ಮಾ.26ರಂದು ರೈಲು ತಡೆ
ಬೆಂಗಳೂರು, ಮಾ.22: ಕಳಸಾ-ಬಂಡೂರಿ ಮತ್ತು ಮಹಾದಾಯಿ ಯೋಜನೆ ಜಾರಿ ಕುರಿತು ಕೇಂದ್ರ ಸರಕಾರ ಗಮನ ಸೆಳೆಯಲು ಮಾ.26 ರಂದು ರಾಜ್ಯದಾದ್ಯಂತ ರೈಲು ತಡೆ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಜನ, ಜಾನುವಾರುಗಳು ನೀರಿಲ್ಲದೆ ಸಾಯುವಂತಹ ಸ್ಥಿತಿ ತಲುಪಿವೆ. ಇಂತಹ ಸಂದರ್ಭದಲ್ಲಿಯೂ ಸರಕಾರಗಳು ಇತ್ತ ಗಮನಹರಿಸುತ್ತಿಲ್ಲ. ಆದ್ದರಿಂದ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು.
ಸಾ.ರಾ.ಗೋವಿಂದು ಮಾತನಾಡಿ, ಮಾ.26 ಯಾವುದೇ ರೈಲು ಓಡಲು ಬಿಡುವುದಿಲ್ಲ. ಆದುದರಿಂದ ರಾಜ್ಯದ ಜನರು ಅಂದು ಸಹಕರಿಸಿ ಬದಲಿ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕೆಂದು ಅವರು ಕೋರಿದರು.
Next Story





