Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಮಾ.24ರಂದು ಪುತ್ತೂರಿನಲ್ಲಿ...

ಪುತ್ತೂರು : ಮಾ.24ರಂದು ಪುತ್ತೂರಿನಲ್ಲಿ ಧರಣಿ ಸತ್ಯಾಗ್ರಹ

ಅಸಮರ್ಪಕ ಮರಳು ನೀತಿಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ22 March 2016 6:32 PM IST
share

ಪುತ್ತೂರು: ಅಸಮರ್ಪಕ ಮರುಳು ನೀತಿಯನ್ನು ವಿರೋಧಿಸಿ ಪುತ್ತೂರು ತಾಲೂಕು ಲಾರಿ ಮಾಲಕ, ಚಾಲಕರ ಹಾಗೂ ಮರಳು ವ್ಯಾಪಾರಸ್ಥರ ಸಂಘದ ನೇತೃತ್ವದಲ್ಲಿ ಪುತ್ತೂರಿನ ಸಹಾಯಕ ಕಮೀಷನರ್ ಕಚೇರಿಯ ಮುಂಬಾಗದಲ್ಲಿ ಮಾ.24ರಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಅಧ್ಯಕ್ಷ ಗಿರೀಶ್ ಪಡ್ಡಾಯೂರು ಮತ್ತು ಗೌರವ ಸಲಹೆಗಾರ ತಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ದಿನೇಶ್ ಮೆದು ತಿಳಿಸಿದ್ದಾರೆ. ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರ್ಕಾರದ ಮರಳು ನೀತಿಯು ಜಿಲ್ಲೆಯಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೆ ಕಳೆದ ಎರಡೂವರೆ ವರ್ಷಗಳಿಂದ ಮರಳುಗಾರಿಕೆಗೆ ಯಾವುದೇ ಪರವಾನಿಗೆಯನ್ನು ನೀಡದೆ ದ.ಕ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಮರಳು ಅಭಾವ ಸೃಷ್ಠಿಯಾಗುವಂತೆ ಮಾಡಿದೆ. ಜಿಲ್ಲೆಯಲ್ಲಿ ಸಿಆರ್‌ಝಡ್ ಮತ್ತು ನಾನ್ ಸಿಆರ್‌ಝಡ್ ಪ್ರತ್ಯೇಕಿಸಿ 2 ಮರಳು ನೀತಿಯನ್ನು ಹೇರುವ ಮೂಲಕ ತಾರತಮ್ಯ ಮಾಡಿ ಸಾಮಾನ್ಯ ಗ್ರಾಹಕನಿಗೆ ಹೊರೆಯಾಗುವಂತೆ ಮಾಡಿದೆ. ಇವೆಲ್ಲವನ್ನೂ ತಡೆದು ಈ ಹಿಂದೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂಲಕ ಮರಳು ಪರವಾನಿಗೆ ನೀಡುವ ವ್ಯವಸ್ಥೆ ಮಾಡುವಂತೆ ಹಾಗೂ ಮರಳುಗಾರಿಕೆಗೆ ಅವಕಾಶ ನೀಡುವಂತೆ ಧರಣಿ ಸತ್ಯಾಗ್ರಹದಲ್ಲಿ ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಆಗ್ರಹಿಸಲಾಗುವುದು ಎಂದರು. ಪುತ್ತೂರು ಮತ್ತು ಸುಳ್ಯ ಭಾಗದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಡೆಯೊಡ್ಡಿರುವ ಕಾರಣದಿಂದ ಸಾವಿರಾರು ಕೂಲಿ ಕಾರ್ಮಿಕರು ಮರಳು, ಕಾರ್ಮಿಕರು, ಲಾರಿ ಚಾಲಕರು ಜೀವನ ನಿರ್ವಹಣೆ ಮಾಡುವುದು ದುಸ್ಥರವಾಗಿದೆ. ಲಾರಿ ಹಾಗೂ ಇತರ ಮರಳು ಸಾಗಾಟದ ವಾಹನಗಳ ಚಾಲಕ ಮಾಲಕರು ಕೆಲಸವಿಲ್ಲದೆ ವಾಹನಗಳ ಸಾಲದ ಕಂತುಗಳನ್ನು ತುಂಬಲಾರದೆ ಸಂಕಷ್ಟಕೀಡಾಗಿದ್ದಾರೆ. ಮರಳು ಅಭಾವದಿಂದಾಗಿ ತಾಲೂಕಿನಾದ್ಯಂತ ಆಶ್ರಯ ಮನೆಗಳ ಪ್ರಗತಿ ಕುಂಠಿತವಾಗಿದೆ. ಸರ್ಕಾರದ ವಿವಿಧ ಇಲಾಖೆಗಲ ಕಾಮಗಾರಿಗಳನ್ನು ಮರಳಿನ ಅಲಭ್ಯತೆಯಿಂದಾಗಿ ನಿಗದಿತ ಅವಧಿಯಲ್ಲಿ ಪೂರೈಸಲಾಗದೆ ಅನುದಾನ ವಾಪಾಸಾಗುತ್ತಿದೆ. ಮರಳು ದರ ದುಪ್ಪಟ್ಟು ಆಗಿದ್ದು, ಇನ್ನೂ ಹೆಚ್ಚಾಗುವ ಅಪಾಯವಿದೆ. ಈ ಹಿನ್ನಲೆಯಲ್ಲಿ ಮರಳು ನೀತಿಯನ್ನು ಬದಲಾವಣೆಗೊಳಿಸಿ ಈ ಮೊದಲು ಗಣಿ ಇಲಾಖೆಯ ಮೂಲಕ ಮರಳು ತೆಗೆಯಲು ಅವಕಾಶ ಕಲ್ಪಿಸಿದಂತೆ ವ್ಯವಸ್ಥೆಗೊಳಿಸಲು ಸತ್ಯಾಗ್ರಹದ ಮೂಲಕ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪುತ್ತೂರು ತಾಲೂಕು ಲಾರಿ ಮಾಲಕ, ಚಾಲಕರ ಹಾಗೂ ಮರಳು ವ್ಯಾಪಾರಸ್ಥರ ಸಂಘದ ಕಾರ್ಯದರ್ಶಿ ಭರತ್ ರೈ ಮತ್ತು ಸದಸ್ಯ ಇಬ್ರಾಹಿಂ ಬಾತಿಷ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X