Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಪಟ್ಟಣದಲ್ಲಿ ಖೋಟಾ ನೋಟು...

ಉಪ್ಪಿನಂಗಡಿ: ಪಟ್ಟಣದಲ್ಲಿ ಖೋಟಾ ನೋಟು ದಂಧೆ

ವಾರ್ತಾಭಾರತಿವಾರ್ತಾಭಾರತಿ23 March 2016 7:25 PM IST
share
ಉಪ್ಪಿನಂಗಡಿ: ಪಟ್ಟಣದಲ್ಲಿ ಖೋಟಾ ನೋಟು ದಂಧೆ

ಉಪ್ಪಿನಂಗಡಿ: ಪಟ್ಟಣದಲ್ಲಿ ಖೋಟಾ ನೋಟು ದಂಧೆ ಅವ್ಯಾಹತವಾಗಿದ್ದು, ದಂಧೆಕೋರರು ಪೆಟ್ರೋಲ್ ಪಂಪ್, ಬಾರ್ ಸೇರಿದಂತೆ ದೊಡ್ಡ ಪ್ರಮಾಣದ ವ್ಯಾಪಾರದ ಭರಾಟೆಯಿರುವ ಕಡೆ ಇದರ ಚಲಾವಣೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
500, 1000 ಮುಖಬೆಲೆಯ ಖೋಟಾ ನೋಟುಗಳು ಹೆಚ್ಚು ಚಲಾವಣೆಯಾಗುತ್ತಿವೆ. ಇಲ್ಲಿನ ಪೆಟ್ರೋಲ್ ಪಂಪ್‌ವೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದವರ್ಯಾರೋ ಖೋಟಾ ನೋಟುಗಳನ್ನು ನೀಡಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಪೆಟ್ರೋಲ್ ಪಂಪ್‌ನವರಿಗೆ ಇದು ಖೋಟಾ ನೋಟುಗಳೆಂದು ಗೊತ್ತಾಗಿದ್ದು ಮಾತ್ರ ಬ್ಯಾಂಕ್‌ಗೆ ನಗದು ತುಂಬಲು ತೆರಳಿದಾಗ. ಇವರ ತಂದ ನಗದು ಬಂಡಲ್‌ನಲ್ಲಿ 1000 ಹಾಗೂ 500ರ ಮುಖಬೆಲೆಯ ಕೆಲವು ನೋಟುಗಳು ನಕಲಿಯಾಗಿತ್ತು. ಇದನ್ನು ಪರಿಶೀಲಿಸಿದ ಬ್ಯಾಂಕ್ ಸಿಬ್ಬಂದಿ ಅದಕ್ಕೆ ಸೀಲ್ ಹೊಡೆದು, ಹರಿದು ಹಾಕಿದ್ದಾರೆ.
ಖೋಟಾ ನೋಟು ಚಲಾವಣೆಯ ದಂಧೆಯಲ್ಲಿ ಭಾಗಿಯಾಗಿರುವವರು ಚಿಲ್ಲರೆ ಕೇಳುವ ನೆಪದಲ್ಲಿ ಅಥವಾ ಗ್ರಾಹಕರ ಸೋಗಿನಲ್ಲಿ ಅಂಗಡಿ ಮಾಲಕರನ್ನು ಏಮಾರಿಸುತ್ತಿದ್ದು, ಸರಿಯಾಗಿ ಪರಿಶೀಲಿಸದೆ 1000 ಹಾಗೂ 500ರ ನೋಟುಗಳನ್ನು ಪಡೆದರೆ ಮೋಸ ಹೋಗುವುದು ಖಂಡಿತ. ಈ ಖೋಟಾ ನೋಟುಗಳನ್ನು ಮೇಲ್ನೋಟಕ್ಕೆ ನೋಡಿದಾಗ ಅಸಲಿ ನೋಟಿನಂತೆಯೇ ಕಂಡು ಬರುತ್ತಿದ್ದು, ಸರಿಯಾಗಿ ಪರೀಕ್ಷಿಸಿದಾಗ ಮಾತ್ರ ಇದರ ನಿಜ ಬಣ್ಣ ತಿಳಿಯಲು ಸಾಧ್ಯ. ಕೆಲವೊಮ್ಮೆ ಖೋಟಾ ನೋಟುಗಳ ನಿಜ ಬಣ್ಣ ಕಣ್ಣೋಟದ ಪರೀಕ್ಷೆಯಲ್ಲಿಯೂ ಬಯಲಾಗುವುದಿಲ್ಲ. ಇದರ ಪರೀಕ್ಷೆಗೆ ನೋಟುಗಳನ್ನು ಪರಿಶೀಲಿಸುವ ಯಂತ್ರವೇ ಬೇಕಾಗುತ್ತದೆ. ಹಾಗಾಗಿ ಜನಸಾಮಾನ್ಯರು ಹೆಚ್ಚಾಗಿ ವಂಚನೆಗೀಡಾಗುತ್ತಾರೆ. ಹೆಚ್ಚಿನವರು ಖೋಟಾ ನೋಟಿನಿಂದ ವಂಚನೆಗೊಳಗಾದರೂ, ಬಳಿಕ ಪೊಲೀಸ್ ತನಿಖೆಯ ಭಯದಿಂದ ಅದನ್ನು ಯಾರಿಗೂ ತಿಳಿಸದೆ ಮುಚ್ಚಿಡುವುದೇ ಹೆಚ್ಚು. ಇದರಿಂದಾಗಿ ಖೋಟಾ ನೋಟು ದಂಧೆಕೋರರು ಸುಲಭವಾಗಿ ಪಾರಾಗುವಂತಾಗಿದೆ.
ಒಟ್ಟಿನಲ್ಲಿ 1000, 500 ರೂಪಾಯಿ ಪಡೆದುಕೊಳ್ಳುವಾಗ ವರ್ತಕರು ಹಾಗೂ ಜನಸಾಮಾನ್ಯರು ಹೆಚ್ಚು ಜಾಗೃತೆವಹಿಸುವ ಅಗತ್ಯವಿದ್ದು, ಇಲ್ಲದಿದ್ದರೆ ಖೋಟಾ ನೋಟು ಕೈವಶವಾಗುವ ಸಂಭವವಿದೆ. ಇನ್ನೊಂದೆಡೆ ಪೊಲೀಸರು ಕೂಡಾ ಹೆಚ್ಚಿನ ಮುತುವರ್ಜಿ ವಹಿಸಿ ಖೋಟಾ ನೋಟಾ ದಂಧೆಕೋರ ಜಾಲವನ್ನು ಬೇಧಿಸುವ ಅಗತ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X