ಮಂಗಳೂರು : ದನಗಳ್ಳತನ ಆರೋಪದಲ್ಲಿ ಇಬ್ಬರಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಮಂಗಳೂರು, ಮಾ. 22: ದನಗಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಇಂದು ಗುರುಪುರ ಕೈಕಂಬದಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿಗಳನ್ನು ಕಂದಾವರ ಗ್ರಾಮದ ರಾಜೇಶ್ ಮತ್ತು ಭಾಸ್ಕರ್ ಎಂದು ಗುರುತಿಸಲಾಗಿದೆ. ಸಿರಿಲ್ ಲೋಬೋ ಎಂಬವರಿಗೆ ಸೇರಿದ ದನವೊಂದು ಬಯಲಿನಲ್ಲಿ ಮೇಯುತ್ತಿದ್ದ ಸಂದರ್ಭದಲ್ಲಿ ಇವರಿಬ್ಬರು ಅದನ್ನು ಕಳವು ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಅವರನ್ನು ಹಿಡಿದು ಬಜ್ಪೆ ಪೊಲೀಸರಿಗೊಪ್ಪಿಸಿದ್ದಾರೆ. ಇಬ್ಬರಿಗೂ ಸಾರ್ವಜನಿಕರು ಥಳಿಸಿದ್ದಾರೆ . ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ ಇಬ್ಬರನ್ನು ಬಜ್ಪೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





