ವಿ.ಎಸ್.ಉಗ್ರಪ್ಪ ವಿರುದ್ಧ ಎಫ್‌ಐಆರ್ ದಾಖಲು
ಎರಡು ಕಡೆ ಮತದಾನದ ಹೆಸರು ನೋಂದಣಿ ಆರೋಪ

ಬೆಂಗಳೂರು, ಮಾ. 19: ವಿಧಾನಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪಎರಡು ಕಡೆ ಮತದಾನದ ಹೆಸರು ನೋಂದಣಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಚ್‌ಎಸ್‌ಆರ್ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮದ ನಿವಾಸ ಮತ್ತು ಬೆಂಗಳೂರು ನಗರದ ಎಚ್‌ಎಸ್‌ಆರ್ ಬಡಾವಣೆಯ 6ನೆ ಹಂತದ ತಮ್ಮ ನಿವಾಸದ ಎರಡು ವಿಳಾಸಗಳಲ್ಲಿನ ಮತದಾರರ ಪಟ್ಟಿಗಳಲ್ಲಿ ಉಗ್ರಪ್ಪಅವರ ಹೆಸರು ನೋಂದಣಿಯಾಗಿದೆ ಎನ್ನಲಾಗಿದೆ.
ಇದನ್ನು ಪ್ರಶ್ನಿಸಿ ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್. ರಮೇಶ್ ನೀಡಿರುವ ದೂರಿನ ಅನ್ವಯ, 6ನೆ ಎಸಿಎಂಎಂ ನ್ಯಾಯಾಲಯವು ನೀಡಿದ ಆದೇಶದಂತೆ ಎಚ್‌ಎಸ್‌ಆರ್ ಬಡಾವಣೆ ಪೊಲೀಸರು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Next Story





