ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ವಿಜಯಪುರ, ಮಾ.20: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2013ರ ಜನವರಿ 8ರಂದು ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಅಪ್ಪಾರಾಯ (70) ಎಂಬವರನ್ನು ಗಿರಿಮಲ್ಲಪ್ಪ ಮತ್ತು ಲಾಳಸೇರಿ ಎಂಬ ಇಬ್ಬರು ಆರೋಪಿಗಳು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2 ನೆ ಹೆಚ್ಚುವರಿ ನ್ಯಾಯಾಧೀಶ ಸತ್ಯನಾರಾಯಣಾಚಾರ್ಯ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ, 10 ಸಾವಿರ ರೂ. ದಂಡ ಹಾಗೂ ಕೊಲೆಯಾದ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.
Next Story





