Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ...

ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ರಿಯಾಯಿತಿ ಇರಲಿ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ20 March 2016 10:54 PM IST
share
ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ರಿಯಾಯಿತಿ ಇರಲಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಮಾ. 20: ನಗರದ ಬಡ- ಮಧ್ಯಮ ವರ್ಗದ ಜನರಿಗೆ ರಿಯಾಯಿತಿ ದರದಲ್ಲಿ ಆರೋಗ್ಯ ಸೇವೆ ಒದಗಿಸಲು ಖಾಸಗಿ ಆಸ್ಪತ್ರೆಗಳು ಮುಂದಾದರೆ, ರಾಜ್ಯ ಸರಕಾರ ಅಗತ್ಯ ಬೆಂಬಲ-ಸಹಕಾರ ನೀಡಲಿದೆ ಎಂದು ಆಹಾರ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರವಿವಾರ ನಗರದ ಶೇಷಾದ್ರಿಪುರಂನಲ್ಲಿ ಅಪೋಲೊ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಸ್ಥಳೀಯ ಜನರ ಜೀವನ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ಆರೋಗ್ಯ ಸೇವೆ ಒದಗಿಸಬೇಕು ಎಂದು ಸಲಹೆ ನೀಡಿದರು.
ಮುನ್ನೆಚ್ಚರಿಕೆ ಅಗತ್ಯ: ಇತ್ತೀಚಿನ ದಿನಗಳಲ್ಲಿ ಜನರ ಜೀವನಶೈಲಿಯಿಂದ ಬರುವ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ, ಖಾಸಗಿ ಆಸ್ಪತ್ರೆಗಳು ಜನರಿಗೆ ಬರುವ ರೋಗಗಳನ್ನು ತಡೆಯುವ ಕ್ರಮಗಳತ್ತ ಸೂಕ್ತ ಗಮನ ನೀಡಬೇಕಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ರೋಗ ಬಂದ ಬಳಿಕ ಚಿಕಿತ್ಸೆ ನೀಡುವುದಕ್ಕಿಂತ ರೋಗ ಬರದಂತೆ ತಡೆಯುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಆದ್ಯತೆ ನೀಡಬೇಕಿದೆ. ಮುನ್ನೆಚ್ಚರಿಕೆ ವಹಿಸಿದರೆ ಜೀವನ ಶೈಲಿ ಬದಲಾವಣೆಯಿಂದ ಬರುವ ಹೃದ್ರೋಗ, ಮಧುಮೇಹ, ರಕ್ತದೊತ್ತಡದಂತಹ ಹಲವು ರೋಗಗಳನ್ನು ನಿಯಂತ್ರಿಸಬಹುದು ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಗಳನ್ನು ಆರಂಭಿಸುವುದು ಸುಲಭದ ಮಾತಲ್ಲ. ಉತ್ತಮ ವೈದ್ಯರ ತಂಡದ ಜೊತೆಗೆ ಹೆಚ್ಚಿನ ಬಂಡವಾಳವು ಅಗತ್ಯ. ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವ ತುರ್ತು ಇದೆ. ಅಲ್ಲದೆ, ಸೇವಾ ಮನೋಭಾವನೆ ಇದ್ದರೂ ಇದೆಲ್ಲವನ್ನು ಸರಿದೂಗಿಸುವುದು ಸುಲಭವಲ್ಲ ಎಂದು ಹೇಳಿದರು.
ಕೆಂಪೇಗೌಡ ಬಸ್ ನಿಲ್ದಾಣದಿಂದ ಸಮೀಪದಲ್ಲೇ ಇರುವ ಅಪೋಲೊ ಆಸ್ಪತ್ರೆ ಶೇಷಾದ್ರಿಪುರಂ ಪ್ರದೇಶದಲ್ಲಿ ಕೊಳಗೇರಿ ನಿವಾಸಿಗಳಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಬೇಕು ಎಂದ ಅವರು, ಸ್ಥಳೀಯ ಜನರ ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಅಪೋಲೊ ಆಸ್ಪತ್ರೆಯ ಅಧ್ಯಕ್ಷ ಡಾ.ಪ್ರತಾಪ್ ಸಿ. ರೆಡ್ಡಿ ಮಾತನಾಡಿ, ಗುಣಮಟ್ಟದ ಆರೋಗ್ಯ ಸೇವೆಗೆ ಹೆಸರಾಗಿರುವ ಅಪೋಲೊ ಆಸ್ಪತ್ರೆ ಆಧುನಿಕ ತಂತ್ರಜ್ಞಾನ ಹಾಗೂ ಅತ್ಯುತ್ತಮ ವೈದ್ಯರ ತಂಡದೊಂದಿಗೆ ಆರೋಗ್ಯ ಸೇವೆ ನೀಡಲು ಸನ್ನದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಪೋಲೊ ಆಸ್ಪತ್ರೆಯ ನಿರ್ದೇಶಕಿ ಸುನೀತಾ ರೆಡ್ಡಿ, ಆಸ್ಪತ್ರೆ ಸಿಇಒ ಡಾ.ನರೇಶ್, ರವೀಂದ್ರಪ್ಪಸೇರಿದಂತೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X