ಎಸಿಬಿ ಬಗ್ಗೆ ಹೈಕಮಾಂಡ್ ಗೆ ಮುಖ್ಯಮಂತ್ರಿಗಳ ಪತ್ರ

ಬೆಂಗಳೂರು, ಮಾ, 22: ಎಸಿಬಿ ರಚನೆಯ ಹಿಂದಿನ ಉದ್ದೇಶ ವಿವರಿಸಿ ಮುಖ್ಯಮಂತ್ರಿಗಳು ಹೈಕಮಾಂಡ್ ಗೆ ಸೋಮವಾರ ಪತ್ರ ಬರೆದಿದ್ದಾರೆ.
ಯಾವ ಹಿನ್ನೆಲೆಯಲ್ಲಿ ಸರ್ಕಾರ ಎಸಿಬಿ ರಚಿಸಿದೆ ಎಂಬುದನ್ನು ಮುಖ್ಯಮಂತ್ರಿಗಳು ವಿವರಿಸಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ, ಉಪಾಧ್ಯಕ್ಷರಾದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ತಲುಪಿದೆ.
ಎಸಿಬಿಯ ಸ್ವರೂಪ ಮತ್ತು ಕಾರ್ಯ ವಿಧಾನಗಳನ್ನು ಪತ್ರದಲ್ಲಿ ತಿಳಿಸಲಾಗಿದೆ.
12ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎಸಿಬಿ ರಚನೆಯಾಗಿದೆ. ಇದರಿಂದ ಭ್ರಷ್ಟಾಚಾರ ಹತ್ತಿಕ್ಕಲು ಸಾಧ್ಯವಾಗುತ್ತದೆ. ಇದರಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು. ಆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
Next Story





