ಟಿಕೆಟ್ ರಹಿತ ಪ್ರಯಾಣ: 11.35 ಲಕ್ಷ ರೂ. ದಂಡ ವಸೂಲಿ
ಬೆಂಗಳೂರು, ಮಾ. 21: ಬಿಎಂಟಿಸಿ ವಾಹನಗಳಲ್ಲಿ ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣಿಸುತ್ತಿದ್ದ ಒಟ್ಟು 7,683 ಮಂದಿ ಪ್ರಯಾಣಿಕರಿಂದ ಒಟ್ಟು 11,35,390 ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ತಿಳಿಸಿದೆ.
ಫೆಬ್ರವರಿ ತಿಂಗಳಲ್ಲಿ ಒಟ್ಟು 29 ಸಾವಿರ ಟ್ರಿಪ್‌ಗಳನ್ನು ತಪಾಸಣೆ ನಡೆಸಿದ್ದು, ನಿಗಮದ ಆದಾಯದ ಸೋರಿಕೆಯನ್ನು ತಡೆಗಟ್ಟಿದ್ದು, ಈ ಪ್ರಕರಣಗಳಲ್ಲಿ ಒಟ್ಟು 2,882 ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪುರುಷ ಪ್ರಯಾಣಿಕರಿಗೆ ದಂಡ: ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 982 ಪುರುಷ ಪ್ರಯಾಣಿಕರಿಂದ ಒಟ್ಟು 98,200 ರೂ.ಗಳನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಸಂಸ್ಧೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್, ದಿನದ ಅಥವಾ ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸತಕ್ಕದ್ದು.
Next Story





