Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಟದ ಮೈದಾನದಲ್ಲಿ ಬಿಜೆಪಿಗರಿಂದ ಕ್ಲಬ್...

ಆಟದ ಮೈದಾನದಲ್ಲಿ ಬಿಜೆಪಿಗರಿಂದ ಕ್ಲಬ್ ನಿರ್ಮಾಣ

ಪಾಟೀಲ ಪುಟ್ಟಪ್ಪ ಆರೋಪ

ವಾರ್ತಾಭಾರತಿವಾರ್ತಾಭಾರತಿ22 March 2016 11:52 PM IST
share

ಬೆಂಗಳೂರು, ಮಾ.22: ಕೆಲವು ಪ್ರಭಾವಿ ರಾಜಕಾರಣಿಗಳ ಕೈವಾಡದಿಂದ ಹುಬ್ಬಳ್ಳಿ ನಗರದಲ್ಲಿರುವ ಹುಬ್ಬಳ್ಳಿ ಆಟದ ಮೈದಾನ(ಜಮ್‌ಖಾನ ಮೈದಾನ)ದಲ್ಲಿ ರಿಕ್ರಿಯೇಷನ್ ಕ್ಲಬ್ ನಿರ್ಮಾಣ ಮಾಡಲಾಗಿದೆ. ಹಾಗಾಗಿ ಸರಕಾರ ಮಧ್ಯಪ್ರವೇಶ ಮಾಡಿ ಇದನ್ನು ಕೆಡವಿ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಹುಬ್ಬಳ್ಳಿ ಸ್ಪೋರ್ಟ್ಸ್ ಗ್ರೌಂಡ್ ಬಚಾವೋ ಸಮಿತಿ ಗೌರವಾಧ್ಯಕ್ಷ ಪಾಟೀಲ ಪುಟ್ಟಪ್ಪ ಆಗ್ರಹಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಧ್ಯಭಾಗದಲ್ಲಿರುವ ಈ ಸ್ಥಳವನ್ನು ಬ್ರಿಟೀಷರ ಕಾಲದಲ್ಲಿ ಸಾರ್ವಜನಿಕರ ಉಪಯೋಗಕ್ಕೆಂದು ಸೀಮಿತ ಮಾಡಿ, ಕ್ರಿಕೆಟ್, ಫುಟ್ಬಾಲ್ ಸೇರಿದಂತೆ ಇನ್ನಿತರೆ ಸೀಮಿತ ಕ್ರೀಡೆಗಳಿಗೆ ಮಾತ್ರ ಮೈದಾನವನ್ನು ಮೀಸಲಿರಿಸಲಾಗಿತ್ತು. ಆದರೆ ಕೆಲವು ಪ್ರಭಾವಿ ರಾಜಕಾರಣಿಗಳ ಕಿತಾಪತಿಯಿಂದ ಇಂದು ಇಲ್ಲಿ ಕ್ಲಬ್ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರವದಿ ಸಂದರ್ಭ 2008 ರಲ್ಲಿ ಜಗದೀಶ್ ಶೆಟ್ಟರ್ ಕಂದಾಯ ಮಂತ್ರಿಯಾಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಲ್ಲಿನ ಸ್ಥಳೀಯ ದಾರವಾಡ ಕಮೀಷನರ್ ದರ್ಪಣ್ ಜೈನ್ ಮುಖಾಂತರ ಅನುಮತಿಯನ್ನು ಪಡೆದು ಮೈದಾನದಲ್ಲಿ ಅಕ್ರಮವಾಗಿ ಕ್ಲಬ್‌ಗೆ ಅವಕಾಶ ಮಾಡಿಕೊಡಲಾಯಿತು ಎಂದರು.

ರಿಕ್ರಿಯೇಷನ್ ಕ್ಲಬ್‌ನಲ್ಲಿ ಪ್ರಮುಖವಾಗಿ ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್, ಮಾಜಿ ಕೇಂದ್ರ ಸಚಿವ ಅನಂತಕುಮಾರ್, ಬಿಜೆಪಿಯ ಮಾಜಿ ಮೇಯರ್ ವೀರಣ್ಣ ಸವಡಿ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಹಿ ಸೇರಿದಂತೆ ಇನ್ನೂ ಅನೇಕ ಪ್ರಭಾವಿ ರಾಜಕಾರಣಿಗಳು ಮತ್ತು ಅವರ ಸಂಬಂಧಿಕರು ಇದರಲ್ಲಿ ಭಾಗಿಯಾಗಿದ್ದಾರೆ. ಇವರು ತಮ್ಮ ಅಧಿಕಾರ ಬಳಸಿ ಅಕ್ರಮವಾಗಿ ಕ್ಲಬ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದರು.

 ದಿನನಿತ್ಯ ಸಾರ್ವಜನಿಕರಿಂದ ತುಂಬಿರುತ್ತಿದ್ದ ಮೈದಾನವಿಂದು ಪೋಲಿಗಳ ತಾಣವಾಗಿದೆ. ಮೈದಾನದಲ್ಲಿ ಕ್ಲಬ್ ನಿರ್ಮಾಣವಾದ ಪರಿಣಾಮ ಪಕ್ಕದಲ್ಲಿ ಬಾರ್, ಮಸಾಜ್ ಸೆಂಟರ್ ಮತ್ತು ಸ್ಪಾಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ಸಾರ್ವಜನಿಕರಿಗೆ ಮೀಸಲಾಗಿರುವ ಮೈದಾನವನ್ನು ಸಾರ್ವಜನಿಕರಿಗೆ ಮಾತ್ರ ಮೀಸಲಿಡಬೇಕು. ಸರಕಾರ ಮಧ್ಯಪ್ರವೇಶ ಮಾಡಿ ಅಲ್ಲಿನ ಕ್ಲಬ್ ಕೆಡವಿ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಪ್ರಧಾನಿ ಭೇಟಿ: ಬಿಜೆಪಿ ನಾಯಕರ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಮೈದಾನ ಉಳಿಸಲು ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಲು ಎಪ್ರಿಲ್‌ನಲ್ಲಿ ಪ್ರ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X