ಎಸಿಬಿ ರಚನೆಯ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಅಸಮಾಧಾನ

ಬೆಂಗಳೂರು, ಮಾ,23: ರಾಜ್ಯ ಕಾಂಗ್ರೆಸ್ ಶಾಸಕಾಂಗ ಸಭೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆ ನಡೆಯಿತು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಶಾಸಕರು ಅಧಿವೇಶನ ನಡೆಯುವ ವೇಳೆ ಎಬಿಸಿ ರಚನೆ ಮಾಡಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಎಎಸಸಿಬಿ ರಚನೆ ಸರಿಯಾಗಿ ಆಗಿದೆ ಎಂದು ಸಿಎಂ ಸಮಾಜಾಯಿಸಿಕೆ ನೀಡಿದರು. ಸಭೆಯಲ್ಲಿ ಎಸಿಬಿ ಟಿಪ್ಟಣಿ ಪುಸ್ತಕ ವಿತರಿಸಲಾಯಿತು.
ಬರಪರಿಸ್ಥಿತಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸಲು ಹೆಚ್ಚಿನ ಅನುದಾನ ನೀಡುವಂತೆ ಶಾಸಕರು ಮನವಿ ಮಾಡಿದರು. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆ ಹರಿಸಲು ಗಮನ ಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ ನೀಡಿದರು.
ವಿದ್ಯುತ್ ಸಮಸ್ಯೆ ಬಗೆ ಹರಿಸಲು ಶಾಸಕರು ಮನವಿ ಮಾಡಿ ದಿನದಲ್ಲಿ ಕನಿಷ್ಠ ಐದು ಗಂಟೆ ವಿದ್ಯುತ್ ನೀಡುವಂತೆ ಒತ್ತಾಯಿಸಿದರು. ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆ ಹರಿಯಲಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ಕೊಂಡ ಹಾಯುವುದನ್ನು ನಿಷೇಧಿಸದಂತೆ ಶಾಸಕರು ಸಿಎಂಗೆ ಮನವಿ ಮಾಡಿದರು. ಇದನ್ನು ನಿ಼ಷೇಧಿಸಿದರೆ ಜನರು ಸರಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಶಾಸಕರು ಹೇಳಿದರು. ಕೊಂಡ ಹಾಯುವ ಪದ್ದತಿಯನ್ನು ನಿಷೇಧಿಸುವ ಪ್ರಸ್ತಾವನೆಯನ್ನು ಕೈ ಬಿಡುವ ಬಗ್ಗೆ ಪರಿಶೀಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.





