Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ವಿನಾಯಕ ಬಾಳಿಗ ಕೊಲೆ ಪ್ರಕರಣ...

ಮಂಗಳೂರು: ವಿನಾಯಕ ಬಾಳಿಗ ಕೊಲೆ ಪ್ರಕರಣ ಬಯಲಿಗೆಳೆಯಲು ಪೊಲೀಸ್ ಕಮೀಷನರ್‌ಗೆ ಡಿವೈಎಫ್‌ಐ ಮನವಿ

ವಾರ್ತಾಭಾರತಿವಾರ್ತಾಭಾರತಿ22 March 2016 5:20 PM IST
share

     ಮಂಗಳೂರು,ಮಾ.22:ನಗರದ ಹೃದಯ ಭಾಗದ ಮಾರ್ಗಮಧ್ಯೆ ಕೊಲೆಗೀಡಾದ ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆಯನ್ನು ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಈ ಕೊಲೆ ಪ್ರಕರಣದಲ್ಲಿ ನಗರದ ರಿಯಲ್ ಎಸ್ಟೇಟ್, ಬಿಲ್ಡರ್ ಮಾಫಿಯಾದ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಕೊಲೆಯ ಹಿಂದಿರುವ ಶಕ್ತಿಗಳನ್ನು ಬಂಧಿಸಬೇಕೆಂದು ಪೊಲೀಸ್ ಕಮೀಷನರ್ ಅವರನ್ನು ಒತ್ತಾಯಿಸಿದೆ.
      
        ಮಂಗಳೂರು ನಗರ ಮಾಫಿಯಾಗಳ ಭೂಗತ ದೊರೆಗಳ ಕಾರ್ಯಸ್ಥಾನವಾಗಿ ಬದಲಾಗುತ್ತಿದ್ದು ರಿಯಲ್ ಎಸ್ಟೇಟ್, ಬಿಲ್ಡರ್, ಶಿಕ್ಷಣ ಕ್ಷೇತ್ರದಲ್ಲಿ ಲಾಬಿಗಳು ಮಾಫಿಯಾ ರೀತಿ ಕಾರ್ಯಚರಿಸುತ್ತಿದೆ. ಹಣಕಾಸು ರಾಜಕಾರಣದ ಆಗಾಧ ಬಲ ಹೊಂದಿರುವ ಈ ಶಕ್ತಿಗಳು ಸಾಮಾಜಿಕವಾಗಿ ಗಣ್ಯ ಸ್ಥಾನಮಾನವನ್ನು ಹೊಂದಿದ್ದು ತಮಗಿರುವ ಅಧಿಕಾರಸ್ಥರ ಬೆಂಬಲದೊಂದಿಗೆ ಕಾನೂನು ಉಲ್ಲಂಘಿಸಿ ವ್ಯವಹಾರದಲ್ಲಿ ತೊಡಗಿಕೊಂಡಿವೆ. ಮಂಗಳೂರು ನಗರ ಇಂತಹ ರಿಯಲ್ ಎಸ್ಟೇಟ್ ಲಾಬಿಯ ಹಿಡಿತದಲ್ಲಿ ಸಿಲುಕಿಕೊಂಡಿದೆ. ಇಂತಹ ನಿಯಮಬಾಹಿರ ವ್ಯವಹಾರ, ಕಾನೂನಿನ ಸ್ವಚ್ಚಂದ ಉಲ್ಲಂಘನೆಯನ್ನು ಪ್ರಶ್ನಿಸಿದವರ ಬಾಯಿ ಮುಚ್ಚಿಸಲು ಈ ಶಕ್ತಿಗಳು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ವಿನಾಯಕ ಬಾಳಿಗರವರು ಇಂತಹ ಪ್ರಬಲ ಶಕ್ತಿಗಳ ಅಕ್ರಮಗಳನ್ನು ಆರ್‌ಟಿಐ ಕಾಯ್ದೆಯ ಮೂಲಕ ಬಯಲಿಗೆಳೆಯುವ ಕಾನೂನು ಸಮರ ನಡೆಸುತ್ತಿದ್ದರು. ಬಾಳಿಗರವರಿಗೆ ವೈಯಕ್ತಿಕವಾಗಿ ಬೇರೆ ಯಾರೊಂದಿಗೂ ವೈಮನಸ್ಸು ಇದ್ದಿರಲಿಲ್ಲ ಈ ಎಲ್ಲಾ ಅಂಶಗಳನ್ನು ಪರಿಗಣಿಸುವಾಗ ವಿನಾಯಕ ಬಾಳಿಗರನ್ನು ಭೂಮಾಫಿಯಾ, ಶಿಕ್ಷಣ ಮಾಫಿಯಾಗಳಿಗೆ ಸೇರಿದ ಜನ ಸುಪಾರಿಕೊಟ್ಟು ಕೊಲೆ ನಡೆಸಿರುವ ಸಾಧ್ಯತೆಗಳು ಗೋಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್‌ರವರು ಸ್ವತಹ ಈ ಪ್ರಕರಣದ ತನಿಖೆಯ ಮೇಲುಸ್ತುವಾರಿ ವಹಿಸಿಕೊಳ್ಳಬೇಕು, ಈ ಕೊಲೆಯ ಹಿಂದಿರುವ ಎಲ್ಲಾ ಶಕ್ತಿಗಳನ್ನು ಬಂಧಿಸಬೇಕು ಎಂದು ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿಯು ಪೊಲೀಸ್ ಕಮೀಷನರ್‌ರವರಲ್ಲಿ ಮನವಿ ಮಾಡಿದೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾ ಅಧ್ಯಕ್ಷ ದಯಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X