ಪುತ್ತೂರು ನಗರ ಸಭೆಯಲ್ಲಿ ‘ವಿಶ್ವಜಲದಿನ’

ಪುತ್ತೂರು: ಪುತ್ತೂರು ನಗರ ಸಭೆಯಲ್ಲಿ ಮಂಗಳವಾರ ವಿಶ್ವ ನಗರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತೆ ರೇಖಾ ಜೆ.ಶೆಟ್ಟಿ ಅವರು ನೀರು ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಮುಂದಿನ ದಿನಗಳಲ್ಲಿ 1ಸಾವಿರ ಚದರ ಅಡಿಗಿಂತ ಮೇಲ್ಪಟ್ಟ ಕಟ್ಟಡಗಳಿಗೆ ಕಡ್ಡಾಯವಾಗಿ ಮಳೆ ನೀರು ಕೊಯ್ಲು ನಿರ್ಮಿಸುವ ಬಗ್ಗೆ ಬೈಲಾ ರೂಪಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಪುತ್ತೂರು ನಗರ ಸಭಾ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಮಹಿಳಾ ಪ್ರಥಮ ದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಹರಿ ರೋಜ್‌ಗಾರ್ ಯೋಜನೆಯ ಸಮುದಾಯ ಸಂಘಟಕ ಉಸ್ಮಾನ್ ಬೊಳುವಾರು ಸ್ವಾಗತಿಸಿ ವಂದಿಸಿದರು.
Next Story





