ಉಡುಪಿ: ವಿಕಲಚೇತನರ ಸಮೀಕ್ಷೆ
ಉಡುಪಿ, ಮಾ.20: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಮತ್ತು ಕಾರ್ಕಳ ತಾಲೂಕು ವ್ಯಾಪ್ತಿಯ ವಿಕಲಚೇತನರ ಸಮೀಕ್ಷೆಯನ್ನು ಆಶಾ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಮೂಲಕ ನಡೆಸಲಾಗುತ್ತಿದೆ. ಸಮೀಕ್ಷೆದಾರರು ಮನೆಗೆ ಭೇಟಿ ನೀಡಿದಾಗ ಸರಿಯಾದ ಮಾಹಿತಿಯನ್ನು ನೀಡಿ ಸಹಕರಿಸಬೇಕಾಗಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.
Next Story





