ಚೆನ್ನಿತ್ತಲ ಜೊತೆ ರಾಜ್‌ನಾಥ್ ಮಾತುಕತೆ
ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ

ಹೊಸದಿಲ್ಲಿ, ಮಾ.19: ಕಣ್ಣೂರಿನಲ್ಲಿ ಇತ್ತೀಚೆಗೆ ಆರೆಸ್ಸೆಸ್ ಕಾರ್ಯಕರ್ತ ನೊಬ್ಬನನ್ನು ಶಂಕಿತ ಸಿಪಿಎಂ ಕಾರ್ಯಕರ್ತರ ಗುಂಪೊಂದು ಬರ್ಬರವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ರಾಜ್‌ನಾಥ್‌ಸಿಂಗ್ ಅವರು ರಾಜ್ಯದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಜೊತೆ ದೂರವಾಣಿ ಮಾತುಕತೆ ನಡೆಸಿದ್ದಾರೆ. ಘಟನೆ ಬಗ್ಗೆ ತಾನು ಕೇರಳ ಗೃಹ ಸಚಿವರ ಜೊತೆ ಮಾತನಾಡಿದ್ದು, ಅವರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆಂದು ರಾಜ್‌ನಾಥ್ ಹೊಸದಿಲ್ಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ವಿರುದ್ಧ ದಾಳಿಗಳು ಹೆಚ್ಚುತ್ತಿರುವ ಬಗ್ಗೆ ಸುದ್ದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಣ್ಣೂರಿನಲ್ಲಿ ಪ್ರಾಥಮಿಕ ಶಾಲಾ ಮಕ್ಕಳನ್ನು ಆಟೋರಿಕ್ಷಾದಲ್ಲಿ ಶಾಲೆಗೆ ಕೊಂಡೊಯ್ಯುತ್ತಿದ್ದಾಗ, ಶಂಕಿತ ಸಿಪಿಎಂ ಕಾರ್ಯಕರ್ತರ ಗುಂಪೊಂದು ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಅವರನ್ನು ಬರ್ಬರವಾಗಿ ಹತ್ಯೆಗೈದಿತ್ತು. ಕಳೆದ ಕೆಲವು ವರ್ಷಗಳಲ್ಲಿ ಕಣ್ಣೂರಿನಲಿ ್ಲ ತನ್ನ ನೂರಕ್ಕೂ ಅಧಿಕ ಮಂದಿ ಕಾರ್ಯಕರ್ತರು ರಾಜಕೀಯ ದ್ವೇಷಕ್ಕೆ ಬಲಿಯಾಗಿದ್ದಾರೆಂದು ಬಿಜೆಪಿ ಆಪಾದಿಸಿದೆ.





