪ್ರಕಾಶಕರಲ್ಲಿ ಮುದ್ರಣಕ್ಕಾಗಿ ಬೇಡಿಕೆ ಇಟ್ಟೆ. ಆದರೆ, ಒಬ್ಬ ಪ್ರಕಾಶಕನೂ ಮುದ್ರಿಸಲು ಮುಂದೆ ಬರಲಿಲ್ಲ. ಹೀಗಾಗಿ ಅವರಿವರ ಬಳಿ ಹಣವನ್ನು ಸಂಗ್ರಹಿಸಿ ಮುದ್ರಿಸಬೇಕಾಯಿತು ಎಂದು ಅವರು ಸ್ಮರಿಸಿದರು.
ದಲಿ ಚಳವಳಿಗಾರರು ತಮ್ಮ ಹೋರಾಟಗಳನ್ನು ಮತ್ತೊಮ್ಮೆ ಪುನರ್ ವಿಮರ್ಶಿಸಿ ಕೊಳ್ಳಬೇಕಾದ ಅಗತ್ಯವಿದೆ. ಕೇವಲ ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿ ಸಮುದಾಯವನ್ನು ಟೀಕಿಸುವುದರಲ್ಲೇ ಸಮಯ ಕಳೆಯಬಾರದು. ಬೌದ್ಧಿಕವಾಗಿ ಅವರಿಗಿಂತ ಸಮರ್ಥರಾಗುವತ್ತ ಗಮನ ಹರಿಸಬೇಕೆಂದು ಚಿಂತಕ ಡಾ.ಮ.ನ.ಜವರಯ್ಯ ಕಿವಿಮಾತು ಹೇಳಿದರು.
ವಿಶ್ವದಲ್ಲಿಯೇ ಮೊಟ್ಟಮೊದಲ ಬಾರಿಗೆ ಸಮಾನತೆಯ ಬೀಜ ಬಿತ್ತಿದವರು ಶಿವಶರಣರು. ಅಂತಹ ಮಹಾನ್ ಶರಣರು ಮೆಟ್ಟಿದ ನಾಡಲ್ಲಿ ಜನಿಸಿರುವ ನಾವೇ ಪುಣ್ಯವಂತರು. ಹೀಗಾಗಿ ಶರಣರ ಆದರ್ಶಗಳಾದ ಜಾತಿ ವಿನಾಶ, ಸಮಾನತೆ, ಭ್ರಾತೃತ್ವಗಳನ್ನು ಮೈಗೂಡಿಸಿಕೊಂಡು ಹೊಸ ನಾಡನ್ನು ಕಟ್ಟಬೇಕು ಎಂದು ಅವರು ಆಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X