Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತರ್ಜಾಲಗಳಲ್ಲಿ ಅಶ್ಲೀಲ ವೀಡಿಯೊ ತಡೆಗೆ...

ಅಂತರ್ಜಾಲಗಳಲ್ಲಿ ಅಶ್ಲೀಲ ವೀಡಿಯೊ ತಡೆಗೆ ಪಿಐಎಲ್

ವಾರ್ತಾಭಾರತಿವಾರ್ತಾಭಾರತಿ23 March 2016 2:21 PM IST
share
ಅಂತರ್ಜಾಲಗಳಲ್ಲಿ ಅಶ್ಲೀಲ ವೀಡಿಯೊ ತಡೆಗೆ ಪಿಐಎಲ್

ಮಂಗಳೂರು, ಮಾ. 23: ಹದಿಹರೆಯದ ಮಕ್ಕಳು ಅಂತರ್ಜಾಲದ ಮೂಲಕ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುತ್ತಿರುವುದರಿಂದ ಸಾಮೂಹಿಕ ಅತ್ಯಾಚಾರ, ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಪ್ರಮುಖ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ವೀಡಿಯೊಗಳನ್ನು ತಡೆಗಟ್ಟಲು ಒತ್ತಾಯಿಸಿ ರೆಸ್ಕೂ ಸಂಸ್ಥೆಯು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲು ನಿರ್ಧರಿಸಿದೆ.


ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಸರಕಾರೇತರ ಸಂಸ್ಥೆಯಾಗಿರುವ (ಎನ್‌ಜಿಒ) ರೆಸ್ಕೂನ ಸಂಸ್ಥಾಪಕ ಹಾಗೂ ಲಂಡನ್‌ನ ನೀತಿಸಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಬೋಧಕರಾದ ಅಭಿಷೇಕ್ ಕ್ಲಿಫರ್ಡ್, ಅಶ್ಲೀಲ ವೀಡಿಯೊಗಳ ವೀಕ್ಷಣೆಯು ಹೆಣ್ಣುಮಕ್ಕಳ ಅಕ್ರಮ ಸಾಗಾಟಕ್ಕೆ ಕಾರಣವಾಗುತ್ತಿರುವುದಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿನಿಯರ ಸಾಮೂಹಿಕ ಅತ್ಯಾಚಾರಕ್ಕೂ ಪ್ರಮುಖ ಕಾರಣವಾಗುತ್ತಿದೆ ಎಂಬುದು ತಮ್ಮ ಸಮೀಕ್ಷೆಯಿಂದ ದೃಢಪಟ್ಟಿದೆ ಎಂದರು.


ಸಂಸ್ಥೆಯು ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ಅಶ್ಲೀಲ ವೀಡಿಯೊ ವೀಕ್ಷಣೆಯ ದುಷ್ಪರಿಣಾಮಗಳ ಕುರಿತಂತೆ ಸಮೀಕ್ಷೆ ನಡೆಸಿರುವುದಲ್ಲದೆ, ಪ್ರತಿ ವರ್ಷ 200 ಕಾಲೇಜುಗಳಲ್ಲಿ 50,000 ವಿದ್ಯಾರ್ಥಿಕ ನೈತಿಕ ವೌಲ್ಯದ ಬಗ್ಗೆ ಬೋಧನೆ ಮಾಡುತ್ತಿದೆ. ಕರ್ನಾಟಕದಲ್ಲಿ ಈಗಾಗಲೇ ಮೈಸೂರು, ಚಾಮರಾಜನಗರ, ಧಾರವಾಡ, ಬೆಂಗಳೂರು, ಮಂಡ್ಯ, ಗದಗ, ಬೀದರ್‌ಗಳಲ್ಲಿ ಸಮೀಕ್ಷೆ ನಡೆಸಿರುವ ಸಂಸ್ಥೆ, ಮಂಗಳೂರಿನಲ್ಲಿಯೂ ಈ ಬಗ್ಗೆ ಸಮೀಕ್ಷೆ ಕೈಗೊಂಡಿದೆ.


ಮಂಗಳೂರಿನ 25 ಕಾಲೇಜುಗಳಲ್ಲಿ 470 ವಿದ್ಯಾರ್ಥಿಗಳ ಸಮೀಕ್ಷೆಯಲ್ಲಿ ಶೇ. 68ರಷ್ಟು ಪದವಿ ಹುಡುರು ಅಶ್ಲೀಲ ವೀಡಿಯೊ ವೀಕ್ಷಿಸುತ್ತಾರೆ. ಹುಡುಗರು ಸರಾಸರಿ 10ನೆ ತರಗತಿಯಲ್ಲಿ ಅಶ್ಲೀಲ ವೀಡಿಯೊ ವೀಕ್ಷಣೆ ಆರಂಭಿಸುತ್ತಾರೆ. ಶೇ. 38ರಷ್ಟು ಪದವಿ ಹುಡುಗಿಯರು ವಾರಕ್ಕೆ ಸರಾಸರಿ 3 ಗಂಟೆಗಳ ಕಾಲ ಇಂತಹ ವೀಡಿಯೊ ವೀಕ್ಷಿಸುತ್ತಾರೆ. ಶೇ. 38ರಷ್ಟು ಪದವಿ ಹುಡುಗರು ಕ್ರೂರವಾದ ಅಶ್ಲೀಲ ವೀಡಿಯೊ ವೀಕ್ಷಣೆ ಮಾಡುತ್ತಾರೆ. ಇಂತಹ ವೀಡಿಯೊಗಳು ಯುವ ಮನಸ್ಸಿನ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತಿದ್ದು, ವೀಡಿಯೊ ವೀಕ್ಷಿಸುವ ಶೇ. 78ರಷ್ಟು ವಿದ್ಯಾರ್ಥಿಗಳಲ್ಲಿ ಇದು ದುಶ್ಚಟಗಳಿಗೆ ಹಾಗೂ ಚಟವಾಗಿ ಮಾರ್ಪಡುತ್ತದೆ.


ಟಿವಿ ಹಾಗೂ ಚಲನಚಿತ್ರಗಳಲ್ಲಿ ಸಿಗರೇಟ್ ಜಾಹೀರಾತನ್ನು ತೋರಿಸುವುದಕ್ಕೆ ಅನುಮತಿ ಇಲ್ಲ. ಹಾಗಿರುವಾಗ ಇಂತಹ ಅಶ್ಲೀಲ ವೀಡಿಯೊಗಳಿಗೆ ಅವಕಾಶ ಯಾಕೆ ಕಲ್ಪಿಸಬೇಕು ಎಂದು ಅವರು ಪ್ರಶ್ನಿಸಿದರು.


ಪಠ್ಯದಲ್ಲಿ ಸೈಬರ್ ನೈತಿಕ ವೌಲ್ಯಗಳನ್ನು ಸೇರ್ಪಡಿಸಲು ಒತ್ತಾಯ

ಮಾನವ ಸಾಗಾಟದಿಂದ ಹದಿಹರೆಯದ ಲೈಂಗಿಕ ದುರುಪಯೋಗದ ಬಗ್ಗೆ ನಾಲ್ಕು ರಾಷ್ಟ್ರೀಯ ಸಮೀಕ್ಷೆಯಿಂದ ನಡೆಸಲಾದ ಲೆಕ್ಕಾಚಾರದ ಪ್ರಕಾರ ಮಂಗಳೂರಿನಲ್ಲಿ ಪ್ರತಿ ರಾತ್ರಿ 250 ಬಾಲಕಿಯರು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ, ಎನ್‌ಎಚ್‌ಆರ್‌ಸಿ, ಬಚಪನ್ ಬಚಾವೊ ಆಂದೋಲನ, ಹಾಗೂ ಸಿಬಿಐ ಸಂಸ್ಥೆಗಳ ಸಮೀಕ್ಷೆಯ ಮಾಹಿತಿಯಡಿ ಈ ಲೆಕ್ಕಾಚಾರ ಮಾಡಲಾಗಿದ್ದು, ಪಿಯುಸಿ ಮತುತ ಕಾಲೇಜು ವಿದ್ಯಾರ್ಥಿಗಳಲ್ಲಿ ಅಶ್ಲೀಲ ಚಿತ್ರ ವೀಕ್ಷಣೆಯು ಅಪಾಯಕಾರಿ ಎಂಬುದನ್ನು ತಿಳಿಸಲು ಪಠ್ಯದಲ್ಲಿ ಸೈಬರ್ ನೈತಿಕ ವೌಲ್ಯಗಳನ್ನು ಅಳವಡಿಸಬೇಕು ಎಂದು ಅಭಿಷೇಕ್ ಕ್ಲಿಫರ್ಡ್ ಒತ್ತಾಯಿಸಿದರು.


ಕೆ9 ಸಾಫ್ಟ್‌ವೇರ್‌ನಿಂದ ಅಶ್ಲೀಲ ವೀಡಿಯೊ ವೆಬ್‌ಸೈಟ್‌ಗೆ ತಡೆ ಸಾಧ್ಯ
ಅಶ್ಲೀಲ ವೀಡಿಯೊ ತಡೆಗಟ್ಟಲು ಕೆ9 ಸಾಫ್ಟ್‌ವೇರ್ ಸಹಕಾರಿಯಾಗಿದೆ. ಇದು ಎಲ್ಲ ಅಶ್ಲೀಲ ವೆಬ್‌ಸೈಟ್‌ಗಳನ್ನು ತಡೆಗಟ್ಟುತ್ತದೆ. ಶಾಲಾ ಕಾಲೇಜುಗಳ ಮೂಲಕ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ಮಕ್ಕಳು ಮೊಬೈಲ್ ಮತ್ತು ಕಂಪ್ಯೂಟರ್‌ಗಳಲ್ಲಿ ಕೆ9 ಸಾಫ್ಟ್‌ವೇರ್ ಹಾಕಲು ಪ್ರೋತ್ಸಾಹಿಸಬೇಕು. ಈ ಬಗ್ಗೆ ಪೊಲೀಸ್, ಶಿಕ್ಷಣ ಸಂಸ್ಥೆಗಳು ಮತ್ತು ಅಧಿಕಾರಿಗಳು ಜಾಗೃತರಾಗುವ ಮೂಲಕ ಸಮಾಜದಲ್ಲಿ ಬದಲಾವಣೆಗೆ ಪ್ರಯತ್ನಿಸಬೇಕು ಎಂದು ಅಭಿಷೇಕ್ ಕ್ಲಿಫರ್ಡ್ ಸಲಹೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X