ಗುಂಪು ಘರ್ಷಣೆ: 8 ಮಂದಿಗೆ ಗಾಯ
ಕೊಳ್ಳೇಗಾಲ, ಮಾ.21: ಕ್ಷುಲ್ಲಕ ವಿಚಾರವಾಗಿ 2 ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಎಂಟು ಮಂದಿ ಜನರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ನರೀಪುರ ಗ್ರಾಮದಲ್ಲಿ ನಡೆದಿದೆ.
ರವಿವಾರ ರಾತ್ರಿ ಸುಮಾರು 8:30 ರ ಸಮಯದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಪ್ರಾರಂಭವಾದ ಘರ್ಷಣೆಯಲ್ಲಿ ಒಂದು ಗುಂಪಿನ ಶಿವಮಲ್ಲು , ಗೌರಮ್ಮ, ಸಿದ್ದರಾಜು ಹಾಗೂ ಮತ್ತೊಂದು ಗುಂಪಿನ ಬೊಕಳಮಾದಯ್ಯ, ರೇಚಪ್ಪ, ನೀಲಪ್ಪ, ಸಾಗರ್, ಸಿದ್ದಮ್ಮ ಎಂಬವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಗಾಯಾಳುಗಳು ಕೊಳ್ಳೇಗಾಲದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು, ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





