Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ಪಾನ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿ...

ನಕಲಿ ಪಾನ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಲು ನೂತನ ತಂತ್ರಜ್ಞಾನ

ವಾರ್ತಾಭಾರತಿವಾರ್ತಾಭಾರತಿ20 March 2016 7:52 PM IST
share
ನಕಲಿ ಪಾನ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಲು ನೂತನ ತಂತ್ರಜ್ಞಾನ

ಹೊಸದಿಲ್ಲಿ,ಮಾ.20: ವರ್ಷಗಳ ಶ್ರಮದ ಬಳಿಕ ಆದಾಯ ತೆರಿಗೆ ಇಲಾಖೆಯು ಕೊನೆಗೂ ನಕಲಿ ಪಾನ್‌ಕಾರ್ಡ್ ಹಾವಳಿಯನ್ನು ತಡೆಗಟ್ಟಲು ನೂತನ ತಂತ್ರಜ್ಞಾನವೊಂದನ್ನು ಕಂಡುಕೊಂಡಿದೆ. ಈ ತಂತ್ರಜ್ಞಾನದಿಂದಾಗಿ ನಕಲಿ ಪಾನ್ ಕಾರ್ಡ್‌ನ್ನು ನಿಷ್ಕ್ರಿಯಗೊಳಿಸಬಹುದಾಗಿದೆ.

ಇನ್‌ಕಮ್ ಟ್ಯಾಕ್ಸ್ ಬಿಸಿನೆಸ್ ಅಪ್ಲಿಕೇಷನ್-ಪಾನ್ ಎಂಬ ನೂತನ ವಿದ್ಯುನ್ಮಾನ ವೇದಿಕೆಯನ್ನು ಇಲಾಖೆಯು ಕಾರ್ಯಾರಂಭಗೊಳಿಸಿದ್ದು, ಪ್ರತಿ ಬಾರಿಯೂ ಪಾನ್ ಕಾರ್ಡ್‌ಗಾಗಿ ಹೊಸ ಅರ್ಜಿ ಬಂದಾಗ ಇಂತಹ ನಕಲಿ ಪಾನ್ ಸಂಖ್ಯೆಗಳನ್ನು ಪತ್ತೆ ಹಚ್ಚಲು ತೆರಿಗೆ ಅಧಿಕಾರಿಗಳು ಮತ್ತು ಪಾನ್ ಕಾರ್ಡ್‌ಗಳನ್ನು ವಿತರಿಸುವ ಮಧ್ಯವರ್ತಿ ಸಂಸ್ಥೆಗಳಿಗೆ ಇದು ನೆರವಾಗಲಿದೆ.

ನಕಲಿ ಪಾನ್ ಪಿಡುಗನ್ನು ತಡೆಯಲು ಇಲಾಖೆಯಲ್ಲಿ ಈ ಮೊದಲು ಮ್ಯಾನ್ಯುವಲ್ ವ್ಯವಸ್ಥೆಯನ್ನು ಬಳಸಲಾಗುತ್ತಿತ್ತು. ಆದರೆ ಅದು ದೋಷಪೂರ್ಣವಾಗಿತ್ತು. ಆದರೆ ನೂತನ ವಿದ್ಯುನ್ಮಾನ ವ್ಯವಸ್ಥೆಯು ಅತ್ಯಂತ ನಿಖರವಾಗಿದೆ ಎಂದು ಹೇಳಿದ ಹಿರಿಯ ಅಧಿಕಾರಿಯೋರ್ವರು, ಆದರೆ ಹಳೆಯ ಪಾನ್ ಕಾರ್ಡ್‌ಗಳ ಪ್ರಕರಣಗಳಲ್ಲಿ ಮ್ಯಾನ್ಯುವಲ್ ವ್ಯವಸ್ಥೆ ಮುಂದುವರಿಯಲಿದೆ. ಹಳೆಯ ವ್ಯವಸ್ಥೆಯಲ್ಲಿ ಇಂತಹ ಹೆಚ್ಚು ಪ್ರಕರಣಗಳಿಲ್ಲ. ಮಾಹಿತಿ ಲಭಿಸಿದಾಗಲೆಲ್ಲ ನಕಲಿ ಪಾನ್‌ಗಳನ್ನು ಬಯಲಿಗೆಳೆಯಲಾಗುತ್ತಿದೆ ಎಂದರು.

 ಎರಡು ಪಾನ್ ಕಾರ್ಡ್‌ಗಳೊಂದಿಗೆ ತೆರಿಗೆಯನ್ನು ವಂಚಿಸಲು ಯಾರಿಗೂ ಅವಕಾಶ ದೊರೆಯದಂತೆ ಮಾಡಲು ಇಲಾಖೆಯು ಈ ಹಾವಳಿ ತಡೆಗಾಗಿ ಸೂಕ್ತ ವ್ಯವಸ್ಥೆಗಾಗಿ ವರ್ಷಗಳಿಂದಲೂ ಶ್ರಮಿಸುತ್ತಿತ್ತು. ಈ ಹಿಂದೆ ತೆರಿಗೆ ವಂಚನೆ ಮತ್ತು ಕಪ್ಪುಹಣ ಪ್ರಕರಣಗಳ ತನಿಖೆಯ ಸಂದರ್ಭ ಹಲವಾರು ಸಂದರ್ಭಗಳಲ್ಲಿ ನಕಲಿ ಪಾನ್ ಕಾರ್ಡ್‌ಗಳು ಪತ್ತೆಯಾಗಿದ್ದವು.

 ನೂತನ ವಿದ್ಯುನ್ಮಾನ ವೇದಿಕೆಯು ನಕಲಿ ಪಾನ್ ಪತ್ತೆ ಹಚ್ಚಿದ ನಂತರ ತಮ್ಮ ವ್ಯಾಪ್ತಿಯ ತೆರಿಗೆ ಅಧಿಕಾರಿಗಳನ್ನು ಸಂಪರ್ಕಿಸಿ ನಕಲಿ ಕಾರ್ಡ್‌ನ್ನು ಅವರಿಗೆ ಒಪ್ಪಿಸುವಂತೆ ಅರ್ಜಿದಾರರಿಗೆ ತಿಳಿಸುವಂತೆ ಇಲಾಖಾ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸುತ್ತದೆ. ಅರ್ಜಿದಾರರು ಹಾಗೆ ಮಾಡದಿದ್ದಲ್ಲಿ ಅದು ಅಸಲಿ ಪಾನ್ ಕಾರ್ಡ್‌ನ್ನು ನಿರ್ಬಂಧಿಸುವ ಜೊತೆಗೆ ನಕಲಿ ಕಾರ್ಡ್‌ನ್ನು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳಿಸುತ್ತದೆ.

ಇತ್ತೀಚಿನ ದತ್ತಾಂಶಗಳಂತೆ ದೇಶದಲ್ಲಿ 24.37 ಕೋ.ಗೂ ಅಧಿಕ ಪಾನ್ ಕಾರ್ಡ್‌ಗಳಿವೆ. ನಕಲಿ ಕಾರ್ಡ್‌ಗಳ ನಿಖರವಾದ ಸಂಖ್ಯೆ ಲಭ್ಯವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X