ಆಮಂತ್ರಣ ಪತ್ರಿಕೆ ವಿವಾದ: ಮಾ.24ಕ್ಕೆ ವಿಚಾರಣೆ ಮುಂದೂಡಿಕೆ
ಪುತ್ತೂರು, ಮಾ.21: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಯಲ್ಲಿ ದ.ಕ. ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂರ ಹೆಸರನ್ನು ಮುದ್ರಿಸಿರುವುದನ್ನು ವಿರೋಧಿಸಿ ನೀಡಲಾದ ರಿಟ್ ಅರ್ಜಿಯವಿಚಾರಣೆಯನ್ನು ಹೈಕೋರ್ಟ್ ಮಾ.24ಕ್ಕೆ ಮುಂದೂಡಿದೆ. ಆಮಂತ್ರಣ ಪತ್ರಿಕೆಯಲ್ಲಿ ಹಿಂದೂಯೇತರ ಅಧಿಕಾರಿಯ ಹೆಸರು ಮುದ್ರಿಸಿರುವುದರ ವಿರುದ್ಧ ವಿಶ್ವ ಹಿಂದೂ ಪರಿಷತ್ ಪುತ್ತೂರು ಘಟಕದ ಕಾರ್ಯದರ್ಶಿ ನವೀನ್ ಕುಲಾಲ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಳ್ಳುವುದಾಗಿ ಕೋರ್ಟ್ ತಿಳಿಸಿತ್ತು. ಇದೀಗ ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.
Next Story