ಇಂದು ವಿಶ್ವ ಜಲ ದಿನಾಚರಣೆ
ಬೆಂಗಳೂರು, ಮಾ. 21: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಣ್ಣ ನೀರಾವರಿ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ಮಾ.22ರಂದು ಬೆಳಗ್ಗೆ 10ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ನೀರು ಉಳಿಸಿ ಜೀವ ಉಳಿಸಿ ಕುರಿತ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಸ್. ಪಾಲಯ್ಯ ಜಾಥಾ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ರಮೇಶ್, ಜಿಲ್ಲಾ ಪಂಚಾಯತ್ ಸಿಇಒ ಸಿ.ಪಿ. ಶೈಲಜಾ, ಸಣ್ಣ ನೀರಾವರಿ ಇಲಾಖೆ ಕಾರ್ಯಾಪಾಲಕ ಇಂಜಿನಿಯರ್ ಜಯರಾಮಯ್ಯ, ಭೂ-ವಿಜ್ಞಾನಿ ಡಾ.ಪ್ರಸನ್ನ ಕುಮಾರ್, ಪರಿಸರ ಅಧಿಕಾರಿ ಸಿ.ಎಂ. ಸತೀಶ್, ಮಾಲಿನ್ಯ ನಿಯಂತ್ರಣ ಇಲಾಖೆಯ ಪರಿಸರ ಅಧಿಕಾರಿ ಎಂ.ಲಕ್ಷ್ಮಣ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story