Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನಿಯಮ ಉಲ್ಲಂಘಿಸಿ ಮ್ಯೂಚುವಲ್...

‘ನಿಯಮ ಉಲ್ಲಂಘಿಸಿ ಮ್ಯೂಚುವಲ್ ಫಂಡ್‌ಗಳಲ್ಲಿ ಬಿಡಿಎ ಹೂಡಿಕೆ’

ಭಾರತದ ಲೆಕ್ಕನಿಯಂತ್ರಕರು-ಮಹಾ ಲೆಕ್ಕಪರಿಶೋಧಕರ ವರದಿ

ವಾರ್ತಾಭಾರತಿವಾರ್ತಾಭಾರತಿ23 March 2016 11:44 PM IST
share

ಬೆಂಗಳೂರು, ಮಾ.23: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ವು ತನ್ನ ಹೆಚ್ಚುವರಿ ಹಣವನ್ನು ನಿರ್ವಹಿಸಲು ಯಾವುದೇ ಹೂಡಿಕೆ ನೀತಿಯನ್ನು ಹೊಂದಿರಲಿಲ್ಲ. ರಚಿತಗೊಂಡ ಹೂಡಿಕೆ ಸಮಿತಿಯ ಕಾರ್ಯನಿರ್ವಹಿಸಲು ಯಾವುದೇ ಮಾರ್ಗದರ್ಶಿ ಸೂತ್ರಗಳೂ ಇರಲಿಲ್ಲ. 1999-2014ರ ಅವಧಿಯಲ್ಲಿನ ಮೂವರು ಹಣಕಾಸು ಸದಸ್ಯರು ಹಣಕಾಸಿನ ಔಚಿತ್ಯತೆಯ ಎಲ್ಲ ಸಿದ್ಧಾಂತಗಳನ್ನು ಉಲ್ಲಂಘಿಸಿದ್ದರು ಎಂಬ ಅಂಶ ಬಯಲಿಗೆ ಬಂದಿದೆ.

ಬುಧವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2016ನೆ ಸಾಲಿನ ಸಾಮಾನ್ಯ ಮತ್ತು ಸಾಮಾಜಿಕ ವಲಯದ ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ.

ರಾಜ್ಯ ಹಣಕಾಸು ಸಂಹಿತೆಯ ಅನ್ವಯ ಹಣಕಾಸಿನ ದಾಖಲೆಗಳನ್ನು ನಿರ್ವಹಿಸಲು, ಆಂತರಿಕ ಲೆಕ್ಕಪರಿಶೋಧನೆಯನ್ನು ನಡೆಸಲು ಹಾಗೂ ಹಣಕಾಸು ವಿಭಾಗದಲ್ಲಿ ಸಿಬ್ಬಂದಿಯ ಕರ್ತವ್ಯಗಳನ್ನು ವಿಂಗಡಿಸುವ ಮೂಲಕ ಸೂಕ್ತ ಪರಿಶೀಲನೆ ಮತ್ತು ಸಮತೋಲನವನ್ನು ಖಚಿತಪಡಿಸಿಕೊಳ್ಳಲು ವಿಫಲರಾಗಿದ್ದರು.

ಎರಡನೆ ದರ್ಜೆ ಗುಮಾಸ್ತರು, ಬ್ಯಾಂಕುಗಳು ಮತ್ತು ದಲ್ಲಾಳಿ ಸಂಸ್ಥೆಗಳು ವಿವಿಧ ಹಣಕಾಸಿನ ಅಕ್ರಮಗಳನ್ನು ಮಾಡಲು ಒಬ್ಬರಿಗೊಬ್ಬರು ನೆರವು, ಪ್ರೋತ್ಸಾಹ ಮತ್ತು ಸಹಕಾರ ನೀಡಿ ಭಾಗವಹಿಸಿದವು. ಬಿಡಿಎ ಹಣವನ್ನು ಮ್ಯೂಚುವಲ್ ಫಂಡ್‌ಗಳಿಗೆ ಮಾರ್ಗಪಲ್ಲಟ ಮಾಡಲಾಯಿತು ಮತ್ತು ಅನಧಿಕೃತ ಬ್ಯಾಂಕ್ ಖಾತೆಗಳನ್ನು ತೆರೆದು, ನಿರ್ವಹಿಸಿ ಇತರೆ ಸಂಸ್ಥೆಗಳಿಗೆ ಹಣವನ್ನು ವರ್ಗಾಯಿಸಲಾಯಿತು.

ಕಾಲ್ಪನಿಕ ಅಲ್ಪಾವಧಿ ಠೇವಣಿಗಳನ್ನು ಸೃಷ್ಟಿಸಲಾಯಿತು, ಹಣಕಾಸಿನ ವಿವರಣೆಗಳನ್ನು ದಾರಿ ತಪ್ಪಿಸುವಂತೆ ತಯಾರಿಸಲಾಯಿತು ಮತ್ತು ಎಲ್ಲ ವಹಿವಾಟುಗಳ ಜಾಡನ್ನು ನಾಶಪಡಿಸಲಾಯಿತು. ಮ್ಯೂಚುವಲ್‌ಫಂಡ್‌ಗಳಲ್ಲಿ ಹೂಡಿಕೆಗಾಗಿ ಮತ್ತು ಇತರೆ ಸಂಸ್ಥೆಗಳಿಗೆ ಮಾಡಿದ ಅನಧಿಕೃತ ಹಣದ ವರ್ಗಾವಣೆಯು ಬಿಡಿಎಗೆ 205.85 ಕೋಟಿ ರೂ.ನಷ್ಟದಲ್ಲಿ ಪರಿಣಮಿಸಿತು. ಬಿಎಂಆರ್‌ಸಿಎಲ್, ಕಾಫಿ ಬೋರ್ಡ್ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯ ಕಟ್ಟಡ ನಿರ್ಮಾಣ ಸಂಘಕ್ಕೆ ಮಾಡಿದ 6.17 ಕೋಟಿ ರೂ.ಅನಧಿಕೃತ ವರ್ಗಾವಣೆಯು ಬಿಡಿಎ ಹಣದ ದುರುಪಯೋಗದ ಪ್ರಕರಣಗಳಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X