ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ.- 262, ಉಡುಪಿ-95 ಗೈರು
ಮಂಗಳೂರು, ಮಾ.21: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸೋಮವಾರ ನಡೆದ ವ್ಯವಹಾರ ಅಧ್ಯಯನ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 15,374 ವಿದ್ಯಾರ್ಥಿಗಳು ಹಾಜರಾಗಿದ್ದು, 201 ಮಂದಿ ಗೈರು ಹಾಜರಾಗಿದ್ದಾರೆ.
ರಾಸಾಯನಶಾಸ್ತ್ರ ವಿಷಯದಲ್ಲಿ 12,790 ವಿದ್ಯಾಥಿಗಳು ಹಾಜರಾಗಿದ್ದು, 61 ಮಂದಿ ಗೈರು ಹಾಜರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ವ್ಯವಹಾರ ಅಧ್ಯಯನ ಮತ್ತು ರಾಸಾಯನಶಾಸ್ತ್ರ ಪರೀಕ್ಷೆಗಳಿಗೆ ಒಟ್ಟು 95 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ
ವ್ಯವಹಾರ ಅಧ್ಯಯನ ಪರೀಕ್ಷೆಗೆ ಒಟ್ಟು 7,732 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, ಈ ಪೈಕಿ 68 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ರಾಸಾಯನಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 4,269 ವಿದ್ಯಾರ್ಥಿಗಳ ಪೈಕಿ 17 ಮಂದಿ ಗೈರುಹಾಜರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





