Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರು ರಾಜಕೀಯವಾಗಿ ಬೆಳೆಯುವುದು...

ಮಹಿಳೆಯರು ರಾಜಕೀಯವಾಗಿ ಬೆಳೆಯುವುದು ಕಷ್ಟ: ರಮ್ಯಾ

ವಾರ್ತಾಭಾರತಿವಾರ್ತಾಭಾರತಿ21 March 2016 10:49 PM IST
share
ಮಹಿಳೆಯರು ರಾಜಕೀಯವಾಗಿ ಬೆಳೆಯುವುದು ಕಷ್ಟ: ರಮ್ಯಾ

ಬೆಂಗಳೂರು, ಮಾ. 21: ರಾಜಕೀಯದಲ್ಲಿ ಮಹಿಳೆಯರು ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ರಾಜಕೀಯದಲ್ಲಿ ಮಹಿಳೆಯರು ಬೆಳೆಯುವುದು ಕಷ್ಟ ಎಂದು ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.
 ಸೋಮವಾರ ನಗರದ ಪುರಭವನದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಮಹಿಳೆಯರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆ ಎನ್ನುವ ಕಾರಣಕ್ಕಾಗಿ ರಾಜಕೀಯದಲ್ಲಿ ಮಹಿಳೆಯರನ್ನು ತುಳಿಯುವವರು ಹೆಚ್ಚಿದ್ದಾರೆ. ಈ ರೀತಿಯಾದ ಸಮಸ್ಯೆಗಳಿಂದ ರಾಜಕೀಯದಲ್ಲಿ ಮಹಿಳೆಯರು ಬೆಳೆಯಲು ಕಷ್ಟ ಎಂದರು.
ನಾನು ಚಿತ್ರರಂಗದ ಹಿನ್ನೆಲೆಯಲ್ಲಿ ಬಂದಿದ್ದರಿಂದ ಚುನಾವಣೆ ಯಲ್ಲಿ ಗೆಲ್ಲಲು ಕಷ್ಟವಾಗಲಿಲ್ಲ. ಆದರೆ ರಾಜಕೀಯದಲ್ಲಿ ಬೆಳೆಯಲು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಯಿತು. ಹೆಣ್ಣು ಎನ್ನುವ ಒಂದೇ ಒಂದು ಕಾರಣಕ್ಕಾಗಿ ರಾಜಕೀಯದಲ್ಲಿ ತುಳಿತಕ್ಕೆ ಒಳಗಾದೆ. ಈ ಪರಿಸ್ಥಿತಿ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಇವೆ ಎಂದು ಕಳವಳ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿ ಸಮಸ್ಯೆಗಳಿವೆ. ಈ ಸಮಸ್ಯೆ ಮತ್ತು ಸವಾಲುಗಳನ್ನು ಎದುರಿಸುವಲ್ಲಿ ವಿಫಲವಾಗುತ್ತಿದ್ದೇವೆ. ಮಹಿಳೆಯರಿಗೆ ಮಹಿಳೆಯರೇ ಸಹಾಯಕ್ಕೆ ನಿಂತಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರು ಸಂಘಟಿತರಾಗಬೇಕು. ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಪ್ರತಿ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಮಾತನಾಡಿ, ನಮ್ಮ ದೇಶದಲ್ಲಿ ಮಹಿಳೆಯರಾಗಿ ಹುಟ್ಟಿರುವುದೇ ನಮ್ಮ ಭಾಗ್ಯ. ವಿಶ್ವದ ಬೇರೆ ಯಾವ ದೇಶದಲ್ಲಿರದ ಸ್ವಾತಂತ್ರ ನಮ್ಮ ದೇಶದ ಮಹಿಳೆಯರಿಗಿದೆ. ಆದರೆ ಸಾಂಪ್ರದಾಯಿಕ ಶೋಷಣೆ ನಮಗೆ ಮಾರಕವಾಗಿದೆ ಎಂದು ನೋವನ್ನು ತೋಡಿಕೊಂಡರು.
ದೇಶದಲ್ಲಿ ಮಹಿಳೆಯರನ್ನು ಎರಡನೆ ದರ್ಜೆ ಪ್ರಜೆಗಳಂತೆ ಕಾಣಲಾಗುತ್ತಿದೆ. ಸಮಾಜ ನಮ್ಮನ್ನೂ ಸಮಾನ ಪ್ರಜೆಗಳಂತೆ ಕಾಣಬೇಕು. ಪುರುಷರಿಂದ ನಮಗೆ ಕರುಣೆ, ಭಿಕ್ಷೆ, ಮಮಕಾರ ಬೇಕಿಲ್ಲ. ನಮಗೆ ಕೇವಲ ಗೌರವ, ಸಮಬಾಳು ನೀಡಿದರೆ ಸಾಕು ಎಂದು ಹೇಳಿದ ಅವರು, ಮಹಿಳೆಯರು ಜಾಣತನದಿಂದಲೇ ಬೆಳೆಯಬೇಕೇ ವಿನಃ ಯಾರನ್ನೂ ವಿರೋಧಿಸುವುದರಿಂದಾಗುವುದಿಲ್ಲ ಎಂದು ಹೇಳಿದರು.
ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶೋಭಾ ಓಜಾ ಮಾತನಾಡಿ, ದೇಶದಲ್ಲಿ ಮೋದಿ ಸರಕಾರ ಬಂದಾಗಿನಿಂದಮಹಿಳೆಯರಿಗೆ ರಕ್ಷಣೆಯಿಲ್ಲದಂತಾಗಿದೆ. ದೇಶದಲ್ಲಿ ಅಪ್ರಾಪ್ತ ರ ಮೇಲೆ ಅತ್ಯಾಚಾರ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಿವೆ. ಆದರೆ ಕೇಂದ್ರ ಸರಕಾರ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದರು.
ಅತ್ಯಾಚಾರ ಮಾಡುವುದು ಎಷ್ಟು ಅಪರಾಧವೋ ಅದನ್ನು ಸಹಿಸಿ ಸುಮ್ಮನಿರುವುದೂ ಅಷ್ಟೇ ಅಪರಾಧ. ಹೀಗಾಗಿ ಅತ್ಯಾಚಾರ ಮತ್ತು ದೌರ್ಜನ್ಯಗಳ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಹೇಳಿದ ಅವರು. ಕೇಂದ್ರ ಸರಕಾರ ಮಹಿಳೆಯರ ರಕ್ಷಣೆ ದೃಷ್ಟಿಯಿಂದ ಮಹಿಳಾ ಸುರಕ್ಷತಾ ವಿಲ್ ಅನ್ನು ಆದಷ್ಟು ಶೀಘ್ರದಲ್ಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
 ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ರಾಣಿ ಸತೀಶ್, ವಿಧಾನ ಪರಿಷತ್ ಸದಸ್ಯರಾದ ಮೊಟ್ಟಮ್ಮ, ಜಯಮಾಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಮುಂದಿನ ಬಾರಿ ಜೆಂಡರ್ ಬಜೆಟ್
ಮುಂದಿನ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮಹಿಳೆಯರಿಗೆ ವಿಶೇಷವಾಗಿ ಜೆಂಡರ್ ಬಜೆಟ್ ಮಂಡಿಸಲು ಸರಕಾರ ತೀರ್ಮಾನಿಸಿದೆ. ಅದೇ ರೀತಿ ಲೈಂಗಿಕ ಕಾರ್ಯ ಕರ್ತೆಯರು ಮತ್ತು ತೃತೀಯ ಲಿಂಗಿಗಳ ಕಲ್ಯಾಣಕ್ಕಾಗಿ ವಿಶೇಷವಾದ ಪಾಲಿಸಿಯನ್ನು ರೂಪಿಸಲಾಗುವುದು.
-ಉಮಾಶ್ರೀ, ಮಹಿಳಾ ಮತ್ತು ಮಕ್ಕಳ ಸಚಿವೆ

ನಾನು ಬಯಸಿಲ್ಲ
ನಾನು ಯಾವುದೇ ಸ್ಥಾನಮಾನವನ್ನು ಬಯಸಿಲ್ಲ. ವಿಧಾನಪರಿಷತ್‌ಗೆ ನನ್ನನ್ನು ಆಯ್ಕೆ ಮಾಡುವ ವಿಚಾರ ಪಕ್ಷಕ್ಕೆ ಸೇರಿದ್ದು. ಪಕ್ಷಕ್ಕೆ ಅನುಕೂಲವಾಗುವುದಾದರೆ ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸುವೆ.
-ರಮ್ಯಾ, ಮಾಜಿ ಸಂಸದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X